ನವದೆಹಲಿ: ಬಿಹಾರದ ಸರನ್ ಜಿಲ್ಲೆಯ ಖೈರಾ ಪೊಲೀಸ್ ಠಾಣೆ ವ್ಯಾಪ್ತಿಯ ಖುದಾಯಿ ಬಾಗ್ ಗ್ರಾಮದಲ್ಲಿ ಭಾನುವಾರ ಪಟಾಕಿ ಉದ್ಯಮಿಯೊಬ್ಬರ ಮನೆಯಲ್ಲಿ ಸ್ಫೋಟ ಸಂಭವಿಸಿ ಆರು ಜನರು ಸಾವನ್ನಪ್ಪಿದ್ದಾರೆ.


COMMERCIAL BREAK
SCROLL TO CONTINUE READING

ಉದ್ಯಮಿಯನ್ನು ಶಬೀರ್ ಹುಸೇನ್ ಎಂದು ಗುರುತಿಸಲಾಗಿದೆ. ಸ್ಫೋಟದಿಂದಾಗಿ ಮನೆಯ ಒಂದು ಭಾಗ ಸ್ಫೋಟಗೊಂಡಿದ್ದು, ಉಳಿದ ಭಾಗಕ್ಕೆ ಬೆಂಕಿ ಹೊತ್ತಿಕೊಂಡಿದೆ. ಪೊಲೀಸರ ಪ್ರಕಾರ, ಮನೆಯು ನದಿಯ ದಡದಲ್ಲಿದೆ, ಮನೆಯ ಪ್ರಮುಖ ಭಾಗವು ಕುಸಿದಿದೆ.ಎಂಟು ಮಂದಿ ಅವಶೇಷಗಳಡಿ ಸಿಲುಕಿದ್ದಾರೆ. ಗಾಯಗೊಂಡ ಎಂಟು ಮಂದಿಯನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.ಈ ಗ್ರಾಮವು ಜಿಲ್ಲಾ ಕೇಂದ್ರ ಛಾಪ್ರಾದಿಂದ ಸುಮಾರು 30 ಕಿಮೀ ದೂರದಲ್ಲಿದೆ ಎನ್ನಲಾಗಿದೆ.


ಇದನ್ನೂ ಓದಿ: BY Vijayendra : ಪಿಎಸ್ಐ ಹಗರಣ ಕಾಂಗ್ರೆಸ್ ಪಕ್ಷದ ಕೂಸು : ಬಿವೈ  ವಿಜಯೇಂದ್ರ


"ಛಾಪ್ರಾದಲ್ಲಿ ಸ್ಫೋಟದಿಂದಾಗಿ ಮನೆ ಕುಸಿದು ಆರು ಜನರು ಸಾವನ್ನಪ್ಪಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಸ್ಫೋಟದ ಹಿಂದಿನ ಕಾರಣವನ್ನು ನಾವು ತನಿಖೆ ಮಾಡುತ್ತಿದ್ದೇವೆ. ವಿಧಿವಿಜ್ಞಾನ ತಂಡ ಮತ್ತು ಬಾಂಬ್ ನಿಷ್ಕ್ರಿಯ ದಳವನ್ನು ಸಹ ಕರೆಯಲಾಗಿದೆ" ಎಂದು ಸರನ್ ಎಸ್ಪಿ ಸಂತೋಷ್ ಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: Mallikarjun Kharge : 'ಚುನಾವಣೆ ಮುನ್ನೆವೇ ನಾನು ಸಿಎಂ, ನಾನು ಸಿಎಂ ಎನ್ನುವುದು ಸರಿಯಲ್ಲಾ'


ಪೊಲೀಸರ ಪ್ರಕಾರ, ಸ್ಫೋಟ ಸಂಭವಿಸಿದ ಮನೆಯೊಳಗೆ ಪಟಾಕಿಗಳನ್ನು ತಯಾರಿಸಲಾಯಿತು ಮತ್ತು ಒಂದು ಗಂಟೆಗಳ ಕಾಲ ಸ್ಫೋಟಗಳು ಕೇಳಿಬಂದವು ಎನ್ನಲಾಗಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.