ನವದೆಹಲಿ: ಕೇಂದ್ರ ಸಚಿವ ಕೌಶಲ್ ಕಿಶೋರ್ ಅವರ ಸೋದರಳಿಯ ನಂದ ಕಿಶೋರ್ ಬುಧವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಮಾಹಿತಿ ಪ್ರಕಾರ, ಲಕ್ನೋದ ದುಬಗ್ಗದ ಬಿಗಾರಿಯಾ ಪ್ರದೇಶದಲ್ಲಿ ಆಸ್ತಿ ಡೀಲರ್ ಆಗಿ ಕೆಲಸ ಮಾಡುತ್ತಿದ್ದ ನಂದ್ ಕಿಶೋರ್ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಪ್ರಾಥಮಿಕ ತನಿಖೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದೇ ವೇಳೆ ನಂದ್ ಕಿಶೋರ್ ಪುತ್ರ ವಿಶಾಲ್ ಈ ಬಗ್ಗೆ ಮಾಹಿತಿ ನೀಡಿದ್ದು, ‘ನಮ್ಮ ತಂದೆ ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ತೊಂದರೆಗೊಳಗಾಗಿದ್ದರು’ ಎಂದು ಹೇಳಿದ್ದಾರೆ.
ಇದನ್ನೂ ಓದಿ: Viral Video : ಕತ್ತೆಯನ್ನು ಬೆನ್ನಿನ ಮೇಲೆ ಹೊತ್ತು ಬಸ್ ಮೇಲೆ ಹತ್ತಿದ ವ್ಯಕ್ತಿ!
ಖಾಕಿಪಡೆಯಿಂದ ತನಿಖೆ
ಸ್ಥಳೀಯ ಪೊಲೀಸರು ಪ್ರಕಾರ, ಕೇಂದ್ರ ಸಚಿವರ ಸೋದರಳಿಯ ನಂದ ಕಿಶೋರ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ. ಆತ್ಮಹತ್ಯೆಗೆ ಕಾರಣಗಳು ತಿಳಿದುಬಂದಿಲ್ಲ. ಆತ್ಮಹತ್ಯೆಗೆ ಕಾರಣವನ್ನು ಸಹ ಸಂಬಂಧಿಕರು ಹೇಳಲು ಸಾಧ್ಯವಾಗಿಲ್ಲ.ಈಗ ತನಿಖೆಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕೌಶಲ್ ಕಿಶೋರ್ ಪ್ರಸ್ತುತ ಸಂಸತ್ತಿನಲ್ಲಿ ಮೋಹನ್‌ಲಾಲ್‌ಗಂಜ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಪ್ರಸ್ತುತ ಅವರು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವರಾಗಿದ್ದಾರೆ.
ಶ್ರದ್ಧಾ ಹತ್ಯೆ ಪ್ರಕರಣ ಸಂಬಂಧ ಹೇಳಿಕೆ ನೀಡಿದ್ದರು
ಶ್ರದ್ಧಾ ಕೊಲೆ ಪ್ರಕರಣ ಸಂಬಂಧ ಮಾತನಾಡಿದ್ದ ಕೌಶಲ್ ಕಿಶೋರ್, ‘ವಿದ್ಯಾವಂತ ಹುಡುಗಿಯರು ಲಿವ್-ಇನ್ ಸಂಬಂಧಕ್ಕೆ ಸಿಲುಕಿ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಹೇಳಿದ್ದರು. ‘Live-in Relationships ತಪ್ಪು, ಆದ್ದರಿಂದ ಇದರ ಮೋಹಕ್ಕೆ ಬಲಿಯಾಗಬಾರದು. ಲಿವ್ ಇನ್ ರಿಲೇಶನ್ ಶಿಪ್‍ಗೆ ಹೋಗುವ ಹುಡುಗಿಯರು ಕೋರ್ಟ್‍ನಿಂದ ಅನುಮತಿ ಪತ್ರ ಪಡೆದುಕೊಳ್ಳಬೇಕು. ಇಂತಹ ಸಂಬಂಧವು ಕೆಲವು ದಿನಗಳವರೆಗೆ ಇರುತ್ತದೆ, ನಂತರ ಮುರಿದುಹೋಗುತ್ತದೆ ಮತ್ತು ಈ ರೀತಿಯ ಘಟನೆಗಳು ಸಂಭವಿಸುತ್ತವೆ’ ಎಂದು ಎಚ್ಚರಿಕೆ ನೀಡಿದ್ದರು.
ಇದನ್ನೂ ಓದಿ: Railway Recruitment 2022 : SSLC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ 2521 ಹುದ್ದೆಗಳಿಗೆ ಅರ್ಜಿ!
‘ಹೆಚ್ಚಿನ ವಿದ್ಯಾವಂತ ಹುಡುಗಿಯರು ಲಿವ್ ಇನ್ ರಿಲೇಶನ್ ಶಿಪ್ ಗೆ ಹೋಗುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ವಿದ್ಯಾವಂತ ಹೆಣ್ಣುಮಕ್ಕಳು ಈ ಘಟನೆಗಳಿಂದ ಮತ್ತು ಅವಿದ್ಯಾವಂತ ಹೆಣ್ಣುಮಕ್ಕಳು ಕಲಿಯಬೇಕು’ ಎಂದು ಸಹ ಕೌಶಲ್ ಕಿಶೋರ್ ಸಲಹೆ ನೀಡಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.