ಮಹಾರಾಷ್ಟ್ರ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಊಟದ ವಿಚಾರಕ್ಕೆ ಜಗಳ ನಡೆದು ಹೆತ್ತ ತಾಯಿಯನ್ನೇ ಪಾಪಿ ಮಗನೊಬ್ಬ ಹತ್ಯೆ ಮಾಡಿದ್ದಾನೆ.


COMMERCIAL BREAK
SCROLL TO CONTINUE READING

ಹೌದು, ಊಟದ ವಿಚಾರಕ್ಕೆ 26 ವರ್ಷದ ಯುವಕನೊಬ್ಬ ತನ್ನ ತಾಯಿಯೊಂದಿಗೆ ಜಗಳವಾಡಿ ಕೋಪದಲ್ಲಿ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆ. ರೇವದಂಡ ಬಳಿಯ ನವಖರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗಂಭೀರ ಸುಟ್ಟಗಾಯಗಳಿಂದ ಬಳಲುತ್ತಿದ್ದ ಮಹಿಳೆ ಅಲಿಬಾಗ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತರನ್ನು ಚಂಗುನಾ ನಾಮದೇ ಖೋಟ್ ಎಂದು ಗುರುತಿಸಲಾಗಿದೆ.


ಇದನ್ನೂ ಓದಿ: ಒಮ್ಮೆ ಹೂಡಿಕೆ ಮಾಡಿದರೆ ಪ್ರತಿ ತಿಂಗಳು ಪಿಂಚಣಿ.. PMVVY ಯೋಜನೆಯ ವಿವರಗಳು ಇಂತಿವೆ..!


ಊಟದ ವಿಚಾರದಲ್ಲಿ ಜಗಳವಾಡಿದ ಮಗ ಜಯೇಶ್ ತಾಯಿಗೆ ಥಳಿಸಿದ್ದಾನೆ. ಕೋಪದ ಭರದಲ್ಲಿ ಆತ ಅವಳನ್ನು ಮನೆಯ ಮುಂಭಾಗದ ತೆರೆದ ಜಾಗಕ್ಕೆ ಎಳೆದೊಯ್ದು ಬೆಂಕಿ ಹಚ್ಚಿದ್ದಾನೆಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಈ ಘಟನೆಯ ಬಗ್ಗೆ ಮಾಹಿತಿ ಪಡೆದ ರಾವದಂಡ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.


ಇದನ್ನೂ ಓದಿ:  ಕೇವಲ 299 ರೂ.ಗೆ 10 ಲಕ್ಷ ರೂ. ಇನ್ಶೂರೆನ್ಸ್‌ ಕವರೇಜ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.