ಚೆನ್ನೈ: ರಥಕ್ಕೆ ಹೈವೋಲ್ಟೇಜ್‌ ವಿದ್ಯುತ್‌ ಸ್ಪರ್ಶಿಸಿದ ಪರಿಣಾಮ ಮೂವರು ಮಕ್ಕಳು ಸೇರಿ 11 ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ತಮಿಳುನಾಡಿದ ತಂಜಾವೂರಿನಲ್ಲಿ ನಡೆದಿದೆ. ಘಟನೆಯಲ್ಲಿ 12 ಮಂದಿಗೆ ಗಾಯಗಳಾಗಿದ್ದು, ಈ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ರಥೋತ್ಸವ ಮುಗಿಸಿ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿದೆ. 


COMMERCIAL BREAK
SCROLL TO CONTINUE READING

ಇದನ್ನು ಓದಿ: ಉಚಿತ ರೇಷನ್ ಬೇಕಿದ್ದರೆ ಕೂಡಲೇ ಈ ಕೆಲಸ ಮಾಡಿ


ಈ ಬಗ್ಗೆ ಮಾಹಿತಿ ನೀಡಿರುವ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು, "ರಥಕ್ಕೆ ವಿದ್ಯುತ್‌ ತಂತಿ ಸ್ಪರ್ಶಿಸಿದಾಗ ಸಮೀಪ ನಿಂತಿದ್ದ 11 ಮಂದಿ ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆಂದು ಕಳುಹಿಸಲಾಗಿದೆ" ಎಂದರು. ಇನ್ನು ಮೃತರ ಕುಟುಂಬಕ್ಕೆ ತಮಿಳುನಾಡು ಸಿಎಂ ಎಂ.ಕೆ ಸ್ಟ್ಯಾಲಿನ್‌ ಸಾಂತ್ವನ ಹೇಳಿದ್ದು, ತಲಾ 5 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ. 


ಬಚಾವ್‌ ಆದ 50ಕ್ಕೂ ಅಧಿಕ ಮಂದಿ: 
ರಥೋತ್ಸವ ನಡೆಯುವ ಸ್ಥಳದಲ್ಲಿ ನೀರು ನಿಂತಿತ್ತು. ಒಂದು ವೇಳೆ ತಂತಿ ನೀರಿಗೆ ತಗುಲಿದ್ದರೆ ಅನೇಕರ ಪ್ರಾಣಕ್ಕೆ ಹಾನಿಯುಂಟಾಗುತ್ತಿತ್ತು. ಇನ್ನು ಘಟನೆ ಸಂಭವಿಸುತ್ತಿದ್ದಂತೆ ಸುಮಾರು 50 ಕ್ಕೂ ಹೆಚ್ಚು ಜನರು ರಥವನ್ನು ಬಿಟ್ಟು ಹೋಗಿದ್ದಾರೆ. ಇದರಿಂದ ಸಂಭವಿಸಬಹುದಾಗಿದ್ದ ಭಾರೀ ದುರಂತ ತಪ್ಪಿದೆ.  ಸದ್ಯ ಘಟನೆಯ ನಂತರ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.  


ಪರಿಹಾರ ಘೋಷಣೆ: 
ಘಟನೆ ಬಗ್ಗೆ ಮಾಹಿತಿ ತಿಳಿದ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಬುಧವಾರ ಬೆಳಗ್ಗೆ 11.30ಕ್ಕೆ ಚೆನ್ನೈ ವಿಮಾನ ನಿಲ್ದಾಣದಿಂದ ತಿರುಚ್ಚಿಗೆ ತೆರಳಿ ರಸ್ತೆ ಮೂಲಕ ತಂಜಾವೂರಿಗೆ ಭೇಟಿ ನೀಡಲಿದ್ದಾರೆ. ಇನ್ನು ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳು ಈಗಾಗಲೇ ಆದೇಶಿಸಿದ್ದಾರೆ.


IPL : ಇಂದು ಹೈದರಾಬಾದ್‌-ಗುಜರಾತ್‌ ನಡುವೆ ಹಣಾಹಣಿ: ಇಲ್ಲಿದೆ ಪಿಚ್‌ ರಿಪೋರ್ಟ್‌


ಪ್ರಧಾನಿ ಮೋದಿ ಸಂತಾಪ: 
"ತಮಿಳುನಾಡಿನ ತಂಜಾವೂರಿನಲ್ಲಿ ನಡೆದ ದುರ್ಘಟನೆಯಿಂದ ತೀವ್ರ ನೋವಾಗಿದೆ. ಈ ದುಃಖವನ್ನು ಸಹೊಸುವ ಶಕ್ತಿಯನ್ನು ಮೃತರ ಕುಟುಂಬಕ್ಕೆ ದೇವರು ಕರುಣಿಸಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಆಶಿಸುತ್ತೇನೆ" ಎಂದು ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.