ಬೆಂಗಳೂರು: ನಗರದ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ಶಂಕಿತ ಉಗ್ರ ಸೇರಿ ನಾಲ್ವರನ್ನು  ಸಿಸಿಬಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಅಸ್ಸೋಂ ಮೂಲದ ಅಖ್ತರ್ ಹುಸೇನ್ ಲಷ್ಕರ್ ಶಂಕಿತ ಉಗ್ರನಾಗಿದ್ದಾನೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ದೆಹಲಿ ಸಿಎಂ ಮನೆ ಮುಂದೆ ದಾಂಧಲೆ ಪ್ರಕರಣ: ಆರೋಪಪಟ್ಟಿಯಲ್ಲಿ ಸಂಸದ ತೇಜಸ್ವಿ ಸೂರ್ಯ ಹೆಸರು!!


ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿಟಿಪಿ ಏರಿಯಾದ ಕಟ್ಟಡದ ಮೂರನೇ ಮಹಡಿಯಲ್ಲಿ ಈತ ವಾಸವಾಗಿದ್ದ. ರೂಮ್ ನಲ್ಲಿ ಇದ್ದ ಮೂವರು ಯುವಕರು ಫುಡ್ ಡೆಲಿವರಿ ಮಾಡುತ್ತಿದ್ದರು ಎನ್ನಲಾಗಿದೆ. 


ನಾಲ್ವರು ಸಹ ರಾತ್ರಿ ವೇಳೆ ಮಾತ್ರ ಓಡಾಡುತ್ತಿದ್ದರು. ಸ್ಥಳೀಯರೊಂದಿಗೆ ಸಂಪರ್ಕದಲ್ಲಿ ಸಹ ಇರಲಿಲ್ಲ ಎಂದು ಹೇಳಲಾಗುತ್ತಿದೆ. ಶಂಕಿತ ಉಗ್ರನ ವಾಸ್ತವ್ಯದ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿದ್ದ ಸಿಸಿಬಿ ಅಧಿಕಾರಿಗಳು ನಿನ್ನೆ ಸಂಜೆ 5 ಗಂಟೆಯಿಂದಲೇ ಮನೆ ಬಳಿ ಕಾದು ಕುಳಿತಿದ್ದರು. 


ಬಳಿಕ ಸಂಜೆ 7 ಗಂಟೆ ಸುಮಾರಿಗೆ ಅಖ್ತರ್ ಹುಸೇನ್ ಮನೆಗೆ ಬಂದಿದ್ದಾನೆ. ಕೆಲ ಹೊತ್ತಿನ ಬಳಿಕ ಸಿಸಿಬಿ ತಂಡ ದಾಳಿ ನಡೆಸಿ ಶಂಕಿತ ಉಗ್ರ ಸೇರಿ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದೆ.


ಇದನ್ನೂ ಓದಿ: ಹುಬ್ಬಳ್ಳಿ ಭೀಕರ ಅಗ್ನಿ ಅವಘಡ: ನಾಲ್ವರ ಸಜೀವ ದಹನ, ಎಂಟು ಜನರಿಗೆ ಗಾಯ..!


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.