ವರ್ಗಾವಣೆ ರದ್ಧತಿಯಾಗಲು 24 ವಿದ್ಯಾರ್ಥಿನಿಯರನ್ನು ಕೂಡಿ ಹಾಕಿದ್ದ ಶಿಕ್ಷಕರು!
ಅಧಿಕಾರಿಗಳು ಮತ್ತು ಸ್ಥಳೀಯ ಪೊಲೀಸರು ಕಾರ್ಯಾಚರಣೆ ನಡೆಸಿ, ಬಳಿಕ ವಿದ್ಯಾರ್ಥಿಗಳನ್ನು ರಕ್ಷಿಸಿ ಹಾಸ್ಟೆಲ್ ಕರೆತಂದಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಲಖಿಂಪುರ ಖೇರಿ(ಉತ್ತರ ಪ್ರದೇಶ): ವರ್ಗಾವಣೆ ಆದೇಶವನ್ನು ರದ್ದುಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಒತ್ತಡ ಹೇರಲು, 24 ವಿದ್ಯಾರ್ಥಿನಿಯರನ್ನು ಇಬ್ಬರು ಶಿಕ್ಷಕರು ಶಾಲೆಯ ಮೇಲ್ಛಾವಣಿಯಲ್ಲಿ ಬೀಗ ಹಾಕಿ ಕೂಡಿ ಹಾಕಿ ಹಿಂಸೆ ನೀಡಿರುವ ಕ್ರೂರ ಘಟನೆ ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಬೆಹ್ಜಾಮ್‌ನಲ್ಲಿರುವ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯದಲ್ಲಿ ನಡೆದಿದೆ.
ಇದನ್ನು ಓದಿ: ಈ ರಾಜ್ಯದಲ್ಲಿ ಕೊರೊನಾ ನಾಲ್ಕನೇ ಅಲೆ...! ಹೈಅಲರ್ಟ್ ಜಾರಿ
ಅಧಿಕಾರಿಗಳು ಮತ್ತು ಸ್ಥಳೀಯ ಪೊಲೀಸರು ಕಾರ್ಯಾಚರಣೆ ನಡೆಸಿ, ಬಳಿಕ ವಿದ್ಯಾರ್ಥಿಗಳನ್ನು ರಕ್ಷಿಸಿ ಹಾಸ್ಟೆಲ್ ಕರೆತಂದಿದ್ದಾರೆ ಎಂದು ಮೂಲಗಳು ತಿಳಿಸಿದೆ.
‘ಶಿಸ್ತಿನ ಆಧಾರದ ಮೇಲೆ ಕಸ್ತೂರಬಾ ಬಾಲಿಕಾ ವಿದ್ಯಾಲಯದಿಂದ ಬೇರೆಡೆಗೆ ಶಿಕ್ಷಕರನ್ನು ವರ್ಗಾವಣೆ ಮಾಡಲಾಗಿತ್ತು. ವರ್ಗಾವಣೆ ಆದೇಶ ರದ್ದುಗೊಳಿಸುವಂತೆ ಜಿಲ್ಲಾಧಿಕಾರಿಗಳ ಮೇಲೆ ಒತ್ತಡ ಹೇರಲು ಶಿಕ್ಷಕರು ಇಂತಹ ತಂತ್ರಗಳನ್ನು ಮಾಡಿದ್ದಾರೆ’ ಎಂದು ಲಖಿಂಪುರ ಖೇರಿಯ ಶಿಕ್ಷಣಾಧಿಕಾರಿ ಲಕ್ಷ್ಮೀಕಾಂತ ಪಾಂಡೆ ಪಿಟಿಐಗೆ ಮಾಹಿತಿ ನೀಡಿದ್ದಾರೆ.
ಘಟನೆ ಕುರಿತಂತೆ ಪಾಂಡೆ ಹಾಗೂ ಶಿಕ್ಷಣ ಇಲಾಖೆಯ ಜಿಲ್ಲಾ ಸಂಯೋಜಕಿ ರೇಣು ಶ್ರೀವಾಸ್ತವ್ ಅವರಿಗೆ ಹಾಸ್ಟೆಲ್ ವಾರ್ಡನ್ ಲಲಿತ್ ಕುಮಾರಿ ಮಾಹಿತಿ ನೀಡಿದ್ದರು. ಬಳಿಕ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಇನ್ನು ಶಿಕ್ಷಕರಾದ ಮನೋರಮಾ ಮಿಶ್ರಾ ಮತ್ತು ಗೋಲ್ಡಿ ಕಟಿಯಾರ್ ವಿರುದ್ಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಇದನ್ನು ಓದಿ: ಈ ರಾಜ್ಯದಲ್ಲಿ ಈಗ ಮಾಸ್ಕ ಧರಿಸುವುದು ಕಡ್ಡಾಯ, ತಪ್ಪಿದಲ್ಲಿ 500 ರೂ.ದಂಡ...!
ಇನ್ನು ಘಟನೆ ಸಂಬಂಧ ಶಿಕ್ಷಣ ಇಲಾಖೆಯ ತನಿಖೆಗೂ ಆದೇಶಿಸಲಾಗಿದೆ. ಮೂರು ದಿನಗಳಲ್ಲಿ ಸಮಿತಿ ವರದಿ ಸಲ್ಲಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತನಿಖೆಯಲ್ಲಿ ಶಿಕ್ಷಕರು ತಪ್ಪಿತಸ್ಥರೆಂದು ಕಂಡುಬಂದರೆ ಸೇವಾ ಒಪ್ಪಂದವನ್ನು ರದ್ದು ಮಾಡುವುದು ಸೇರಿದಂತೆ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಲಕ್ಷ್ಮೀಕಾಂತ ಪಾಂಡೆ ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.