ಹಾಸನದ SP ಕಚೇರಿ ಆವರಣದಲ್ಲೇ ಪತ್ನಿಗೆ ಚೂರಿ ಚುಚ್ಚಿ ಕೊಂದ ಕಾನ್ಸ್​​ಸ್ಟೇಬಲ್​!

Hassan SP office Murder: ಕೊಲೆಗಾರ ಲೋಕನಾಥ್ ಶಾಂತಿಗ್ರಾಮ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ. ಲೋಕನಾಥ್ ಹಾಗೂ ಮಮತಾಗೆ 17 ವರ್ಷಗಳ ಹಿಂದೆ ವಿವಾಹ ಆಗಿತ್ತು. ಈ ದಂಪತಿಗೆ ಇಬ್ಬರು ಮಕ್ಕಳು ಸಹ ಇದ್ದರು. ​

Written by - Puttaraj K Alur | Last Updated : Jul 1, 2024, 01:42 PM IST
  • ಹಾಸನದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ (SP) ಕಚೇರಿ ಆವರಣದಲ್ಲೇ ಮರ್ಡರ್‌
  • ಪತ್ನಿಗೆ ಚಾಕು ಇರಿದು ಕೊಂದು ಎಸ್ಕೇಪ್‌ ಆಗಿರುವ ಪೊಲೀಸ್‌ ಕಾನ್‌ಸ್ಟೇಬಲ್‌
  • ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿಗೆ ಚಾಕುವಿನಿಂದ ಇರಿದಿರುವ ಆರೋಪಿ
ಹಾಸನದ SP ಕಚೇರಿ ಆವರಣದಲ್ಲೇ ಪತ್ನಿಗೆ ಚೂರಿ ಚುಚ್ಚಿ ಕೊಂದ ಕಾನ್ಸ್​​ಸ್ಟೇಬಲ್​!  title=
ಪತ್ನಿಗೆ ಚಾಕು ಇರಿದು ಕೊಂದ ಪತಿ!

Hassan Crime News: ಪೊಲೀಸ್‌ ಕಾನ್‌ಸ್ಟೇಬಲ್‌ ಒಬ್ಬ ತನ್ನ ಪತ್ನಿಗೆ ಚಾಕು ಇರಿದು ಕೊಂದಿರುವ ಆಘಾತಕಾರಿ ಘಟನೆ ಹಾಸನದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ (SP) ಕಚೇರಿ ಆವರಣದಲ್ಲೇ ನಡೆದಿದೆ. 

ಪತಿಯಿಂದಲೇ ಕೊಲೆಯಾದ ಮಹಿಳೆಯನ್ನು ಮಮತಾ ಎಂದು ಗುರುತಿಸಲಾಗಿದೆ. ಹಾಸನ ನಗರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಲೋಕನಾಥ್ ಪತ್ನಿಗೆ ಚಾಕುವಿನಿಂದ ಇರಿದು ಕೊಂಡು ಎಸ್ಕೇಪ್‌ ಆಗಿರುವ ಆರೋಪಿಯಾಗಿದ್ದಾನೆ.

ಇದನ್ನೂ ಓದಿ: ಸಿದ್ದರಾಮಯ್ಯ ನೇತೃತ್ವದ ನಿಯೋಗದಿಂದ ಪ್ರಧಾನಿ ಮೋದಿ ಭೇಟಿ

ಕೊಲೆಗಾರ ಲೋಕನಾಥ್ ಶಾಂತಿಗ್ರಾಮ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ. ಲೋಕನಾಥ್ ಹಾಗೂ ಮಮತಾಗೆ 17 ವರ್ಷಗಳ ಹಿಂದೆ ವಿವಾಹ ಆಗಿತ್ತು. ಈ ದಂಪತಿಗೆ ಇಬ್ಬರು ಮಕ್ಕಳು ಸಹ ಇದ್ದರು. ನಾಲ್ಕೈದು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆದಿತ್ತು. ಕೌಟುಂಬಿಕ ಕಲಹದ ಹಿನ್ನೆಲೆ ಈತ ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ.

ಪತಿಯ ವಿರುದ್ಧ ದೂರು ನೀಡಲು ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣಕ್ಕೆ ಮಮತಾ ಬಂದಿದ್ದರು. ಇದರಿಂದ ಕೋಪಿಕೊಂಡಿದ್ದ ಕಾನ್‌ಸ್ಟೇಬಲ್ ಲೋಕನಾಥ್, ಎಲ್ಲರ ಮುಂದೆಯೇ ಪತ್ನಿಗೆ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾನೆ. ಚಿಕಿತ್ಸೆ ಫಲಕಾರಿಯಾಗದೆ ಮಮತಾ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಆರೋಪಿ ಲೋಕನಾಥ್‌ ವಿರುದ್ಧ ಮಮತಾ ಪೋಷಕರು ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದಾರೆ. ಈ ಬಗ್ಗೆ ಹಾಸನ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ. 

ಇದನ್ನೂ ಓದಿ: ಜಾರಕಿಹೊಳಿ ಬ್ರದರ್ಸ್ ಮಣಿಸಲು ಲಕ್ಷ್ಮಣ ಸವದಿಗೆ ಒಲಿಯುತ್ತಾ ಕೆಪಿಸಿಸಿ ಪಟ್ಟ..!?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News