Mandya Suicide Case: ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ವಿಷ ಸೇವಿಸಿ, ನಂತರ ವಿಸಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಮಾಸ್ತಪ್ಪ (65), ಅವರ ಪತ್ನಿ ರತ್ನಮ್ಮ(45) ಹಾಗೂ ಮಗಳು ಲಕ್ಷ್ಮೀ (18) ಎಂದು ಗುರುತಿಸಲಾಗಿದೆ. ಸಾಲಭಾದೆ ತಾಳಲಾರದೆ ಪತ್ನಿ ಹಾಗೂ ಪುತ್ರಿಯ ಜೊತೆಗೆ ಮಾಸ್ತಪ್ಪ ವಿಸಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಂಪತಿಯ ಮೃತದೇಹ ಪತ್ತೆ ಆಗಿದ್ದು, ಮಗಳ ಮೃತದೇಹಕ್ಕಾಗಿ ಶೋಧಕಾರ್ಯ ನಡೆದಿದೆ.
ಇದನ್ನೂ ಓದಿ: ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ: ಇಂದು ಬೆಳಗಾವಿ ಚಲೋ ಬೃಹತ್ ಪ್ರತಿಭಟನೆ
ಮೃತರು ಶ್ರೀರಂಗಪಟ್ಟಣದ ಗಂಜಾಂ ನಿವಾಸಿಗಳಾಗಿದ್ದು, ಮಾಸ್ತಪ್ಪ ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದರಂತೆ. ಮಾಸ್ತಪ್ಪ ಸುಮಾರು 3 ಲಕ್ಷ ರೂ. ಕೈಸಾಲ ಮಾಡಿಕೊಂಡಿದ್ದರಂತೆ. ಸಾಲ ಕೊಟ್ಟವರು ಮನೆ ಬಳಿ ಬಂದು ಗಲಾಟೆ ಮಾಡಿದ್ದರಂತೆ. ಇದರಿಂದ ಮನನೊಂದು ಕುಟುಂಬದೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
3 ಲಕ್ಷ ರೂ. ಕೈಸಾಲ ಸೇರಿದಂತೆ ಸುಮಾರು 12 ಲಕ್ಷ ರೂ. ಸಾಲ ಮಾಡಿಕೊಂಡಿದ್ದ ಮಾಸ್ತಪ್ಪ, ಸಾಲಗಾರರ ಕಾಟದಿಂದ ತಮ್ಮ ಮನೆ ಮಾರಾಟ ಮಾಡಲು ಮುಂದಾಗಿದ್ದರಂತೆ. ಶ್ರೀರಂಗಪಟ್ಟಣದ ಗಂಜಾಂನಿಂದ ಆಟೋದಲ್ಲಿ ಮಾಸ್ತಪ್ಪ ಹಾಗೂ ಆತನ ಪತ್ನಿ ಮತ್ತು ಮಗಳು ಬಂದಿದ್ದರು. ಚಂದಗಾಲು ಬಳಿ ನಾಲೆಯ ಏರಿ ಮೇಲೆ ಆಟೋ ನಿಲ್ಲಿಸಿ ಮೊದಲು ದಂಪತಿ ಮತ್ತು ಮಗಳು ವಿಷ ಸೇವಿಸಿದ್ದಾರೆ. ಬಳಿಕ ವಿಸಿ ನಾಲೆಗೆ ಹಾರಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ.
ಇದನ್ನೂ ಓದಿ: ಮೈಸೂರು ಉದಯಗಿರಿ ಗಲಾಟೆ ಪ್ರಕರಣ.. ಬಿಜೆಪಿಯವರಿಂದ ರಾಜಕೀಯ ಅಸ್ತ್ರವಾಗಿ ಉಪಯೋಗ: ಗೃಹ ಸಚಿವ ಪರಮೇಶ್ವರ
ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.









