ಬೆಂಗಳೂರು: ಅಲೆಮಾರಿಗಳ ಸೋಗಿನಲ್ಲಿ ನೆಲ್ಲೂರಿನಿಂದ ಮಾದಕ ವಸ್ತು ಹ್ಯಾಶೀಶ್ ಆಯಿಲ್ ಸಪ್ಲೈ ಮಾಡುತ್ತಿದ್ದ ಅಂತರ್ ರಾಜ್ಯ ಡ್ರಗ್‌ ಪೆಡ್ಲರ್‌ಗಳನ್ನು ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಗನ್ ಹಿಡಿದು ಬೈಕ್ ನಲ್ಲಿ ಓಡಾಡಿದ ಪುಂಡರು


ಪ್ರಕರಣ ಮಾಸ್ಟರ್ ಮೈಂಡ್ ಬೆಂಗಳೂರಿನ ಪ್ರತಿಷ್ಠಿತ ಪಬ್ ಗಳಲ್ಲಿ ಡಿಜೆಯಾಗಿ‌ ಕೆಲಸ ಮಾಡುತ್ತಿದ್ದ ಜೂಡ್ ಹ್ಯಾರಿಸ್, ಶ್ರೀನಿವಾಸ್, ವಂತಲಾ ಪ್ರಹ್ಲಾದ್, ಮಲ್ಲೇಶ್ವರಿ, ಸತ್ಯಾವತಿ ಎಂಬುವವರನ್ನು ಬಂಧಿಸಿದ್ದಾರೆ. ಆರೋಪಿಗಳು ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಅರಕು ಹಾಗೂ ಸೆಂಥಿಪಲ್ಲಿ ಅರಣ್ಯಕ್ಕೆ ಅಧಿಕಾರಿಗಳ ಕಣ್ಣು ತಪ್ಪಿಸಿ ನುಗ್ಗುತ್ತಿದ್ದರು. 


ಕಾಡಿನಲ್ಲಿ 30 ಕಿಲೋ ಮೀಟರ್ ಸಂಚರಿಸಿ ಗಾಂಜಾ ಬೆಳೆದು ಹ್ಯಾಶೀಶ್ ಆಯಿಲ್ ತಯಾರಿಸುತ್ತಿದ್ದರು. ಕೊಚ್ಚಿನ್, ಚೆನ್ನೈ, ಹೈದರಾಬಾದ್, ಮುಂಬೈ ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಮಾರಾಟ ಜಾಲವನ್ನು ಹೊಂದಿದ್ದರು. ಆರೋಪಿಗಳು ದಂಧೆಯ ಯವುದೇ ಸಾಕ್ಷ್ಯ ಸಿಗಬಾರದು ಅಂತಾ ಮೊಬೈಲ್ ಫೋನ್, ಗುರುತಿನ ಚೀಟಿ ಬಳಸುತ್ತಿರಲಿಲ್ಲ.


ಇದನ್ನೂ ಓದಿ: ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ವಿರುದ್ದ ಸಿಎಂಗೆ ದೂರು :ವರ್ಗಾವಣೆಗೆ ಮನವಿ


ಈ ಗ್ಯಾಂಗ್ ಬೆನ್ನು ಬಿದ್ದಿದ್ದ ಸಿಸಿಬಿ ಅಧಿಕಾರಿಗಳು ಬೆಂಗಳೂರಿನಲ್ಲಿ ಡಿಜೆ ಜೂಡ್ ಬಂಧಿಸಿ ವಿಚಾರಣೆ ನಡೆಸಿದಾಗ ಉಳಿದವರ ಹೆಸರನ್ನು ಬಾಯ್ಬಿಟ್ಟಿದ್ದಾನೆ.ಸದ್ಯ ಐವರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ 4 ಕೋಟಿ ಮೌಲ್ಯದ 5 ಕೆಜಿ ಹ್ಯಾಶೀಶ್ ಆಯಿಲ್, 6 ಕೆಜಿ ಗಾಂಜಾ ವಶಪಡಿಸಿಕೊಂಡು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.