ಅತ್ತಿಗೆಗೆ ಅನೈತಿಕ ಸಂಬಂಧಕ್ಕೆ ಪೀಡನೆ: ಪ್ರಶ್ನಿಸಿದ ಅಣ್ಣನನ್ನೇ ಕೊಂದ ಪಾಪಿ ತಮ್ಮ
Crime News: ಅಣ್ಣನನ್ನು ತಮ್ಮ ಚಾಕುವಿನಿಂದ ಇರಿದು ಕೊಂದ ಘಟನೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚಾಮರಾಜನಗರ: ಅನೈತಿಕ ಸಂಬಂಧದ ವಿಚಾರಕ್ಕೆ ಗಲಾಟೆ ನಡೆದು ಒಡಹುಟ್ಟಿದ ಅಣ್ಣನನ್ನು ತಮ್ಮ ಚಾಕುವಿನಿಂದ ಇರಿದು ಕೊಂದ ಘಟನೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದ ಪ್ರಸಾದ್ (45) ಕೊಲೆಯಾದ ದುರ್ದೈವಿಯಾಗಿದ್ದು ಪ್ರಸಾದ್ (39) ಎಂಬಾತ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.
ಇದನ್ನೂ ಓದಿ: Hassan Pen Drive Case: SIT ಅಧಿಕಾರಿಗಳನ್ನೇ ತಬ್ಬಿಬ್ಬು ಮಾಡಿದ ಪ್ರಜ್ವಲ್ ರೇವಣ್ಣ..!
ಅತ್ತಿಗೆಗೆ ಮೈದುನ ಕುಮಾರ್ ನಿರಂತರವಾಗಿ ಅನೈತಿಕ ಸಂಬಂಧ ಇಟ್ಟುಕೊಳ್ಳುವಂತೆ ಪೀಡಿಸುತ್ತಿದ್ದನಂತೆ, ಇದೇ ವಿಚಾರಕ್ಕೆ ಅಣ್ಣ-ತಮ್ಮನ ನಡುವೆ ಗಲಾಟೆ ಆಗಿ ಬೇರೆ ವಾಸವಾಗಿದ್ದರು.
ಶನಿವಾರ ತಡರಾತ್ರಿ ಅಣ್ಣನ ಮನೆಗೆ ಬಂದ ಕುಮಾರ್, ನನ್ನ ಜೊತೆ ಸಂಬಂಧ ಇಟ್ಟುಕೊಳ್ಳದೇ ಬೇರೆಯವರ ಜೊತೆ ಸಂಬಂಧ ಇಟ್ಟುಕೊಂಡಿದ್ದಾರೆ ಎಂದು ಜಗಳ ತೆಗೆದು, ತನಗೆ ಬುದ್ಧಿವಾದ ಮಾತುಗಳನ್ನಾಡುತ್ತೀಯ ಎಂದು ಕುಮಾರ್ ಚಾಕುವಿನಿಂದ ಇರಿದು ಅಣ್ಣನನ್ನು ಕೊಂದಿದ್ದಾನೆ.
ಇದನ್ನೂ ಓದಿ: Hassan PenDrive Case: CID ಕಚೇರಿಯಲ್ಲೇ 3 ರಾತ್ರಿ ಕಳೆದ ಪ್ರಜ್ವಲ್, ಮೊಬೈಲ್ ಮೇಲೆ SIT ಕಣ್ಣು!
ಇನ್ನು , ಗುಂಡ್ಲುಪೇಟೆ ಠಾಣೆ ಪೊಲೀಸರು ಆರೋಪಿ ಕುಮಾರನನ್ನು ಬಂಧಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಿದ್ದಾರೆ. ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಮೃತನ ಪತ್ನಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.