ಶಿವಮೊಗ್ಗದಲ್ಲಿ ಭೀಕರ ಅಪಘಾತ: ಲಾರಿ-ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ದುರ್ಮರಣ!

Terrible accident in Shivamogga: ಮೃತರನ್ನು ದಾವಣಗೆರೆ ಮೂಲದ ಚಾಲಕ ಕಾರ್ತಿಕ್, ವಿವೇಕ್, ಮೋಹನ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ರುದ್ರೇಶ್ ಪಾಟೀಲ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

Written by - Zee Kannada News Desk | Last Updated : Dec 11, 2022, 01:22 PM IST
  • ಶಿವಮೊಗ್ಗದಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ
  • ಲಾರಿ-ಕಾರಿನ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ದುರ್ಮರಣ
  • ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಲಾಪುರ ಬಳಿ ಘಟನೆ
ಶಿವಮೊಗ್ಗದಲ್ಲಿ ಭೀಕರ ಅಪಘಾತ: ಲಾರಿ-ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ದುರ್ಮರಣ! title=
ಶಿವಮೊಗ್ಗದಲ್ಲಿ ಭೀಕರ ಅಪಘಾತ!

ಶಿವಮೊಗ್ಗ: ಶಿವಮೊಗ್ಗದಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಭೀಕರ ಅಪಘಾತವೊಂದು ಸಂಭವಿಸಿದೆ. ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿದ್ದು, ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.   

ಗೂಡ್ಸ್​ ಲಾರಿ ಹಾಗೂ Suzuki Baleno ಕಾರು ಪರಸ್ಪರ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ದಾವಣಗೆರೆ ಮೂಲದ ಚಾಲಕ ಕಾರ್ತಿಕ್, ವಿವೇಕ್, ಮೋಹನ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ರುದ್ರೇಶ್ ಪಾಟೀಲ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಹಾಲಿ ಶಾಸಕರಿಗೆ ಟಿಕೆಟ್ ಫಿಕ್ಸ್...! BJP, JDSಗೂ ಮೊದಲೇ ಪಟ್ಟಿ ರಿಲೀಸ್ ಮಾಡಿದ ಕಾಂಗ್ರೆಸ್

ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪುರ ಬಳಿ ಈ ಘಟನೆ ಸಂಭವಿಸಿದೆ. ಶಿವಮೊಗ್ಗದಿಂದ ದಾವಣಗೆರೆ ಕಡೆಗೆ ಕಾರು ತೆರಳುತ್ತಿತ್ತು. ಈ ವೇಳೆ ಶಿವಮೊಗ್ಗಕ್ಕೆ ತೆರಳುತ್ತಿದ್ದ ಮೆಕ್ಕೆ ಜೋಳ ತುಂಬಿದ್ದ ಗೂಡ್ಸ್ ಲಾರಿ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅದರಲ್ಲಿದ್ದ ಮೂವರು ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ. ಘಟನೆ ಬಳಿಕ ಗೂಡ್ಸ್ ಲಾರಿ ಚಾಲಕ ಪರಾರಿಯಾಗಿದ್ದಾನೆ. ಈ ಬಗ್ಗೆ ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.   

ಇದನ್ನೂ ಓದಿ: Tipu Sulthan: ಟಿಪ್ಪು ಕಾಲದ ‘ಸಲಾಂ ಆರತಿ’ಗೆ ಬ್ರೇಕ್ ಹಾಕಲು ಬಿಜೆಪಿ ಸರ್ಕಾರ ನಿರ್ಧಾರ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News