ಬೆಂಗಳೂರಿನ BMTC ಕೇಂದ್ರ ಕಚೇರಿಯಲ್ಲೇ ಸಿಬ್ಬಂದಿ ಆತ್ಮಹತ್ಯೆ..!

Suicide Case: ಆತ್ಮಹತ್ಯೆ ಮಾಡಿಕೊಂಡ ಮಹೇಶ್ ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿ ಮೂಲದವರು ಎಂದು ತಿಳಿದುಬಂದಿದೆ. ಮಹೇಶ್‌ ಅವರ ಆತ್ಮಹತ್ಯೆಗೆ ಕಾರಣ ಏನು ಅಂತಾ ತಿಳಿದುಬಂದಿಲ್ಲ.

Written by - Puttaraj K Alur | Last Updated : Jul 16, 2024, 11:30 PM IST
  • ಬೆಂಗಳೂರಿನ ಶಾಂತಿನಗರದ ಬಸ್ ನಿಲ್ದಾಣದ BMTC ಕೇಂದ್ರ ಕಚೇರಿಯಲ್ಲಿ ಸಿಬ್ಬಂದಿ ಆತ್ಮಹತ್ಯೆ
  • ಬಸ್ ನಿಲ್ದಾಣದ ೩ನೇ ಮಹಡಿಯ ಕಚೇರಿಯಲ್ಲಿ ಅಥಣಿ ಮೂಲದ ಮಹೇಶ್ ಆತ್ಮಹತ್ಯೆ ಶರಣು
  • ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ
ಬೆಂಗಳೂರಿನ BMTC ಕೇಂದ್ರ ಕಚೇರಿಯಲ್ಲೇ ಸಿಬ್ಬಂದಿ ಆತ್ಮಹತ್ಯೆ..! title=
BMTC ಕೇಂದ್ರ ಕಚೇರಿಯಲ್ಲಿ ಸಿಬ್ಬಂದಿ ಆತ್ಮಹತ್ಯೆ!

Staff commits suicide at BMTC head office: ಬೆಂಗಳೂರಿನ ಶಾಂತಿನಗರದ ಬಸ್ ನಿಲ್ದಾಣದ ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿಯೇ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬಸ್ ನಿಲ್ದಾಣದ ೩ನೇ ಮಹಡಿಯ ಕಚೇರಿಯಲ್ಲಿ ಮಹೇಶ್ (42) ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಮಹೇಶ್‌ ಅವರ ಆತ್ಮಹತ್ಯೆಗೆ ಕಾರಣ ಏನು ಅಂತಾ ತಿಳಿದುಬಂದಿಲ್ಲ. ಆತ್ಮಹತ್ಯೆ ಮಾಡಿಕೊಂಡ ಮಹೇಶ್ ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿ ಮೂಲದವರು ಎಂದು ತಿಳಿದುಬಂದಿದೆ. ಬೆಂಗಳೂರಿನ ಇಡಿ ಕಚೇರಿ ಪಕ್ಕದಲ್ಲಿರುವ ಬಿಎಂಟಿಸಿ ಕಚೇರಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. 

ಇದನ್ನೂ ಓದಿ: ಕಾಂಗ್ರೆಸ್ ಶಾಸಕ ರಿಜ್ವಾನ್‌ ಅರ್ಷದ್‌ ಮಾತಿಗೆ ಎಚ್.ಡಿ.ರೇವಣ್ಣ ಆಕ್ರೋಶ!

ಸೋಮವಾರ ಬೆಳಗ್ಗೆ ಸೆಲ್ಯೂರಿಟಿ ಗಾರ್ಡ್ ಹತ್ತಿರ ಮಹೇಶ್‌ ಅವರು ರೆಕಾರ್ಡ್ಸ್ ರೂಮಿನ ಕೀಯನ್ನು ಪಡೆದುಕೊಂಡಿದ್ದರಂತೆ. ನಂತರ ಅವರು ರೆಕಾರ್ಡ್ಸ್ ರೂಮ್‌ನಲ್ಲಿಯೇ ಓಡಾಡಿದ್ದರಂತೆ. ಸಂಜೆ ಯಾರು ಇಲ್ಲದ ವೇಳೆ ಮಹೇಶ್ ನೇಣಿಗೆ ಶರಣಾಗಿದ್ದಾರೆ. 

ವಿಷಯ ತಿಳಿದು ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಹೇಶ್ ಆತ್ಮಹತ್ಯೆ ಕುರಿತು ಅವರ ಕುಟುಂಬ ಸದಸ್ಯರಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ. 

ಇದನ್ನೂ ಓದಿ: ಪವಿತ್ರಾಗೌಡ ಮಾತ್ರವಲ್ಲದೇ ದರ್ಶನ್‌ ಜೊತೆಗೂ ಮಾತುಕತೆ ನಡೆಸಿದ್ದ ಸಮತಾ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News