Suicide case: 2 ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದ ಗೃಹಿಣಿ ಸಾವು!
Suicide case: ಪತಿಯ ಕುಟುಂಬದರಿಂದ ಗೃಹಿಣಿಗೆ ಹಲ್ಲೆ ಮತ್ತು ವರದಕ್ಷಿಣೆ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ತಮ್ಮ ಮಗಳ ಸಾವಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಅನುಷಾಳ ಪೋಷಕರು ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಮಂಡ್ಯ: 2 ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನ್ಪಪ್ಪಿರುವ ಘಟನೆ ನಡೆದಿದೆ. ಅನುಷಾ (23) ಸಾವನ್ನಪ್ಪಿರುವ ಗೃಹಿಣಿ.
ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಅನುಷಾ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ಮೂಲದ ಪ್ರವೀಣ್ ಮತ್ತು ಅನುಷಾ ಪ್ರೀತಿಸಿ ಮದುವೆಯಾದ್ದರು.
ಇದನ್ನೂ ಓದಿ: ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಲಿ
ಮಹದೇವಪುರದ ಪೊಲೀಸ್ ಠಾಣಾ ವ್ಯಾಪ್ತಿಯ ಸಿಂಗಯ್ಯಪಾಳ್ಯದಲ್ಲಿ ಈ ದಂಪತಿ ವಾಸವಿದ್ದರು. ಅತ್ತೆ ನಾಗಮ್ಮ ಮತ್ತು ಸೋದರ ಮಾವ ರಾಜೇಶ್ ಎಂಬುವರಿಂದ ಕಿರುಕುಳ ಆರೋಪ ಕೇಳಿಬಂದಿದೆ.
ಪತಿಯ ಕುಟುಂಬದವರಿಂದ ಗೃಹಿಣಿ ಮೇಲೆ ಹಲ್ಲೆ ಮತ್ತು ವರದಕ್ಷಿಣೆ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ತಮ್ಮ ಮಗಳ ಸಾವಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಅನುಷಾಳ ಪೋಷಕರು ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಗುರು ರಾಘವೇಂದ್ರ ಬ್ಯಾಂಕ್ ಅವ್ಯವಹಾರ: ಸಿಬಿಐ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.