ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲ್ಲೂಕಿನ ಜಾತವಾರ ಬಳಿಯ ಹೊಸಹಳ್ಳಿ ರೈಲ್ವೇ ಅಂಡರ್ ಪಾಸ್ ಗೋಡೆಗೆ ಟೊಮೆಟೊ ಲಾರಿ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಟೊಮೆಟೊ ತುಂಬಿದ್ದ ಲಾರಿ ಉರುಳಿ ಬಿದ್ದದ್ದಿದೆ. ಈ ವೇಳೆ ಚಾಲಕನಿಗೆ ಗಂಭೀರ ಗಾಯವಾಗಿದೆ.
ಇದನ್ನೂ ಓದಿ: ಎಸಿಬಿ ರದ್ದುಗೊಳಿಸಿ ಲೋಕಾಯುಕ್ತ ಮುಂದುವರೆಯಲಿ: ಭಾಸ್ಕರ್ ರಾವ್
ಲಾರಿ ಉರುಳಿ ಬಿದ್ದ ಪರಿಣಾಮ ಟೊಮೆಟೊ ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಚಿಂತಾಮಣಿಯಿಂದ ಟೊಮೆಟೊ ತುಂಬಿಸಿಕೊಂಡು ಬರುತ್ತಿದ್ದ ಲಾರಿ ಇದಾಗಿತ್ತು ಎಂದು ತಿಳಿದುಬಂದಿದೆ. ರಾತ್ರಿ ವೇಳೆ ಹಂಪ್ಸ್‌ನಲ್ಲಿ ಹಾರಿ ನಿಯಂತ್ರಣ ತಪ್ಪಿದ ಪರಿಣಾಮ ಲಾರಿ ರೈಲ್ವೇ ಅಂಡರ್ ಪಾಸ್ ಗೋಡೆಗೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದಿದೆ.
ರಸ್ತೆ ತಿರುವು ಹಾಗೂ ಹಂಪ್ಸ್ ಇರುವ ಬಗ್ಗೆ ಯಾವುದೇ ನಾಮಪಲಕಗಳಿಲ್ಲದಿರುವುದೇ ಈ ಅವಘಡಕ್ಕೆ ಕಾರಣ ಎನ್ನಲಾಗುತ್ತಿದೆ. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಬೇಜವಾಬ್ದಾರಿಯಿಂದ ಅಪಘಾತ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
ಇದೇ ಸ್ಥಳದಲ್ಲಿ ಹಲವಾರು ಬಾರಿ ಅಪಘಾತಗಳು ಸಂಭವಿಸಿದರೂ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಇದನ್ನೂ ಓದಿ: ಕೂದಲುದುರುವ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಲಿದೆ ಈ ಐದು ಆಹಾರ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.