ನವದೆಹಲಿ: ಒಡಿಶಾದ ನಬರಂಗಪುರ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಸರ್ಕಾರಿ ಶಾಲೆಯ ಶೌಚಾಲಯದಲ್ಲಿ 6ನೇ ತರಗತಿಯ ವಿದ್ಯಾರ್ಥಿನಿ ಮೇಲೆ ಇಬ್ಬರು ಶಿಕ್ಷಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.


COMMERCIAL BREAK
SCROLL TO CONTINUE READING

ನವೆಂಬರ್ 9ರಂದು ಈ ಘಟನೆ ನಡೆದಿದ್ದು, ಪ್ರಕರಣ ಸಂಬಂಧ ಇಬ್ಬರು ಶಿಕ್ಷಕರನ್ನು ಪೊಲೀಸರು ಬಂಧಿಸಿದ್ದಾರೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಆಕೆಯ ಪೋಷಕರು ಆಸ್ಪತ್ರೆಗೆ ಕರೆದೊಯ್ದಿದ್ದರು. ಈ ವೇಳೆ ಆಕೆಯನ್ನು ಪರೀಕ್ಷಿಸಿದ ವೈದ್ಯರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ: ವಿಧಾನಸಭಾ ಚುನಾವಣಾ ಸ್ಪರ್ಧೆಗೆ ಇಳಿದ ಮಠಾಧೀಶರು...!


ಈ ಬಗ್ಗೆ ಬಾಲಕಿಯನ್ನು ವಿಚಾರಿಸಿದಾಗ ಆಘಾತಕಾರಿ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ‘ಶೌಚಾಲಯಕ್ಕೆ ತೆರಳಿದ್ದ ವೇಳೆ ಅಲ್ಲಿಗೆ ಬಂದ ಶಾಲೆಯ ಪ್ರಾಂಶುಪಾಲರು ಮತ್ತು ಸಹಾಯಕ ಶಿಕ್ಷಕ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ’ ಎಂದು ಬಾಲಕಿ ಹೇಳಿದ್ದಾಳೆ. ಈ ಬಗ್ಗೆ ಪೊಲೀಸರು ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.


ಈ ಸಂಬಂಧ ಸಂತ್ರಸ್ತ ಬಾಲಕಿಯ ಪೋಷಕರು ಕುಂಡೇಯಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(POCSO) ಕಾಯ್ದೆಯಡಿ ಹಲವು ಸೆಕ್ಷನ್‍ಗಳಡಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ: ಹಬ್ಬದ ದಿನದಂದು ಪ್ರತಿ ಮನೆಗೆ ಸಿಗಲಿದೆ ಉಚಿತ ಗ್ಯಾಸ್ ಸಿಲಿಂಡರ್: ಸರ್ಕಾರದ ಗಿಫ್ಟ್ ಪಡೆಯಲು ಈ ನಿಯಮ ಪಾಲನೆ ಕಡ್ಡಾಯ


ಬಾಲಕಿಯನ್ನು ನಬರಂಗಪುರದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಬಂಧಿಸಿರುವ ಆರೋಪಿ ಶಿಕ್ಷಕರನ್ನು ಜೈಲಿಗೆ ಅಟ್ಟಿರುವ ಪೊಲೀಸರು ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.