Road Accident: ಭೀಮನ ಅಮಾವಾಸ್ಯೆ ಪ್ರಯುಕ್ತ ದೇವಾಲಯಕ್ಕೆ ತೆರಳುತ್ತಿದ್ದ ಟಾಟಾ ಏಸ್ ಪಲ್ಟಿಯಾಗಿ ಮಕ್ಕಳು ಸೇರಿದಂತೆ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಶಿವಪುರ ಸಮೀಪ ಇಂದು ಮಧ್ಯಾಹ್ನ ನಡೆದಿದೆ.


COMMERCIAL BREAK
SCROLL TO CONTINUE READING

ಅಂಕಹಳ್ಳಿ ಗ್ರಾಮದ ನಿರ್ಮಲಾ, ಬೆಳ್ಳಯ್ಯ, ಬೇಬಿ(11), ಮಧನ್(9), ಗಂಗಮ್ಮ, ಪವಿತ್ರಾ, ಸೋಮಣ್ಣ ಸೇರಿದಂತೆ 16 ಮಂದಿಗೆ ತಲೆ,ಮುಖಕ್ಕೆ ತೀವ್ರ ಪೆಟ್ಟು ಬಿದ್ದಿದ್ದು ಚಾಮರಾಜನಗರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಉಳಿದವರಿಗೆ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಲಾಗುತ್ತಿದೆ.


ಇದನ್ನೂ ಓದಿ- ಪುಸ್ತಕ ಓದಿ ಟೆಲಿಸ್ಕೋಪ್ ತಯಾರಿಸಿದ ಯುವಕ- ನಿತ್ಯ ಗ್ರಹ, ನಕ್ಷತ್ರ ದರ್ಶನ


ಭೀಮನ ಅಮಾವಾಸ್ಯೆ ಪ್ರಯುಕ್ತ ಕೋಡಹಳ್ಳಿ ಮಹದೇಶ್ವರ ದೇಗುಲಕ್ಕೆ 20 ಕ್ಕೂ ಹೆಚ್ಚು  ಟಾಟಾ ಏಸ್ ವಾಹನದಲ್ಲಿ ಬರುತ್ತಿದ್ದ ವೇಳೆ ಶಿವಪುರ ಸಮೀಪ ವಾಹನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.


ಇದನ್ನೂ ಓದಿ- ಚಾಮರಾಜನಗರದಲ್ಲಿ ಮಳೆ ಅವಾಂತರ: ಅಪಾರ ಬೆಳೆ ಹಾನಿ, ಕೆಲವೆಡೆ ಹಾರಿದ ಛಾವಣಿ


ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಚಾಲಕನ ಅತಿವೇಗ ಹಾಗೂ ಅಜಾಗರೂಕತೆಯಿಂದ ಈ ಅನಾಹುತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.