ಸರಸಕ್ಕೆ ಬಾ.. ಎಂದು ಜಾಲತಾಣದಲ್ಲಿ ಗಾಳ : ಹನಿಟ್ರ್ಯಾಪ್ ಮಾಡಿದ್ದ ಇಬ್ಬರ ಬಂಧನ
ಸೋಷಿಯಲ್ ಮೀಡಿಯಾದಲ್ಲಿ ಪರಿಚಯವಾದವರನ್ನ ನಂಬಿ ಭೇಟಿಗೆ ಆಹ್ವಾನಿಸುವ ಮುನ್ನ ಸ್ವಲ್ಪ ಎಚ್ಚರವಾಗಿದ್ದರೆ ಒಳಿತು. ಆ್ಯಪ್ ಮೂಲಕ ವ್ಯಕ್ತಿಗೆ ಗಾಳ ಹಾಕಿ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಸೋಲದೇವನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸುನಿಲ್ ಹಾಗೂ ಲಕ್ಷ್ಮಿಪ್ರಿಯ ಬಂಧಿತ ಆರೋಪಿಗಳು. ಮೋಸ ಹೋದ 26 ವರ್ಷದ ವ್ಯಕ್ತಿಯೊಬ್ಬ ನೀಡಿದ ದೂರಿನನ್ವಯ ಆರೋಪಿಗಳನ್ನ ಬಂಧಿಸಲಾಗಿದೆ.
ಬೆಂಗಳೂರು : ಸೋಷಿಯಲ್ ಮೀಡಿಯಾದಲ್ಲಿ ಪರಿಚಯವಾದವರನ್ನ ನಂಬಿ ಭೇಟಿಗೆ ಆಹ್ವಾನಿಸುವ ಮುನ್ನ ಸ್ವಲ್ಪ ಎಚ್ಚರವಾಗಿದ್ದರೆ ಒಳಿತು. ಆ್ಯಪ್ ಮೂಲಕ ವ್ಯಕ್ತಿಗೆ ಗಾಳ ಹಾಕಿ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಸೋಲದೇವನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸುನಿಲ್ ಹಾಗೂ ಲಕ್ಷ್ಮಿಪ್ರಿಯ ಬಂಧಿತ ಆರೋಪಿಗಳು. ಮೋಸ ಹೋದ 26 ವರ್ಷದ ವ್ಯಕ್ತಿಯೊಬ್ಬ ನೀಡಿದ ದೂರಿನನ್ವಯ ಆರೋಪಿಗಳನ್ನ ಬಂಧಿಸಲಾಗಿದೆ.
ಆ್ಯಪ್ ಮೂಲಕ ದಿವ್ಯಾ ಎಂಬ ಹೆಸರಿನಲ್ಲಿ ಪರಿಚಯವಾಗಿದ್ದವಳ ಜೊತೆ ಸಲುಗೆ ಬೆಳೆಸಿದ್ದ ದೂರುದಾರ ವ್ಯಕ್ತಿ ಒಂದಷ್ಟು ಫೋಟೋ, ವಿಡಿಯೋ ವಿನಿಮಯವಾದ ಬಳಿಕ ಜನವರಿ 4ರಂದು ತನ್ನ ಮನೆಗೆ ಆಹ್ವಾನಿಸಿದ್ದ. ದಿವ್ಯಾ ಎಂಬ ಹೆಸರಿನಲ್ಲಿ ಮಾತನಾಡಿದ್ದ ಆರೋಪಿ ಸುನೀಲ್ 'ನಾನು ಇವತ್ತು ಬ್ಯುಸಿ, ನನ್ನ ಸಹೋದರಿ ಲಕ್ಷ್ಮಿಪ್ರಿಯಳನ್ನ ಕಳಿಸುತ್ತೇನೆ' ಎಂದಿದ್ದ. ಅದರಂತೆ ದೂರುದಾರ ವ್ಯಕ್ತಿ ಆರೋಪಿ ಲಕ್ಷ್ಮಿಪ್ರಿಯಳನ್ನ ಕೊಡುಗೆ ತಿರುಮಲಾಪುರದ ತನ್ನ ಮನೆಗೆ ಕರೆದೊಯ್ದಿದ್ದ.
ಇದನ್ನೂ ಓದಿ: ಕರ್ನಾಟಕ ವಿಧಾನಸಭೆ ಚುನಾವಣೆ-2023: ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿ ಬಿಡುಗಡೆ
ಮನೆಯೊಳಗೆ ಹೋಗುತ್ತಿದ್ದಂತೆ ಎಂಟ್ರಿಯಾಗಿದ್ದ ಸುನೀಲ್, ದೂರುದಾರನಿಗೆ 'ನೀನು ಲಕ್ಷ್ಮಿಪ್ರಿಯಳನ್ನ ಜೊತೆಯಲ್ಲಿ ಕರೆ ತಂದಿರುವ ವಿಡಿಯೋ, ಫೋಟೋ ಪೊಲೀಸರಿಗೆ ಕೊಡುವುದಾಗಿ ಬೆದರಿಸಿದ್ದ. ಬಳಿಕ ಇಬ್ಬರೂ ಆರೋಪಿಗಳು ದೂರುದಾರನ ಮನೆಯಲ್ಲಿದ್ದ 45 ಗ್ರಾಂ ಚಿನ್ನಾಭರಣ, ನಗದು ಕಿತ್ತುಕೊಂಡು ಬೈಕಿನಲ್ಲಿ ಪರಾರಿಯಾಗಿದ್ದರು. ಮೋಸ ಹೋದ ವ್ಯಕ್ತಿ ನೀಡಿರುವ ದೂರಿನನ್ವಯ ಕಾರ್ಯಾಚರಣೆ ಕೈಗೊಂಡ ಸೋಲದೇವನಹಳ್ಳಿ ಪೊಲೀಸರು ಇಬ್ಬರನ್ನೂ ಬಂಧಿಸಿ 2.2 ಲಕ್ಷ ಮೌಲ್ಯದ 45 ಗ್ರಾಂ ಚಿನ್ನಾಭರಣ 1 ಮೊಬೈಲ್ ಹಾಗೂ 2 ದ್ವಿಚಕ್ರ ವಾಹನಗಳನ್ನ ವಶಕ್ಕೆ ಪಡೆಯಲಾಗಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.