IPS Officer Harshvardhan Dies in Road Accident: ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ಪ್ರೊಬೆಷನರಿ ಐಪಿಎಸ್​ ಅಧಿಕಾರಿ ಹರ್ಷಬರ್ಧನ್ (26) ಅವರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರ ತಪ್ಪಿ ಜೀಪ್ ರಸ್ತೆ ಬದಿಗೆ ಬಿದ್ದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ರವಿವಾರ (ಡಿಸೆಂಬರ್​ 01) ರಾತ್ರಿ 9.30ರ ವೇಳೆಗೆ ಮೃತಪಟ್ಟಿದ್ದಾರೆ. 


COMMERCIAL BREAK
SCROLL TO CONTINUE READING

ಹಾಸನ ತಾಲೂಕಿನ ಕಿತ್ತಾನೆಗಡಿ ಗ್ರಾಮದ ಬಳಿ ಜೀಪ್‌ ಪಲ್ಟಿಯಾಗಿತ್ತು. ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ​ಪ್ರೊಬೆಷನರಿ ಐಪಿಎಸ್​ ಅಧಿಕಾರಿ ಹರ್ಷಬರ್ಧನ್ ದುರಂತ ಅಂತ್ಯ ಕಂಡಿದ್ದಾರೆ. ಮೂಲತಃ ಬಿಹಾರ ಮೂಲದ ಹರ್ಷಬರ್ಧನ್ ಮಧ್ಯಪ್ರದೇಶದ ಸಿಂಗ್ರುಲಿಯಲ್ಲಿ ವಾಸವಾಗಿದ್ದರು. 


ಅಖಿಲೇಶ್ ಕುಮಾರ್ ಸಿಂಗ್ ಹಾಗೂ ಡೋಲಿ ಸಿಂಗ್ ದಂಪತಿ ಪುತ್ರ ಹರ್ಷಬರ್ಧನ್ ದುರಂತ ಸಾವು ಅನೇಕರಿಗೆ ಆಘಾತವನ್ನುಂಟು ಮಾಡಿದೆ. ರಾಜ್ಯ ಆಡಳಿತ ಸೇವೆಯಲ್ಲಿರುವ ಸರ್ಕಾರಿ ನೌಕರನ ಮಗನಾಗಿದ್ದ ಹರ್ಷಬರ್ಧನ್​ ಸಿವಿಲ್ ಇಂಜಿನಿಯರಿಂಗ್ ಪದವಿಧರರಾಗಿದ್ದರು. ಸರ್ಕಾರಿ ಕೆಲಸಕ್ಕೂ ಸೇರಿಕೊಂಡಿದ್ದರು. ಆದರೆ ಅವರ ಜೀವನದ ಗುರಿ ಬೇರೆಯೇ ಆಗಿತ್ತು. 2022ರಲ್ಲಿ ಮೊದಲ ಯತ್ನದಲ್ಲೇ ಯುಪಿಎಸ್​​​ಸಿಯಲ್ಲಿ 153ನೇ ರ‍್ಯಾಂಕ್ ಪಡೆದುಕೊಂಡಿದ್ದರು. ​


ಇದನ್ನೂ ಓದಿ: ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ಹೆಸರು ಅಂತಿಮ


ಹರ್ಷಬರ್ಧನ್​ ಅವರು ಇಲಾಖಾ ತರಬೇತಿ ಮುಗಿಸಿ ನಾಲ್ಕು ವಾರ ಮೈಸೂರಿನ ಪೊಲಿಸ್ ಅಕಾಡೆಮಿಯಲ್ಲಿ ಟ್ರೈನಿಂಗ್ ಮುಗಿಸಿದ್ದರು. ನಂತರ ಅವರು ಹಾಸನ ಜಿಲ್ಲೆಗೆ ಡಿವೈಎಸ್​ಪಿಯಾಗಿ ನಿಯೋಜನೆಗೊಂಡಿದ್ದರು. ಹೀಗಾಗಿ ಹಾಸನ ಜಿಲ್ಲಾ ಎಸ್​ಪಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಪೊಲೀಸ್ ಇಲಾಖೆಯ ಜೀಪ್​​ ಹತ್ತಿ ಮೈಸೂರಿನಿಂದ ಭಾನುವಾರ ಹಾಸನದತ್ತ ಪ್ರಯಾಣ ಬೆಳೆಸಿದ್ದರು. 


ಹಾಸನ ತಾಲೂಕಿನ ಹಾಸನ-ಮೈಸೂರು ರಸ್ತೆಯ ರಾಷ್ಟ್ರಿಯ ಹೆದ್ದಾರಿ 373ರ ಕಿತ್ತಾನೆಗಡಿ ಬಳಿ ಅತಿಯಾದ ವೇಗದಲ್ಲಿ ಬರುತ್ತಿದ್ದ ಜೀಪ್ ಸಂಜೆ 4:15ಕ್ಕೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಇಳಿದಿದ್ದು, ನಂತರ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಹರ್ಷಬರ್ಧನ್​ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಸ್ಥಳೀಯರು ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ತೀವ್ರ ರಕ್ತಸ್ರಾವ ಮತ್ತು ತಲೆಗೆ ಗಂಭಿರ ಗಾಯವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗಿದೆ ಅವರು ಮೃತಪಟ್ಟಿದ್ದಾರೆ.


ಇದನ್ನೂ ಓದಿ: ಆಲಮಟ್ಟಿ ಡ್ಯಾಂ ವಿಚಾರದದಲ್ಲಿ ಕಾಂಗ್ರೆಸ್ ದ್ರೋಹ ಮಾಡ್ತಿದೆ


ಸಿಎಂ ಸಿದ್ದರಾಮಯ್ಯ ಸಂತಾಪ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.