ಕಲಬುರಗಿ: ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಅಫಜಲಪುರ ತಾಲೂಕಿನ ಹಳ್ಳೋಳ್ಳಿ ಕ್ರಾಸ್ ಬಳಿ ಈ ದುರಂತ ಸಂಭವಿಸಿದೆ ಎಂದು ವರದಿಯಾಗಿದೆ.


COMMERCIAL BREAK
SCROLL TO CONTINUE READING

ನೇಪಾಳ ಮೂಲದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಒಂದೇ ಬೈಕಿನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ತೆರಳುತ್ತಿದ್ದರು. ಈ ವೇಳೆ ದುದನಿಯಿಂದ ಅಫಜಲಪುರ ಕಡೆಗೆ ಬರುತ್ತಿದ್ದ ಬೈಕಿಗೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ.


ಇದನ್ನೂ ಓದಿ: ಬೆಳಗಾವಿ ಚೆನ್ನಮ್ಮ ನಗರದಲ್ಲಿ ಲಕ್ಷಾಂತರ ಕನ್ನಡಿಗರು ಭಾಗಿ


ಘಟನೆಯಲ್ಲಿ ಸಾವನ್ನಪ್ಪಿದ ಒಂದೇ ಕುಟುಂಬದ ಐವರು ಅಫಜಲಪುರದಲ್ಲಿ ಫಾಸ್ಟ್‍ ಫುಡ್ ಹೋಟೆಲ್ ನಡೆಸುತ್ತಿದ್ದರು. ನೇಪಾಳ ಮೂಲದ ಈ ಕುಟುಂಬ ಕಳೆದ ಹಲವು ವರ್ಷಗಳಿಂದ ಅಫಜಲಪುರದಲ್ಲಿ ವಾಸವಿತ್ತು.


ಒಂದೇ ಬೈಕಿನಲ್ಲಿ ಐವರು ಪ್ರಯಾಣಿಸಿದ್ದು ಐವರ ಸಾವಿಗೆ ಕಾರಣವಾಗಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ನೇಪಾಳಿ ಕುಟುಂಬದ ಐವರ ದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಸಣ್ಣ ಮಕ್ಕಳ ಮೃತ ದೇಹಗಳನ್ನು ಕಂಡು ಸ್ಥಳೀಯರು ಮರುಕ ವ್ಯಕ್ತಪಡಿಸುತ್ತಿರುವ ದೃಶ್ಯ ಕಂಡುಬಂತು.


ಇದನ್ನೂ ಓದಿ: ನಾನೇ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತೇನೆ: ಸಿಎಂ ಸಿದ್ದರಾಮಯ್ಯ 


ಇನ್ನು ಘಟನಾ ಸ್ಥಳಕ್ಕೆ ಅಫಜಲಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.