ಮದುವೆಯಾದ ಕೆಲವೇ ಗಂಟೆಗಳಲ್ಲಿ ಹೊಡೆದಾಡಿಕೊಂಡ ನವದಂಪತಿ! ವಧು ಸಾವು, ವರನ ಸ್ಥಿತಿ ಗಂಭೀರ!
Shocking News in Kolar: ವಧು ಲಿಖಿತಶ್ರೀ ಹಾಗೂ ನವೀನ್ ಮದುವೆಯಾಗಿತ್ತು. ಮದುವೆಯಾದ ನಂತರ ನವದಂಪತಿ ರೂಂಗೆ ಹೋಗಿದ್ದರು. ಆದರೆ ಮ್ಯಾರೇಜ್ ಆದ ಖುಷಿಯಲ್ಲಿರಬೇಕಾದವರು ಅದ್ಯಾವುದೋ ಕಾರಣಕ್ಕೆ ಮನಸ್ತಾಪ ಮಾಡಿಕೊಂಡು ಜಗಳವಾಡಿದ್ದಾರೆ.
Shocking News: ಮದುವೆಯಾದ ನಂತರ ವಧು-ವರ ಹೊಡೆದಾಡಿಕೊಂಡಿದ್ದು, ವಧು ಸಾವನ್ನಪ್ಪಿ ವರ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿ ಗ್ರಾಮದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.
ವಧು ಲಿಖಿತಶ್ರೀ ಹಾಗೂ ನವೀನ್ ಮದುವೆಯಾಗಿತ್ತು. ಮದುವೆಯಾದ ನಂತರ ನವದಂಪತಿ ರೂಂಗೆ ಹೋಗಿದ್ದರು. ಆದರೆ ಮ್ಯಾರೇಜ್ ಆದ ಖುಷಿಯಲ್ಲಿರಬೇಕಾದವರು ಅದ್ಯಾವುದೋ ಕಾರಣಕ್ಕೆ ಮನಸ್ತಾಪ ಮಾಡಿಕೊಂಡು ಜಗಳವಾಡಿದ್ದಾರೆ. ಮದುವೆಯಾದ ಕೆಲವೇ ಗಂಟೆಗಳಲ್ಲಿ ಗಂಡ-ಹಂಡತಿ ಜಗಳ ಮಾಡಿಕೊಂಡು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ಇದನ್ನೂ ಓದಿ: ಇಳಿವಯಸ್ಸಿನಲ್ಲಿ ಪೋಕ್ಸೋ ಕೇಸ್; ಯಡಿಯೂರಪ್ಪನ ಮೇಲೆ 20 ಕೇಸ್ಗಳಿಗೆ: ಸಿಎಂ ಸಿದ್ದರಾಮಯ್ಯ
ರೂಂನಲ್ಲೇ ನವೀನ್ ಹಾಗೂ ಲಿಖಿತ ಹೊಡೆದಾಡಿಕೊಂಡಿದ್ದಾರಂತೆ. ಘಟನೆಯಲ್ಲಿ ಇಬ್ಬರಿಗೂ ಗಂಭೀರ ಗಾಯವಾಗಿತ್ತು. ಹೀಗಾಗಿ ಇಬ್ಬರನ್ನೂ ಕೆಜಿಎಫ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಲಿಖಿತ ಸಾವನ್ನಪ್ಪಿದ್ದಾಳೆ.
ಇನ್ನು ನವೀನ್ ಸ್ಥಿತಿ ಸಹ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಆತನನ್ನು ಕೋಲಾರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ಅಂಡರ್ಸನ್ ಪೇಟೆ ಪೊಲೀಸರ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಬಿಜೆಪಿ-ಜೆಡಿಎಸ್ಗೆ ಟಕ್ಕರ್ ಕೊಡಲು ಕಾಂಗ್ರೆಸ್ ಜನಾಂದೋಲನ ಸಭೆ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.