ತರಗತಿಯಲ್ಲಿ ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ಶಿಕ್ಷಕ ಸಾವು..!

ರಬಕವಿ-ಬನಹಟ್ಟಿ ತಾಲೂಕಿನ ನಾವಲಗಿ ಗ್ರಾಮದ ನಿವಾಸಿ ಶಿಕ್ಷಕ ಗುರುಪಾದ ಹಿಪ್ಪರಗಿ ಅವರು ಶಾಲಾ ಪ್ರಾರ್ಥನೆ ಮುಗಿಸಿ ತರಗತಿಗೆ ತೆರಳಿದ್ದರು. ಪಾಠ ಮಾಡುತ್ತಿದ್ದ ವೇಳೆ ಏಕಾಏಕಿ ಎದೆ ನೋವು ಕಾಣಿಸಿಕೊಂಡು ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

Written by - Puttaraj K Alur | Last Updated : Jun 27, 2025, 12:47 PM IST
  • ತರಗತಿಯಲ್ಲಿ ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಶಿಕ್ಷಕ ಸಾವು
  • ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದಿರುವ ಆಘಾತಕಾರಿ ಘಟನೆ
  • ಶಿಕ್ಷಕರ ಸಾವಿನ ಸುದ್ದಿ ತಿಳಿದು ಕಣ್ಣೀರಿಟ್ಟ ಶಾಲೆಯ ಮಕ್ಕಳು
ತರಗತಿಯಲ್ಲಿ ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ಶಿಕ್ಷಕ ಸಾವು..!

Teacher death due to heart attack: ತರಗತಿಯಲ್ಲಿ ಪಾಠ ಮಾಡುತ್ತಿದ್ದಾಗಲೇ ಹಠಾತ್‌ ಹೃದಯಾಘಾತದಿಂದ ಕುಸಿದುಬಿದ್ದು ಶಿಕ್ಷಕರೊಬ್ಬರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ನಡೆದಿದೆ. 

Add Zee News as a Preferred Source

ಜಮಖಂಡಿ ತಾಲೂಕಿನ ತುಂಗಳ ಹೈಸ್ಕೂಲ್‌ನಲ್ಲಿ ಈ ಘಟನೆ ನಡೆದಿದೆ. ಎಂದಿನಂತೆ ಇಂದು (ಜೂನ್ 27) ಶಾಲೆಗೆ ಆಗಮಿಸಿದ್ದ ಕನ್ನಡ ವಿಷಯ ಭೋದನಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕ ಗುರುಪಾದ ಕಾಶಿರಾಯ ಹಿಪ್ಪರಗಿ (47) ಪಾಠ ಮಾಡುತ್ತಿದ್ದರು. ಈ ವೇಳೆ ಅವರಿಗೆ ಹಠಾತ್‌ ಹೃದಯಾಘಾತವಾಗಿದೆ.  

ಇದನ್ನೂ ಓದಿ: 5 ಹುಲಿಗಳ ಸಾವು ಪ್ರಕರಣ: ವಿಷಪ್ರಾಶನದಿಂದಲೇ ಹುಲಿಗಳ ಮೃತ್ಯು, ತನಿಖೆ ಚುರುಕು, ದನಗಾಹಿಗಳು ವಶಕ್ಕೆ

ರಬಕವಿ-ಬನಹಟ್ಟಿ ತಾಲೂಕಿನ ನಾವಲಗಿ ಗ್ರಾಮದ ನಿವಾಸಿ ಶಿಕ್ಷಕ ಗುರುಪಾದ ಹಿಪ್ಪರಗಿ ಶಾಲಾ ಪ್ರಾರ್ಥನೆ ಮುಗಿಸಿ ತರಗತಿಗೆ ತೆರಳಿದ್ದರು. ಪಾಠ ಮಾಡುತ್ತಿದ್ದ ವೇಳೆಯೇ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಏಕಾಏಕಿ ಕುಸಿದುಬಿದ್ದಿದ್ದಾರೆ. ಕೂಡಲೇ ಸ್ಥಳೀಯರ ನೆರವಿನಿಂದ ಸಹಶಿಕ್ಷಕರು ಅವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲು ಪಯತ್ನಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು. 

ಶಿಕ್ಷಕರಿಗೆ ಹೃದಯಾಘಾತವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಎಂದಿನಂತೆ ಶಾಲೆಗೆ ಆಗಮಿಸಿದ ಪಾಠ ಮಾಡುತ್ತಿದ್ದ ತಮ್ಮ ಶಿಕ್ಷಕರು ಏಕಾಏಕಿ ಕುಸಿದುಬಿದ್ದ ದೃಶ್ಯವನ್ನ ಕಂಡ ವಿದ್ಯಾರ್ಥಿಗಳಿಗೆ ಶಾಕ್‌ ಆಗಿದೆ. ಶಿಕ್ಷಕರು ಮೃತಪಟ್ಟ ಸುದ್ದಿ ತಿಳಿದು ಶಾಲೆಯ ವಿದ್ಯಾರ್ಥಿಗಳು ಕಣ್ಣೀರು ಹಾಕಿದ್ದಾರೆ. 

ಇದನ್ನೂ ಓದಿ: ಶರ್ಟ್ ಪ್ಯಾಂಟ್ ಮಾತ್ರವಲ್ಲ ಒಳ ಉಡುಪು ಕೂಡ ನಕಲಿ..!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

 

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News