ಪ್ರಾಂಶುಪಾಲರು ಬೈದ ಆರೋಪ: ಶಾಲಾ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ

ಪ್ರಾಂಶುಪಾಲರು ಬೈದ್ದಿದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.. ಮೂರನೇ ಮಹಡಿಯಿಂದ ಕೆಳಗೆ ಬಿದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.. ಅಸಲಿಗೆ ಘಟನೆಗೆ ಕಾರಣವೇನು ? ಇಲ್ಲಿದೆ ಸ್ಪಷ್ಟ ಮಾಹಿತಿ..

Written by - VISHWANATH HARIHARA | Edited by - Krishna N K | Last Updated : Aug 23, 2024, 07:33 PM IST
    • ಶಾಲಾ ಕಟ್ಟಡದಿಂದ ಜಿಗಿದು ಬಾಲಕಿ ಆತ್ಮಹತ್ಯೆಗೆ ಯತ್ನ
    • ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ
    • ಫರಿಯಾ ಖಾನಂ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
ಪ್ರಾಂಶುಪಾಲರು ಬೈದ ಆರೋಪ: ಶಾಲಾ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ title=

ಬೆಂಗಳೂರು: ಶಾಲಾ ಕಟ್ಟಡದಿಂದ ಜಿಗಿದು ಬಾಲಕಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಘಟನೆ ಬೆಳಕಿಗೆ ಬಂದಿದೆ. ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಪೂಜಿನಗರದಲ್ಲಿ ಇಂದು ಮಧ್ಯಾಹ್ನ 1.45 ರ ಸುಮಾರಿಗೆ ಘಟನೆ ನಡೆದಿದ್ದು, ಫರಿಯಾ ಖಾನಂ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿಯಾಗಿದ್ದಾಳೆ

ಶಾಮಣ್ಣ ಗಾರ್ಡನ್‌ ನಿವಾಸಿಯಾಗಿರುವ ಫರಿಯಾ, ಅಲ್‌ ಫಹದ್ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದಳು. ಇಂದು ಮಧ್ಯಾಹ್ನ  ಶಾಲಾ ಕಟ್ಟಡದ ಮೂರನೇ‌ ಮಹಡಿಯಿಂದ ವಿದ್ಯಾರ್ಥಿನಿ ಜಿಗಿದಿದಿದ್ದು, ಗಂಭೀರ ಗಾಯಗಾಳಗಿವೆ. ಈ ಬಗ್ಗೆ ಬಾಲಕಿ ಪೋಷಕರಿಗೆ ಸ್ಥಳೀಯರ ಮಾಹಿತಿ ನೀಡಿದ್ದರಿಂದ ಆಕೆಯನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನೂ ಓದಿ:ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ, ಮತ್ತವರ ಕುಟುಂಬದ ಪಾತ್ರವಿದೆ; ದಾಖಲೆ ಇಟ್ಟ ಹೆಚ್.ಡಿ.ಕುಮಾರಸ್ವಾಮಿ

ಮೂರನೇ ಮಹಡಿಯಿಂದ ಕೆಳಗೆ ಬಿದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪ್ರಾಂಶುಪಾಲರು ಬೈದ್ದಿದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ‌.‌ ಇನ್ನೂ ಘಟನೆ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದು, ಪೋಷಕರು ದೂರು ನೀಡಿದ ಬಳಿಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News