ಪಾತ್ರೆ ತೊಳಿ, ಮನೆ ಕೆಲಸ ಮಾಡು ಅಂತಿದ್ದ ಪತ್ನಿ; ಮದುವೆಯಾದ ಮೂರೇ ತಿಂಗಳಿಗೆ ಪತಿ ಆತ್ಮಹತ್ಯೆ!!

Harassment Case: ಕಳೆದ ಮೂರು ತಿಂಗಳ ಹಿಂದಷ್ಟೇ ರಾಕೇಶ್ ಕುಟುಂಬದವರ ಸಮ್ಮುಖದಲ್ಲಿ ವಿವಾಹವಾಗಿದ್ದನಂತೆ. ಇದೀಗ ತನ್ನ ಪತ್ನಿ ವಿರುದ್ಧ ಕಿರುಕುಳದ ಆರೋಪ ಮಾಡಿ ರಾಕೇಶ್‌ ಕಲಬುರಗಿಯ ಮಹದೇವ ನಗರದಲ್ಲಿ ಸೂಸೈಡ್‌ ಮಾಡಿಕೊಂಡಿದ್ದಾನೆ.

Written by - Puttaraj K Alur | Last Updated : Mar 3, 2025, 05:46 PM IST
  • ಪತ್ನಿಯ ಕಾಟಕ್ಕೆ ಬೇಸತ್ತು ಮದುವೆಯಾದ ಮೂರೇ ತಿಂಗಳಿಗೆ ಪತಿ ಆತ್ಮಹತ್ಯೆ!
  • ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ 30 ವರ್ಷದ ವ್ಯಕ್ತಿ
  • ಪತ್ನಿಯ ವಿರುದ್ಧ ಕಿರುಕುಳದ ಆರೋಪ ಮಾಡಿ ಸೂಸೈಡ್‌ ಮಾಡಿಕೊಂಡ ರಾಕೇಶ್!
ಪಾತ್ರೆ ತೊಳಿ, ಮನೆ ಕೆಲಸ ಮಾಡು ಅಂತಿದ್ದ ಪತ್ನಿ; ಮದುವೆಯಾದ ಮೂರೇ ತಿಂಗಳಿಗೆ ಪತಿ ಆತ್ಮಹತ್ಯೆ!!
ಪತ್ನಿಯ ಕಿರುಕುಳಕ್ಕೆ ಮತ್ತೊಂದು ಬಲಿ!?

Kalaburagi Suicide case: ಇತ್ತೀಚಿನ ದಿನಗಳಲ್ಲಿ ಪತ್ನಿಯರ ಕಾಟಕ್ಕೆ ಗಂಡಂದಿರು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ದೇಶದಾದ್ಯಂತ ಭಾರೀ ಸುದ್ದಿಯಾಗಿತ್ತು. 

Add Zee News as a Preferred Source

ಇದೀಗ ರಾಜ್ಯದಲ್ಲಿ ಪತ್ನಿ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದ್ದು, ಕಲಬುರಗಿಯಲ್ಲಿ ನವವಿವಾಹಿತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪತ್ನಿಯ ಕಾಟಕ್ಕೆ ಬೇಸತ್ತು ಆಳಂದ ಮೂಲದ ರಾಕೇಶ್ (30) ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.  

ಇದನ್ನೂ ಓದಿ: ಮೋದಿ ಮೂರು ದಿನಗಳ ಕಾಲ ಗುಜರಾತ್‌ ಪ್ರವಾಸ

ಕಳೆದ ಮೂರು ತಿಂಗಳ ಹಿಂದಷ್ಟೇ ರಾಕೇಶ್ ಕುಟುಂಬದವರ ಸಮ್ಮುಖದಲ್ಲಿ ವಿವಾಹವಾಗಿದ್ದನಂತೆ. ಇದೀಗ ತನ್ನ ಪತ್ನಿ ವಿರುದ್ಧ ಕಿರುಕುಳದ ಆರೋಪ ಮಾಡಿ ರಾಕೇಶ್‌ ಕಲಬುರಗಿಯ ಮಹದೇವ ನಗರದಲ್ಲಿ ಸೂಸೈಡ್‌ ಮಾಡಿಕೊಂಡಿದ್ದಾನೆ.

ಮದುವೆ ಬಳಿಕ ಆತನ ಪತ್ನಿ ಪ್ರತಿದಿನವೂ ರಾಕೇಶ್‌ಗೆ ಕಿರುಕುಳ ನೀಡುತ್ತಿದ್ದಳಂತೆ. ಪಾತ್ರೆ ತೊಳಿ... ಮನೆ ಕೆಲಸ ಮಾಡು.. ಇಲ್ಲದಿದ್ದರೆ ಪೊಲೀಸ್ ಕಂಪ್ಲೇಂಟ್ ಕೊಡುತ್ತೇನೆ ಅಂತಾ ಹೆದರಿಸಿದ್ದಳಂತೆ. ಸಣ್ಣ ಸಣ್ಣ ವಿಚಾರಕ್ಕೂ ಪತ್ನಿ ಕಿರಿಕ್‌ ಮಾಡುತ್ತಿದ್ದಳಂತೆ. 

ಇದನ್ನೂ ಓದಿ: ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ! 'ಸಿದ್ದು' ಖುರ್ಚಿ... ರಾಷ್ಟ್ರ ರಾಜಕಾರಣದಲ್ಲಿ ಸುನಾಮಿ..!

ಪತ್ನಿಯ ಕುರುಕುಳಕ್ಕೆ ಮನನೊಂದ ರಾಕೇಶ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ರಾಕೇಶ್‌ ಕುಟುಂಬಸ್ಥರು ಆತನ ಪತ್ನಿ ಮತ್ತು ಆಕೆಯ ಪೋಷಕರ ವಿರುದ್ಧ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News