Heartbreaking Suicide Note by Niharika in Kota : ರಾಜಸ್ಥಾನದ ಕೋಟಾದಲ್ಲಿ JEE ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸಾವಿಗೂ ಮುನ್ನ ಆ ವಿದ್ಯಾರ್ಥಿನಿ ಬರೆದಿಟ್ಟಿರುವ ಡೇತ್‌ನೋಟ್‌ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದ್ದು, ಅನೇಕರಿಗೆ ಕಣ್ಣೀರು ತರಿಸಿದೆ.


COMMERCIAL BREAK
SCROLL TO CONTINUE READING

ʼನನ್ನಿಂದ ಜೆಇಇ (JEE) ಪರೀಕ್ಷೆ ಪಾಸ್ ಮಾಡಲು ಸಾಧ್ಯವಿಲ್ಲ, ನಾನು ಸೋತಿದ್ದೇನೆ' ಅಂತಾ ಪತ್ರ ಬರೆದಿಟ್ಟು ಕೋಟಾದಲ್ಲಿರುವ ತನ್ನ ಮನೆಯಲ್ಲೇ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಜಲಾವರ್ ಜಿಲ್ಲೆಯ ನಿವಾಸಿ ನಿಹಾರಿಕಾ ಸಿಂಗ್ ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ತನ್ನ ಡೆತ್‌ನೋಟ್‌ನಲ್ಲಿ, 'ನಾನು ಸೋತಿರುವವಳು. ನಾನೊಬ್ಬ ಕೆಟ್ಟ ಮಗಳು, ಮಮ್ಮಿ-ಪಪ್ಪಾ ಕ್ಷಮಿಸಿ, ಇದೇ ನನ್ನ ಕೊನೆಯ ಆಯ್ಕೆ' ಎಂದು ಡೆತ್‌ನೋಟ್‌ನಲ್ಲಿ ಬರೆದುಕೊಂಡಿದ್ದಾಳೆ.


ಇದನ್ನೂ ಓದಿ: 9ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ


ಕೋಟಾದ ಬೋರ್ಖೇಡಾ ಪ್ರದೇಶದಲ್ಲಿ ತನ್ನ ಕುಟುಂಬದೊಂದಿಗೆ ವಾಸವಿದ್ದ ನಿಹಾರಿಕಾ, ಜನವರಿ 30 ಮತ್ತು 31ರಂದು ಆಕೆ ಐಐಟಿ ಜೆಇಇ ಪರೀಕ್ಷೆ ಬರೆಯಬೇಕಿತ್ತು. ಇದಕ್ಕೂ ೨ ದಿನಗಳ ಮೊದಲೇ (ಜನವರಿ 29) ಮನೆಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಮಾಹಿತಿ ಪಡೆದ ಕುಟುಂಬಸ್ಥರು ಕೂಡಲೇ ಪೊಲೀಸರಿಗೆ ಕರೆ ಮಾಡಿ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ವೈದ್ಯರು ಆಕೆ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. 


ವಿದ್ಯಾರ್ಥಿನಿ ತನ್ನ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೋಚಿಂಗ್ ನಗರಿ ಕೋಟಾದಲ್ಲಿ ಈ ವರ್ಷ ನಡೆದ ೨ನೇ ಆತ್ಮಹತ್ಯೆ ಪ್ರಕರಣ ಇದಾಗಿದೆ. ಕೆಲ ದಿನಗಳ ಹಿಂದಷ್ಟೇ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಎಷ್ಟೇ ಪ್ರಯತ್ನ ಪಟ್ಟರೂ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಕಡಿಮೆಯಾಗುತ್ತಿಲ್ಲ. ಸದ್ಯ ಬೋರ್ಖೇಡ ಠಾಣೆ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಡೆತ್‌ನೋಟ್ ನೋಡಿದರೆ ವಿದ್ಯಾರ್ಥಿನಿ ಅತಿಯಾದ ಒತ್ತಡದಿಂದ ಬಳಲುತ್ತಿದ್ದಳು ಎಂದು ಕಾಣಿಸುತ್ತದೆ ಅಂತಾ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 


ಇದನ್ನೂ ಓದಿ: ಅಯೋಧ್ಯೆಯಲ್ಲಿ ಮಾತ್ರವಲ್ಲ, ದೇಶದ ಈ ನಗರಗಳಲ್ಲಿಯೂ ಶ್ರೀರಾಮನ ಭವ್ಯವಾದ ದೇವಾಲಯಗಳಿವೆ!


ವಿದ್ಯಾರ್ಥಿಗಳಿಗೆ ಟಿಪ್ಸ್‌ ನೀಡಿದ್ದ ಪ್ರಧಾನಿ ಮೋದಿ


ಸೋಮವಾರ ಸ್ವತಃ ಪ್ರಧಾನಿ ಮೋದಿ ಅವರು SSLC & PUC ಪರೀಕ್ಷೆಗಳಿಗೆ ಮುನ್ನ ಪರೀಕ್ಷೆಗಳ ಕುರಿತು ಚರ್ಚಾ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಇದರಲ್ಲಿ ಪರೀಕ್ಷೆಗೂ ಮುನ್ನ ವಿದ್ಯಾರ್ಥಿಗಳಿಗೆ ಒತ್ತಡ ನಿವಾರಣೆಗೆ ಟಿಪ್ಸ್ ನೀಡಿ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದರು. 


ಇಂತಹ ಅಹಿತಕರ ಘಟನೆಗಳನ್ನು ತಡೆಯಲು ವಿದ್ಯಾರ್ಥಿಗಳ ಒತ್ತಡವನ್ನು ಕಡಿಮೆ ಮಾಡಲು ಕೋಚಿಂಗ್ ಸೆಂಟರ್‌ಗಳಿಗೆ ಕಳೆದ ವರ್ಷ ಅಂದಿನ ಅಶೋಕ್ ಗೆಹ್ಲೋಟ್ ಸರ್ಕಾರ ಮಾರ್ಗಸೂಚಿಗಳನ್ನು ನೀಡಿತ್ತು. ಕೇಂದ್ರವು ಕಳೆದ ವಾರ ಕೋಚಿಂಗ್ ಸೆಂಟರ್‌ಗಳಿಗೆ ಹಲವು ಮಾರ್ಗಸೂಚಿಗಳನ್ನು ಸಹ ಬಿಡುಗಡೆ ಮಾಡಿತ್ತು. ಇವುಗಳಲ್ಲಿ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳ ದಾಖಲಾತಿ ಮೇಲಿನ ನಿರ್ಬಂಧಗಳು ಮತ್ತು ವಿದ್ಯಾರ್ಥಿಗಳಿಗೆ ಒತ್ತಡರಹಿತವಾಗಿ ಪರೀಕ್ಷೆ ಎದುರಿಸುವ ಸಲಹೆ ಸೂಚನೆಗಳು ಸೇರಿವೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.