Udupi: ಬಾವಿಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ, ಹೃದಯಾಘಾತದಿಂದ ವಿದ್ಯಾರ್ಥಿ ಸಾವು!
Udupi Crime News: ಉಡುಪಿ ಜಿಲ್ಲೆಯಲ್ಲಿ ಸಂಭವಿಸಿದ 2 ಪ್ರತ್ಯೇಕ ಪ್ರಕರಣಗಳಲ್ಲಿ ಬಾವಿಗೆ ಹಾರಿ 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡರೆ, ಹೃದಯಾಘಾತದಿಂದ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.
ಉಡುಪಿ: ಮನೆಯ ಬಾವಿಗೆ ಹಾರಿ 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಾಪುರದ ಕಟ್ಕೇರೆ ಎಂಬಲ್ಲಿ ನಡೆದಿದೆ.
ಕಟ್ಕೇರೆ ನಿವಾಸಿ ರಾಜಶೇಖರ್ ಎಂಬುವರ ಪುತ್ರಿ ರಿಷಿಕ (13) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಸೆಪ್ಟಂಬರ್ ತಿಂಗಳಿನಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ರಿಷಿಕ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಳು. ಸಂಜೆ ಶಾಲೆಯಿಂದ ಮನೆಗೆ ಬಂದವಳೇ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಂದಾಪುರದ ಅಗ್ನಿಶಾಮಕ ದಳದವರು ಮೃತದೇಹವನ್ನು ಮೇಲೆಕ್ಕೆತ್ತಿದ್ದು, ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ರಣತಂತ್ರ
ಹೃದಯಾಘಾತದಿಂದ ವಿದ್ಯಾರ್ಥಿ ಸಾವು!
ಹೃದಯಾಘಾತದಿಂದ ಪ್ರಥಮ ಪಿಯುಸಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಘಟನೆ ಗುರುವಾರ ಸಂಭವಿಸಿದೆ. ಅಸ್ಕಾರ್ (17)ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿ.
ಈತ ಕಲ್ಯಾಣಪುರ ಮಿಲಾಗ್ರಿಸ್ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಹುಟ್ಟಿನಿಂದಲೇ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಈ ವಿದ್ಯಾರ್ಥಿ ಡಿಸೆಂಬರ್ 6ರಂದು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆದಿದ್ದ.
ಡಿಸೆಂಬರ್ 18ರಂದು ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿ ಮನೆಗೆ ಮರಳಿದ್ದ. ದುರದೃಷ್ಟವಶಾತ್ ಊರಿಗೆ ಹಿಂದಿರುಗಿದ ಸಂದರ್ಭ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಕೂಡಲೇ ಸ್ಥಳೀಯ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ವಿದ್ಯಾರ್ಥಿ ಪ್ರಾಣ ಬಿಟ್ಟಿದ್ದಾನೆ.
ಇದನ್ನೂ ಓದಿ: ನಾನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹೋಗಿಲ್ಲ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.