ರೈತ ಮುಖಂಡ ರಾಕೇಶ್ ಟಿಕಾಯತ್‌ಗೆ ಮಸಿ ಬಳಿದಿದ್ದ ಭರತ್ ಶೆಟ್ಟಿಗೆ ಬೆದರಿಕೆ ಸಂದೇಶ

ಒಸಾಮಾ ಶಾ ಹೆಸರಿನ ಫೇಸ್‌ಬುಕ್‌ ಖಾತೆ ಹಾಗೂ ವಾಟ್ಸ್ಯಾಪ್ ಮೂಲಕ 'ಮಸಿ‌ ಬಳಿದು ಅವಮಾನಿಸಿದಕ್ಕೆ ತಿರುಗೇಟು ನೀಡುತ್ತೇವೆ. ನಿನ್ನ ಸಮಯ ಶುರುವಾಗಿದೆ' ಎಂದು ಬೆದರಿಕೆ ಸಂದೇಶಗಳು ಬರುತ್ತಿವೆ ಎಂದಿರುವ ಭರತ್ ಶೆಟ್ಟಿ ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.   

Written by - VISHWANATH HARIHARA | Edited by - Yashaswini V | Last Updated : Apr 7, 2023, 10:38 AM IST
  • ಒಸಾಮಾ ಶಾ ಎನ್ನುವ ಫೇಸ್ ಬುಕ್ ಖಾತೆಯಿಂದ ಬೆದರಿಕೆ
  • ಅಲ್ಲದೆ ವಾಟ್ಸ್ ಆ್ಯಪ್‌ ಮೂಲವು ಕೊಲೆ ಬೆದರಿಕೆ
  • ಭರತ್ ಶೆಟ್ಟಿಯಿಂದ ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ ಎನ್ ಸಿ ಆರ್ ದಾಖಲು
ರೈತ ಮುಖಂಡ ರಾಕೇಶ್ ಟಿಕಾಯತ್‌ಗೆ ಮಸಿ ಬಳಿದಿದ್ದ ಭರತ್ ಶೆಟ್ಟಿಗೆ ಬೆದರಿಕೆ ಸಂದೇಶ  title=

ಬೆಂಗಳೂರು : ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಗೆ ಮಸಿ ಬಳಿಸಿದ್ದಕ್ಕೆ ಪ್ರತೀಕಾರ ತೀರಿಸಿಕೊಳ್ಳವುದಾಗಿ ಸಂದೇಶಗಳು ಬರುತ್ತಿವೆ ಎಂದು ಪ್ರಕರಣದಲ್ಲಿ ಬಂಧನವಾಗಿದ್ದ ಆರೋಪಿ ಭರತ್ ಶೆಟ್ಟಿ ಪೊಲೀಸ್ ಠಾಣಾ ಮೆಟ್ಟಿಲೇರಿದ್ದಾರೆ. 

ಒಸಾಮಾ ಶಾ ಹೆಸರಿನ ಫೇಸ್‌ಬುಕ್‌ ಖಾತೆ ಹಾಗೂ ವಾಟ್ಸ್ಯಾಪ್ ಮೂಲಕ 'ಮಸಿ‌ ಬಳಿದು ಅವಮಾನಿಸಿದ್ದಕ್ಕೆ ತಿರುಗೇಟು ನೀಡುತ್ತೇವೆ. ನಿನ್ನ ಸಮಯ ಶುರುವಾಗಿದೆ' ಎಂದು ಬೆದರಿಕೆ ಸಂದೇಶಗಳು ಬರುತ್ತಿವೆ ಎಂದಿರುವ ಭರತ್ ಶೆಟ್ಟಿ ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

ಇದನ್ನೂ ಓದಿ- Crime News: ಹಾಡಿನ ಸೌಂಡ್ ಕಡಿಮೆ ಮಾಡಿ ಎಂದಿದಷ್ಟೆ, ನಡೆದೇ ಹೋಯ್ತು ಒಂದು ಕೊಲೆ !

ಕಳೆದ ವರ್ಷ ಮೇ 30ರಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೆಂಗಳೂರಿನ ಗಾಂಧಿಭವನದಲ್ಲಿ ರೈತ ಚಳವಳಿ-ಆತ್ಮಾವಲೋಕನ ಹಾಗೂ ಸ್ಪಷ್ಟೀಕರಣ ಸಭೆಯಲ್ಲಿ ರಾಷ್ಟ್ರೀಯ ಕಿಸಾನ್ ಮೋರ್ಚಾ ಅಧ್ಯಕ್ಷ ರಾಕೇಶ್ ಟಿಕಾಯಿತ್ ಭಾಗಿಯಾಗಿದ್ದರು. 

ಇದನ್ನೂ ಓದಿ- ಇದು ಚಿನ್ನ ಕದ್ದು ಗುಜರಿಗೆ ಹಾಕಿದ ಕಳ್ಳನ ಕಥೆ: ಇನ್ಟ್ರಸ್ಟಿಂಗ್ ಇದೆ ಓದಿ..!

ಸಭೆಯಲ್ಲಿ ಟಿಕಾಯತ್ ಮೇಲೆ ಮಸಿ ಎರಚಲಾಗಿತ್ತು. ಪ್ರಕರಣ ಸಂಬಂಧ ಭರತ್ ಶೆಟ್ಟಿ ಸಹಿತ ನಾಲ್ವರನ್ನ ಹೈಗ್ರೌಂಡ್ಸ್ ಪೊಲೀಸರು ಬಂಧಿಸಿದ್ದರು. ಸದ್ಯ ಬಿಜೆಪಿಯಲ್ಲಿ ಭರತ್ ಶೆಟ್ಟಿ ಗುರುತಿಸಿಕೊಂಡಿದ್ದು, ಚುನಾವಣೆ ಸಂದರ್ಭದಲ್ಲಿ ಬೆದರಿಕೆ ಸಂದೇಶ ಬಂದಿರುವುದು ಚರ್ಚೆಗೆ ಗ್ರಾಸವಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News