ನವದೆಹಲಿ: ಲಿವ್‌ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಯೂಟ್ಯೂಬರ್ ಜೋಡಿಯೊಂದು ಅಪಾರ್ಟ್‌ಮೆಂಟ್‌ನ 7ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹರಿಯಾಣದ ಬಹದ್ದೂರ್‌ಗಢದಲ್ಲಿ ಗಾರ್ವಿತ್ (25) ನಂದಿನಿ (22) ಆತ್ಮಹತ್ಯೆಗೆ ಶರಣಾಗಿದ್ದಾರೆ.  


COMMERCIAL BREAK
SCROLL TO CONTINUE READING

ಗಾರ್ವಿತ್ ಮತ್ತು ನಂದಿನಿ ಇಬ್ಬರೂ ಯೂಟ್ಯೂಬ್‌ ಕಂಟೆಂಟ್‌ ಕ್ರಿಯೇಟರ್ಸ್‌ ಆಗಿದ್ದರು. ತಮ್ಮದೇ ಚಾನೆಲ್ ನಡೆಸುತ್ತಿದ್ದರು. ಯೂಟ್ಯೂಬ್ ಮತ್ತು ಫೇಸ್‌ಬುಕ್‌ನಲ್ಲಿ ಶಾರ್ಟ್‌ ಮೂವಿಗಳನ್ನು ತಯಾರಿಸಿ ಅಪ್‌ಲೋಡ್‌ ಮಾಡುತ್ತಿದ್ದರು. ಈ ಮೂಲಕ ಲಕ್ಷಾಂತರ ಫಾಲೋವರ್ಸ್‌ಗಳನ್ನು ಸಹ ಸಂಪಾದಿಸಿದ್ದರು.


ಇದನ್ನೂ ಓದಿ: Bourn Vita : ಆರೋಗ್ಯ ಪಾನೀಯ ಲಿಸ್ಟ್ ನಿಂದ "ಬೋರ್ನ್ ವೀಟಾ" ಔಟ್ : ಕೇಂದ್ರ ಆದೇಶ


ಕೆಲ ದಿನಗಳ ಹಿಂದಷ್ಟೇ ಈ ಜೋಡಿ ಡೆಹ್ರಾಡೂನ್‌ನಿಂದ ಬಹದ್ದೂರ್‌ಗಢಕ್ಕೆ ಬಂದಿದ್ದರು. ರುಹೀಲಾ ರೆಸಿಡೆನ್ಸಿಯ 7ನೇ ಮಹಡಿಯಲ್ಲಿ ಫ್ಲಾಟ್ ಬಾಡಿಗೆಗೆ ಪಡೆದಿದ್ದರು. ತಮ್ಮ ಐವರು ಸಹ ಸದಸ್ಯರೊಂದಿಗೆ ಅಲ್ಲಿಯೇ ವಾಸವಾಗಿದ್ದರು. ಆದರೆ ಶನಿವಾರ(ಏಪ್ರಿಲ್‌ 13) ಮುಂಜಾನೆ 6 ಗಂಟೆ ವೇಳೆಗೆ ಇಬ್ಬರು ಅಪಾರ್ಟ್‌ಮೆಂಟ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂತಾ ಪೊಲೀಸರು ತಿಳಿಸಿದ್ದಾರೆ.


ಕಿರುಚಿತ್ರದ ಶೂಟಿಂಗ್ ಮುಗಿಸಿ ತಡವಾಗಿ ಮನೆಗೆ ಮರಳಿದ್ದ ಈ ಜೋಡಿ ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಡಿದ್ದರು. ಬಳಿಕ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂತಾ ಪೊಲೀಸರು ಹೇಳಿದ್ದಾರೆ.


ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಕೊಳವೆ ಬಾವಿ ಅಪಘಾತ : ರಕ್ಷಣಾ ಕಾರ್ಯಾಚರಣೆ ಆರಂಭ


ಘಟನೆ ಕುರಿತು ಮಾಹಿತಿ ಪಡೆದುಕೊಂಡಿರುವ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು. ಇಬ್ಬರೂ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಹಿಂದಿನ ಕಾರಣವೇನು ಅನ್ನೋದರ ಬಗ್ಗೆ ತನಿಖೆ ನಡೆಯುತ್ತಿದೆ. ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿದ್ದು, ಫೋರೆನ್ಸಿಕ್ಸ್ ತಂಡವು ಸಾಕ್ಷ್ಯಗಳನ್ನು ಸಂಗ್ರಹಿಸಿದೆ ಅಂತಾ ಪೊಲೀಸರು ಮಾಹಿತಿ ನೀಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.