Lok Sabha Election 2024: ಚಾಮರಾಜನಗರ ಡಿಸಿಗೆ ಬಂದ ಅನಾಮದೇಯ ವ್ಯಕ್ತಿಯ ಫೋನ್ ಯಿಂದ ಬರೋಬ್ಬರಿ 98 ಕೋಟಿ ಮೌಲ್ಯದ ಬಿಯರ್ ವಶಪಡಿಸಿಕೊಂಡಿರುವ ಘಟನೆ ಚಾಮರಾಜನಗರ ಲೋಕಸಭಾ ಕ್ಷೇತ್ರ (Chamarajanagar Lok Sabha Constituency) ವ್ಯಾಪ್ತಿಯ ನಂಜನಗೂಡು ತಾಲೂಕಿನ ಹಿಮ್ಮಾವು ಗ್ರಾಮದ ಫ್ಯಾಕ್ಟರಿಯಲ್ಲಿ ಏ.2 ರಂದು ನಡೆದಿದೆ.


COMMERCIAL BREAK
SCROLL TO CONTINUE READING

ಚಾಮರಾಜನಗರ ಲೋಕಸಭಾ ಕ್ಷೇತ್ರದ (Chamarajanagar Lok Sabha Constituency) ಚುನಾವಣಾಧಿಕಾರಿ ಸಿ‌.ಟಿ.ಶಿಲ್ಪಾನಾಗ್ ಅವರಿಗೆ ಅನಾಮದೇಯ ವ್ಯಕ್ತಿ ಕರೆ ಮಾಡಿ ಅಕ್ರಮ ಮದ್ಯ (Illegal Liquor) ಶೇಖರಣೆ ಬಗ್ಗೆ ಮಾಹಿತಿ ಕೊಟ್ಟಿದ್ದಾನೆ. ಬಳಿಕ, ಶಿಲ್ಪಾನಾಗ್ ಅವರು ಅಬಕಾರಿ ಡಿಸಿ (Excise DC)  ನಾಗಶಯನಗೆ ಮುಂದಿನ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.


ಡಿಸಿ ಸೂಚನೆ ಮೇರೆಗೆ ನಾಗಶಯನ, ಯುನೈಟೆಡ್ ಬ್ರೀವರೀಸ್ ಲಿಮಿಟೆಡ್‍ನ ಘಟಕಕ್ಕೆ  ಭೇಟಿ ನೀಡಿ ಪರಿಶೀಲಿಸಿದ ನಂತರ ಮೈಸೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ (Joint Commissioner of Excise, Mysore Division) ರೊಂದಿಗೆ ಕಾರ್ಯಾಚರಣೆ ನಡೆಸಿ ಒಟ್ಟಾರೆ 98 ಕೋಟಿ 52 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯವನ್ನು ಜಪ್ತಿ ಮಾಡಿ ಬ್ರೀವರಿ ಘಟಕದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ. 


ಇದನ್ನೂ ಓದಿ- ಬಿಜೆಪಿ ಅವರಿಂದ ಅಪಪ್ರಚಾರ, ಮರಳು ದಂಧೆ ಸಾಬೀತು ಪಡಿಸಿದರೇ ನಾಮಪತ್ರವೇ ಸಲ್ಲಿಸಲ್ಲ: ಸುನಿಲ್ ಬೋಸ್


ಲಭ್ಯವಿರುವ ಮಾಹಿತಿಯ ಪ್ರಕಾರ, ಭೌತಿಕ ದಾಸ್ತಾನನ್ನು ಪರಿಶೀಲಿಸಿದಾಗ ಲೆಕ್ಕದ ಪುಸ್ತಕದ ದಾಸ್ತಾನಿಗಿಂತ ದಾಸ್ತಾನು ಕೊಠಡಿಯಲ್ಲಿ  7 ಸಾವಿರ ವಿವಿಧ ಬ್ರಾಂಡಿನ ರಟ್ಟಿನ ಪೆಟ್ಟಿಗೆಗಳ ಬಿಯರ್ ಹೆಚ್ಚಾಗಿ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಅಕ್ರಮ ಮದ್ಯ ದಾಸ್ತಾನನ್ನು ವಶಪಡಿಸಿಕೊಳ್ಳಲಾಗಿದ್ದು,  ಅಬಕಾರಿ ಕಾಯ್ದೆ ಕಲಂ 9, 10, 11, 12, 14 ಖ/ತಿ 32, 34, 38(ಎ), 43 ಮತ್ತು ಕರ್ನಾಟಕ ಬ್ರೀವರಿಯ ಸನ್ನದು ಷರತ್ತುಗಳ ನಿಯಮ 1, 2, 7 ಮತ್ತು 9 ಮತ್ತು ಕರ್ನಾಟಕ ಅಬಕಾರಿ ಕಾಯ್ದೆ ಬ್ರೀವರಿ 1967 ರ ನಿಯಮ 18 ಮತ್ತು 19 ಬಾಟ್ಲಿಂಗ್ ರೂಲ್ ನಿಯಮ 13 ಕರ್ನಾಟಕ ಅಬಕಾರಿ (ದಾಸ್ತಾನು, ಸಾಗಾಣಿಕೆ, ಆಮದು ಮತ್ತು ರಫ್ತು ಅಮಲು ಪದಾರ್ಥಗಳು) (ಕರ್ನಾಟಕ) ನಿಯಮಗಳು 1967 ರ ನಿಯಮ 7, 89, 3 ಇವುಗಳ ಉಲ್ಲಂಘನೆಯಾಗಿದೆ, ಬ್ರೀವರಿ ಘಟಕದಲ್ಲಿ ತಯಾರಿಸಿರುವ ಒಟ್ಟು 6,03,644 ರಟ್ಟಿನ ಪೆಟ್ಟಿಗೆಗಳು ಹಾಗೂ ಕೆಗ್‍ಗಳಲ್ಲಿರುವ 23,160 ಲೀ., ಮತ್ತು ಬಿಬಿಟಿ ಟ್ಯಾಂಕ್‍ನಲ್ಲಿರುವ ದಾಸ್ತಾನು 5,16,700 ಲೀ., ಯುಟಿ ಟ್ಯಾಂಕ್‍ನಲ್ಲಿರುವ 66,16,700 ಲೀ., ಸೈಲೋಸ್ ಟ್ಯಾಂಕ್‍ನಲ್ಲಿರುವ ಕಚ್ಚಾವಸ್ತು 6,50,458 ಕೆ.ಜಿ ರಂತೆ ವಿವಿಧ ವಸ್ತುಗಳನ್ನು ಜಪ್ತಿ ಮಾಡಿಕೊಂಡು ಬ್ರೀವರಿ ಪ್ರಕರಣದಲ್ಲಿ ನಾಪತ್ತೆಯಾಗಿರುವ 17 ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿಬೇಕಾಗಿರುತ್ತದೆ ಎಂದು ಅಬಕಾರಿ ಡಿಸಿ ನಾಗಶಯನ ಗುರುವಾರ ಮಾಧ್ಯಮವರೊಂದಿಗೆ ಮಾತನಾಡಿ ಮಾಹಿತಿ ಹಂಚಿಕೊಂಡರು.


ಇದನ್ನೂ ಓದಿ- ಧಾರವಾಡದ ಪ್ರತಿ ಹಳ್ಳಿಗೂ ಒಂದೂವರೆ ವರ್ಷದಲ್ಲಿ ಮಲಪ್ರಭಾ ನೀರು ಕೊಟ್ಟೇ ಕೊಡುವೆ: ಸಚಿವ ಪ್ರಹ್ಲಾದ ಜೋಶಿ ಭರವಸೆ


ಜಪ್ತಿಪಡಿಸಿದ ಸ್ಥಳದ ಕೃತ್ಯವು ಚಾಮರಾಜನಗರ ಲೋಕಸಭಾ ಕ್ಷೇತ್ರ (ಪ.ಜಾ)ದ ವ್ಯಾಪ್ತಿಗೆ ಒಳಪಡಲಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಕ್ರಮ ದಾಸ್ತಾನು ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.