Shocking news: ಫೋನ್‌ನಲ್ಲಿ ಮಾತನಾಡುತ್ತಾ 120 ಅಡಿ ಆಳದ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು!!

Shocking news: ಈ ವಿಷಯ ತಿಳಿದ ಕೂಡಲೇ ಪೊಲೀಸರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಯುವಕನ ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಬಾವಿ ಬಹಳ ಆಳವಾಗಿದ್ದರಿಂದ ಹಾಗೂ ರಾತ್ರಿ ಸಮಯವಾದ್ದರಿಂದ ಶೋಧ ಕಾರ್ಯಾಚರಣೆಗೆ ಹರಸಾಹಸ ಪಡಬೇಕಾಯ್ತು.

Written by - Puttaraj K Alur | Last Updated : Mar 10, 2025, 07:46 PM IST
  • ಫೋನ್‌ನಲ್ಲಿ ಮಾತನಾಡುತ್ತಾ 120 ಅಡಿ ಆಳದ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು!!
  • ಉತ್ತರ ಪ್ರದೇಶದ ಹತ್ರಾಸ್‌ನ ಬಳಿ ನಾಗ್ಲಾ ನಡೆದಿರುವ ಆಘಾತಕಾರಿ ಘಟನೆ
  • ರಾತ್ರಿ ವೇಳೆ ಕೃಷಿ ಕೆಲಸಕ್ಕೆ ಹೋಗಿದ್ದ ವೇಳೆ ಬಾವಿಗೆ ಬಿದ್ದಿರುವ ಯುವಕ
Shocking news: ಫೋನ್‌ನಲ್ಲಿ ಮಾತನಾಡುತ್ತಾ 120 ಅಡಿ ಆಳದ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು!!
ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು!!

Uttar Pradesh: ಇತ್ತೀಚಿನ ದಿನಮಾನಗಳಲ್ಲಿ ಮೊಬೈಲ್‌ ಬಳಕೆಯಿಂದ ಹೆಚ್ಚಿನ ಅನಾಹುತಗಳು ಸಂಭವಿಸುತ್ತಿವೆ... ಮೊಬೈಲ್‌ ಬಳಕೆ ವೇಳೆ ತಮಗೆ ಅರಿವಿಲ್ಲದಯೇ ಅನೇಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದಕ್ಕೆ ಮತ್ತೊಂದು ನಿದರ್ಶನವೆಂಬಂತೆ ಉತ್ತರ ಪ್ರದೇಶದ ಹತ್ರಾಸ್​ ಎಂಬಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ರಾತ್ರಿ ವೇಳೆ ಫೋನ್‌ನಲ್ಲಿ ಮಾತನಾಡುತ್ತಾ ಹೋಗುವ ವೇಳೆ 120 ಅಡಿ ಆಳದ ಬಾವಿಗೆ ಬಿದ್ದು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ.  

Add Zee News as a Preferred Source

ಮೃತ ವಿದ್ಯಾರ್ಥಿಯನ್ನ ರಾಹುಲ್‌ ಕುಮಾರ್‌ (22) ಎಂದು ಗುರುತಿಸಲಾಗಿದೆ. ಹತ್ರಾಸ್‌ನ ಬಳಿ ನಾಗ್ಲಾ ಎಂಬಲ್ಲಿ ರಾತ್ರಿ 11 ಗಂಟೆ ಸುಮಾರಿಗೆ ಈತ ಕೃಷಿ ಕೆಲಸಕ್ಕೆಂದು ಜಮೀನಿಗೆ ಹೊಗಿದ್ದ. ಜಮೀನಿನಲ್ಲಿ ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಆಲೂಗಡ್ಡೆಯನ್ನು ತುಂಬಿಸಲಾಗುತಿತ್ತು. ಅದೇ ವೇಳೆಗೆ ಟ್ರ್ಯಾಕ್ಟರ್ ಕೆಟ್ಟು ನಿಂತಿತ್ತು. ಈ ವಿಷಯವನ್ನು ತನ್ನ ಚಿಕ್ಕಪ್ಪನಿಗೆ ತಿಳಿಸಲು ಕರೆ ಮಾಡಿ ಮಾತನಾಡುತ್ತಾ ರಾಹುಲ್‌ ನಡೆದುಕೊಂಡು ಹೋಗುತ್ತಿದ್ದ. ಈ ವೇಳೆ ಕಾಲು ಜಾರಿ ಆತ 120 ಅಡಿ ಆಳದ ಹಳೆಯ ಬಾವಿಗೆ ಬಿದ್ದಿದ್ದಾನೆ. ಕೂಡಲೇ ಜಮೀನಿನಲ್ಲಿದ್ದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ನೌಕರರು ಮತ್ತು ಪಿಂಚಣಿದಾರರಿಗೆ ಶಾಕ್ : ಇನ್ನು ಮುಂದೆ ಲಭ್ಯವಿರುವುದಿಲ್ಲ ಪಿಂಚಣಿ, ಗ್ರಾಚ್ಯುಟಿ!ನಿಯಮಗಳಲ್ಲಿ ಬಹು ದೊಡ್ಡ ಬದಲಾವಣೆ

ಈ ವಿಷಯ ತಿಳಿದ ಕೂಡಲೇ ಪೊಲೀಸರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಯುವಕನ ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಬಾವಿ ಬಹಳ ಆಳವಾಗಿದ್ದರಿಂದ ಹಾಗೂ ರಾತ್ರಿ ಸಮಯವಾದ್ದರಿಂದ ಶೋಧ ಕಾರ್ಯಾಚರಣೆಗೆ ಹರಸಾಹಸ ಪಡಬೇಕಾಯ್ತು. ಅಗ್ನಿಶಾಮಕ ದಳ ಸಿಬ್ಬಂದಿ ಇಡೀ ರಾತ್ರಿ ಕಾರ್ಯಾಚರಣೆ ನಡೆಸಿ ಮಾರನೇ ದಿನ ಬೆಳಗ್ಗೆ ಯುವಕನ್ನು ಪತ್ತೆ ಹಚ್ಚಿದ್ದಾರೆ. ಆದರೆ ಆತ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರಿಂದ ಕೂಡಲೇ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಯಿತು. ವಿಧಿಯಾಟದ ಮುಂದೆ ಯಾವುದು ನಡೆಯುವುದಿಲ್ಲ ಎಂಬಂತೆ ಆಸ್ಪತ್ರೆಗೆ ತಲುಪುವ ಮೊದಲೇ ಆತ ಮೃತಪಟ್ಟಿದ್ದಾನೆ. 

ಬಿಎ ವ್ಯಾಸಾಂಗ ಮಾಡುತಿದ್ದ ರಾಹುಲ್ ರಾತ್ರಿ ವೇಳೆ ತನ್ನ ಕುಟುಂಬದವರಿಗೆ ಸಹಾಯ ಮಾಡಲೆಂದು ಹೊದಾಗ ಆಳದ ಬಾವಿಗೆ ಬಿದ್ದು ಸಾವನ್ನಪ್ಪಿದ್ದಾನೆ. ಇನ್ನು ರಾಹುಲ್‌ ಬಗ್ಗೆ ಸ್ಥಳೀಯರಾದ ರವೀಂದ್ರ ಸಿಂಗ್‌ ಮಾತನಾಡಿ, ʼಆತ ಒಬ್ಬ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ. ಓದಿನ ಜೊತೆಗೆ ತನ್ನ ಕುಟುಂಬದವರಿಗೆ ರಾತ್ರಿ ವೇಳೆ ಕೃಷಿ ಕೆಲಸಕ್ಕೆ ಸಹಾಯ ಮಾಡುತ್ತಿದ್ದ. ಆದರೆ ಈ ರೀತಿ ದುರಂತವಾಗಿ ಸಾವನ್ನಪ್ಪಿದ್ದು ನಮಗೂ ದುಃಖ ತರಿಸಿದೆʼ ಎಂದು ಹೇಳಿದ್ದಾರೆ. ತಮ್ಮ ಮಗನನ್ನು ಕಳೆದುಕೊಂಡ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.  

ಇದನ್ನೂ ಓದಿ: ಜಾರಿಗೆ ಬಂತು ಇಪಿಎಫ್‌ಒ ಹೊಸ ನಿಯಮ : ಸಿಗಲಿದೆ 7 ಲಕ್ಷ ರೂ.ಗಳ ಹೆಚ್ಚುವರಿ ಮೊತ್ತ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News