ಬೆಂಗಳೂರು : ಸ್ಕೂಟರ್ ನಲ್ಲಿ ತೆರಳುತ್ತಿದ್ದ ಮಹಿಳೆ ಮೇಲೆ ಟ್ಯಾಂಕರ್ ಹರಿದ ಪರಿಣಾಮ ಸ್ಥಳದಲ್ಲೇ ಮೃತಪ್ಪಟ್ಟಿರುವ ಘಟನೆ ಲಗ್ಗೆರೆ ಬಸ್ ನಿಲ್ದಾಣದ ಬಳಿಯ ಗ್ರೇಸ್ ಪಬ್ಲಿಕ್ ಸ್ಕೂಲ್ ಮುಂಭಾಗದಲ್ಲಿ ನಡೆದಿದೆ. ಆಶಾ ಮೃತ ದುರ್ದೈವಿಯಾಗಿದ್ದಾರೆ.


COMMERCIAL BREAK
SCROLL TO CONTINUE READING

ಕಿಮ್ಸ್ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಆಶಾ ಇಂದು ಬೆಳಗ್ಗೆ ಬಸ್ ನಿಲ್ದಾಣದ ಕಡೆಯಿಂದ ಲಗ್ಗೆರೆಯ ತಮ್ಮ  ಮನೆಗೆ ಸ್ಕೂಟರಿನಲ್ಲಿ ತೆರಳುತಿದ್ದರು. 


ಇದನ್ನೂ ಓದಿ - ನಾನು ತಪ್ಪು ಮಾಡಿಲ್ಲ, ಗಲಾಟೆಯಲ್ಲಿ ಭಾಗಿಯಾಗಿಲ್ಲ: ಸುನಾಮಿ ಕಿಟ್ಟಿ


ಗ್ರೇಸ್ ಸ್ಕೂಲ್ ಮುಂಭಾಗದಲ್ಲಿ ಮೊಬೈಲ್ ನೋಡುತ್ತಾ ಯಮನಂತೆ ಬಂದ ಟ್ಯಾಂಕರ್ ಚಾಲಕ ಕೊಂಚ ಬಲಕ್ಕೆ ಬಂದ ಆಶಾಗೆ ಡಿಕ್ಕಿ ಹೊಡೆಸಿದ್ದಾನೆ. ಸ್ಥಳದಲ್ಲಿ ಬಿದ್ದ ಆಶಾ ಮೇಲೆ ಹಿಂಬದಿ ಚಕ್ರ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ಇದನ್ನೂ ಓದಿ - ಯುವತಿ ಮೇಲೆ ಆ್ಯಸಿಡ್ ದಾಳಿ: ನಾಳೆ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ


ಘಟನೆ ಬಳಿಕ ಟ್ಯಾಂಕರ್ ಬಿಟ್ಟು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.  ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.