Car-truck accident in Hassan: ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಹೊರವಲಯದ ಈಚನಹಳ್ಳಿ ಹತ್ತಿರ ಈ ಘಟನೆ ನಡೆದಿದೆ. 


COMMERCIAL BREAK
SCROLL TO CONTINUE READING

ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ್ ಹಾಗೂ ರಾಕೇಶ್ ಸಾನ್ನಪ್ಪಿರುವ ದುರ್ದೈವಿಗಳು. ಮೃತರೆಲ್ಲಾ ಹೊಸಪೇಟೆ ತಾಲೂಕಿನವರು ಎಂದು ತಿಳಿದು ಬಂದಿದೆ. 


ಇದನ್ನೂ ಓದಿ: ಸಿಎಂ ಪತ್ರ ಬರೆದು ರಾಜಕಾರಣ ಮಾಡಿದರೆ ಪ್ರಜ್ವಲ್ ಪಾಸ್ಪೋರ್ಟ್ ರದ್ದಾಗಲ್ಲ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ


ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ನಂತರ ಹಾರಿ ಕಂಟೇನರ್‌ಗೆ ಗುದ್ದಿದೆ. ಪರಿಣಾಮವಾಗಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮಗು, ಇಬ್ಬರು ಮಹಿಳೆಯರು ಸೇರಿದಂತೆ 6 ಜನರು ಸಾವನ್ನಪ್ಪಿದ್ದಾರೆ. 


ಮೃತರೆಲ್ಲಾ ಸಂಬಂಧಿಕರನ್ನು ನೋಡಿ ವಾಪಸ್ ಹೋಗುತ್ತಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ: ಸಿನಿಮಾ ಶೈಲಿಯಲ್ಲಿ ಚಿನ್ನ ಕಳ್ಳತನ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.