Sowjanya Case: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ; SIT ತನಿಖೆಗೆ ಆಗ್ರಹಿಸಿ ಪ್ರತಿಭಟನೆ!

Soujanya Case Protest For Justice: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದೆ. ಇದೀಗ ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿಯಿಂದ SIT ತನಿಖೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.

Written by - Zee Kannada News Desk | Last Updated : Jul 28, 2023, 02:42 PM IST
  • ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ
  • ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಪ್ರತಿಭಟನೆ
  • ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿಯಿಂದ ಪ್ರತಿಭಟನೆ
Sowjanya Case: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ; SIT ತನಿಖೆಗೆ ಆಗ್ರಹಿಸಿ ಪ್ರತಿಭಟನೆ! title=

ಬೆಂಗಳೂರು: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದೆ.ಯುವತಿಯ ಸಾವು ಕೊಲೆ ಸಂಬಂಧ ಕುಟುಂಬ ಮಾತ್ರವಲ್ಲದೇ ಹಲವಾರು ಘಂಟನೆಗಳು ನ್ಯಾಯಕ್ಕಾಗಿ ಕೆಲವು ದಿನಗಳಿಂದ ಮತ್ತೆ ಹತೋರಿಯುತ್ತಿದ್ದಾರೆ.

2012,ಅಕ್ಟೋಬರ್ 9 ರಂದು ನಡೆದಿದ್ದ ಸೌಜನ್ಯ ಹತ್ಯೆ ಕುರಿತಂತೆ ಇದೀಗ ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿಯಿಂದ ಫ್ರೀಡಂಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ೨೦ ಕ್ಕೂ ಹೆಚ್ಚು ಸಂಘಟನೆಗಳು ಆಗ್ರಹಿಸಿದ್ದಾರೆ. 

ಹತ್ಯೆ ಪ್ರಕರಣಕ್ಕೆ ನ್ಯಾಯ ಸಿಗದ ಹಿನ್ನಲೆ SIT ತನಿಖೆಗೆ ಆಗ್ರಹಿಸಿ ಧರಣಿ ಕುಳಿತ್ತಿವೆ. ಅಷ್ಟೇ ಅಲ್ಲದೇ ಇತ್ತಿಚೆಗೆ ಘಟನೆ ಸಂಬಂಧ ಸಂತೋಷ್ ರಾವ್ ಆರೋಪಿ ಎಂದು ಗುರುತಿಸಲಾಗಿತ್ತು. ಆದರೆ 11 ವರ್ಷಗಳ ತನಿಖೆ ಬಳಿಕ  ನಿರ್ದೋಷಿ ಅಂತ ತೀರ್ಪು ಬಂದಿದೆ.

ಇದನ್ನೂ ಓದಿ: ಡ್ಯಾಂ ಗಳಲ್ಲಿ ಇಂದಿನ ನೀರಿನ ಪ್ರಮಾಣ... ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್..!

ಹೀಗಾಗಿ ಸಂಘಟನೆಗಳು ಮತ್ತಷ್ಟು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. SIT ತನಿಖೆಗೆ ಆಗ್ರಹಿ ಪ್ರತಿಭಟನೆಗೆ ಸೌಜನ್ಯ ತಾಯಿ ಕುಸುಮಾವತಿ ಕೂಡ ಭಾಗಿಯಾಗಿದ್ದಾರೆ. ಈ ವೇಳೆ ಮಗಳನ್ನು ನೆನೆದು ಭಾವುಕರಾಗಿದ್ದಾರೆ. ಸದ್ಯ ಪ್ರಕರಣ ಸಂಬಂಧ ಸೌಜನ್ಯ ಅತ್ಯಾಚಾರ ಪ್ರಕರಣವನ್ನ ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ ಅಂತ ೩೦ ಕ್ಕೂ ಹೆಚ್ಚು ಪ್ರಗತಿಪರ ಸಂಘಟನೆಗಳು ನಗರದ ಫ್ರೀಡಂಪಾರ್ಕ್ ನಲ್ಲಿ ಪ್ರತಿಭಟನೆ ನಡೆಸ್ತಿದ್ದಾರೆ.

ಇದನ್ನೂ ಓದಿ: ಯಾವ ಡ್ಯಾಂನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹ ವಾಗಿದೆ ಗೊತ್ತಾ; ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್..!

ಈ ಪ್ರಕರಣವನ್ನ ಉನ್ನತಮಟ್ಟದ ತನಿಖೆಗೆ ವಹಿಸಬೇಕು. ಯಾರನ್ನೋ ಉಳಿಸುವ ಪ್ರಯತ್ನ ಆಗಬಾರದೆಂದು ಪ್ರತಿಭಟನೆಯಲ್ಲಿ ಭಾಗಿಯಾದ ಮಹಿಳೆಯರು ಕಿಡಿಕಾರಿದ್ರು. ಆದರೆ ರಾಜ್ಯ ಸರ್ಕಾರ ಈ ವಿಷಯ ಸಂಬಂಧ ಯಾವ ರೀತಿ ಕಾನೂನು ಕೈಗೊಳ್ಳುತ್ತದೆ ಎಂಬುವವುದನ್ನು ಕಾದು ನೋಡಬೇಕು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News