ನವದೆಹಲಿ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ತಗುಲಿ ಮಗು ಸೇರಿ ನಾಲ್ವರು ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಗುಜರಾತ್‌ನ ದ್ವಾರಕಾ ಜಿಲ್ಲೆಯಲ್ಲಿಯೇ ಈ ಘೋರ ದುರಂತ ಸಂಭವಿಸಿದೆ.


COMMERCIAL BREAK
SCROLL TO CONTINUE READING

ದುರ್ಘಟನೆಯಲ್ಲಿ ಕಮಲೇಶ್ ಉಪಾಧ್ಯಾಯ (30), ಪವನ್ ಉಪಾಧ್ಯಾಯ (27), ಧ್ಯಾನ ಉಪಾಧ್ಯಾಯ (7 ತಿಂಗಳು) ಮತ್ತು ಪವನ್ ಅವರ ತಾಯಿ ಭಾಮಿನಿಬೆನ್ ಉಪಾಧ್ಯಾಯ ಎಂದು ಗುರುತಿಸಲಾಗಿದೆ.


ಇದನ್ನೂ ಓದಿ: ಬರ್ತಡೆಗೆ ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ್ದ ಕೇಕ್ ತಿಂದು ಜನ್ಮದಿನದಂದೇ ಬಾಲಕಿ ಸಾವು


ದ್ವಾರಕಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರಲ್ಲಿ 7 ತಿಂಗಳ ಮಗಳು, ಗಂಡ ಮತ್ತು ಹೆಂಡತಿ ಮತ್ತು ಅಜ್ಜಿ ಸೇರಿದ್ದಾರೆ. 


ಮುಂಜಾನೆ 3 ರಿಂದ 4 ಗಂಟೆಯ ನಡುವೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಮನೆಯಲ್ಲಿ ಶಾಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಅಗ್ನಿಯ ಜಾಲ್ವೆಗೆ ಸಿಲುಕಿ ಇಡೀ ಮನೆಯೇ ಸುಟ್ಟು ಭಸ್ಮವಾಗಿದೆ. ಅದರೊಳಗೆ ಗಾಢ ನಿದ್ರೆಯಲ್ಲಿದ್ದ ಒಂದೇ ಕುಟುಂಬದ ನಾಲ್ವರು ಪ್ರಾಣಬಿಟ್ಟಿದ್ದಾರೆ. 


ಇದನ್ನೂ ಓದಿ: OMG: ʼಫಸ್ಟ್ ನೈಟ್ʼ ದಿನವೇ ಬೆಡ್‌ರೂಂ​ನಲ್ಲಿ ಪ್ರಾಣ ಬಿಟ್ಟ ವಧು! ಏನಾಗಿತ್ತು ಗೊತ್ತಾ?


ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತರ ನಾಲ್ವರ ಶವಗಳೂ ಸುಟ್ಟು ಕರಕಲಾಗಿವೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆಂದು ತಿಳಿದುಬಂದಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.