ಯುವ ನಟ ಸತೀಶ್ ವಜ್ರ ಕೊಲೆ ಪ್ರಕರಣ: ಬಾಮೈದ ಸೇರಿ ಇಬ್ಬರ ಬಂಧನ

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿದ ಆರ್.ಆರ್.ಠಾಣೆ ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಗಳಿಬ್ಬರನ್ನೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Written by - Zee Kannada News Desk | Last Updated : Jun 19, 2022, 09:04 AM IST
  • ಯುವ ನಟ ಸತೀಶ್ ವಜ್ರ ಕೊಲೆ ಪ್ರಕರಣ ಸಂಬಂಧ ಬಾಮೈದ ಸೇರಿ ಇಬ್ಬರ ಬಂಧನ
  • ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು
  • ತನ್ನ ತಂಗಿಗೆ ಸರಿಯಾಗಿ ಚಿಕಿತ್ಸೆ ಕೊಡಿಸಿಲ್ಲವೆಂದು ಬಾವನನ್ನೇ ಹತ್ಯೆ ಮಾಡಿದ ಬಾಮೈದ
ಯುವ ನಟ ಸತೀಶ್ ವಜ್ರ ಕೊಲೆ ಪ್ರಕರಣ: ಬಾಮೈದ ಸೇರಿ ಇಬ್ಬರ ಬಂಧನ title=
ಬಾವನನ್ನೇ ಹತ್ಯೆ ಮಾಡಿದ ಬಾಮೈದ

ಬೆಂಗಳೂರು: ಯುವ ನಟ ಸತೀಶ್ ವಜ್ರ ಕೊಲೆ ಪ್ರಕರಣ ಸಂಬಂಧ ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ಸಿಯಾಗಿದ್ದಾರೆ. ಸತೀಶ್ ಬಾಮೈದ ಸುದರ್ಶನ್ ಹಾಗೂ ಆತನ ಸಹೋದರ ಸಂಬಂಧಿ ನಾಗೇಂದ್ರ ಬಂಧಿತ ಆರೋಪಿಗಳಾಗಿದ್ದಾರೆ.

ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಸತೀಶ್ ವಜ್ರ ಪತ್ನಿ ಸುಧಾ ಇತ್ತೀಚೆಗಷ್ಟೇ ಸಾವನ್ನಪ್ಪಿದ್ದರು. ತನ್ನ ತಂಗಿಗೆ ಸರಿಯಾಗಿ ಚಿಕಿತ್ಸೆ ಕೊಡಿಸಿಲ್ಲವೆಂದು ಬಾವ ಸತೀಶ್ ಮೇಲೆ ಅಂದಿನಿಂದಲೂ ಸುದರ್ಶನ್ ಕೋಪಗೊಂಡಿದ್ದ. ಇದಲ್ಲದೇ ಸುಧಾ ಸಾವನ್ನಪ್ಪಿದ ಬಳಿಕ ಮಗು ಯಾರ ಬಳಿ ಇರಬೇಕು ಎಂಬ ವಿಚಾರಕ್ಕೆ ಬಾವ-ಬಾಮೈದನ ನಡುವೆ ಆಗಾಗ ಜಗಳವಾಗುತ್ತಿತ್ತು ಎನ್ನಲಾಗಿದೆ.

ಇದನ್ನೂ ಓದಿ: ಲೈಟರ್ ವಿಚಾರಕ್ಕೆ ಲಾಂಗ್ ಬೀಸಿದ್ದವನಿಗ ಪೊಲೀಸರ ಅತಿಥಿ 

ಶುಕ್ರವಾರ ರಾತ್ರಿ 10.30ರ ವೇಳೆ ತನ್ನ ಸಂಬಂಧಿ ನಾಗೇಂದ್ರನ ಜೊತೆ ಸತೀಶ್ ಮನೆಗೆ ಬಂದಿದ್ದ ಸುದರ್ಶನ್, ಸಹೋದರಿಯ ಸಾವಿನ ವಿಚಾರವಾಗಿ ಮತ್ತೆ ಜಗಳ ತೆಗೆದಿದ್ದಾನೆ. ಜಗಳ ವಿಕೋಪಕ್ಕೆ ತಿರುಗಿ ಸುದರ್ಶನ್ ತನ್ನ ಬಾವನನ್ನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆಂದು ತಿಳಿದುಬಂದಿದೆ. ಕೊಲೆ ಬಳಿಕ ಆರೋಪಿಗಳು ಸತೀಶ್ ಬೈಕ್ ಸಮೇತ ಎಸ್ಕೇಪ್ ಆಗಿದ್ದರು.

ಯುವನಟ ಸತೀಶ್ ವಜ್ರ ಕೊಲೆಯಾಗಿರುವ ವಿಚಾರ ಶವಿವಾರ ಬೆಳಗ್ಗೆ ಗೊತ್ತಾಗಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ್ದ ಪೊಲೀಸರು ಪರಿಶೀಲನೆ ನಡೆಸಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿದ ಆರ್.ಆರ್.ಠಾಣೆ ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಗಳಿಬ್ಬರನ್ನೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಇಬ್ಬರನ್ನೂ ವಿಚಾರಣೆ ನಡೆಸುತ್ತಿರುವ ಪೊಲೀಸರಿಂದ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಬಗ್ಗೆ ಸ್ವಪಕ್ಷೀಯರಲ್ಲಿ ಹೊಟ್ಟೆಕಿಚ್ಚು ಮಾತ್ರವಲ್ಲ, ದ್ವೇಷವೂ ಇದೆ: ಬಿಜೆಪಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News