ಹೆಂಡತಿಯನ್ನು ಸ್ನೇಹಿತರೊಂದಿಗೆ ಮಲಗಿಸಿದ: ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ ಪಾಪಿ ಗಂಡ...!

ಪತ್ನಿ ಸ್ನೇಹಿತರ ಜೊತೆಗೆ ಕಳೆದ ಖಾಸಗಿ ಕ್ಷಣಗಳ ವಿಡಿಯೋ ಹಾಗೂ ಫೋಟೊಗಳನ್ನು ಪತಿ ಜಾನ್‌ಪಾಲ್ ಆಕೆಗೆ ಗೊತ್ತಾಗದಂತೆ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದ. ಪತಿಯ ಹಿಂಸೆ ತಾಳಲಾರದೇ ಪತಿಯ ಇಬ್ಬರು ಸ್ನೇಹಿತರ ಜೊತೆಗೆ ಹಲವಾರು ಬಾರಿ ದೈಹಿಕ ಸಂಪರ್ಕ ಹೊಂದಿದ್ದೇನೆ ಅಂತಾ ನೊಂದ ಮಹಿಳೆ ಹೇಳಿದ್ದಾಳೆ.

Written by - VISHWANATH HARIHARA | Edited by - Puttaraj K Alur | Last Updated : Dec 10, 2022, 04:00 PM IST
  • ಹೆಂಡತಿಗೆ ತನ್ನ ಸ್ನೇಹಿತರ ಜೊತೆಗೆ ಹಾಸಿಗೆ ಹಂಚಿಕೊಳ್ಳುವಂತೆ ಬೆದರಿಸಿದ ಪಾಪಿ ಪತಿ
  • ಖಾಸಗಿ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದು ಟೆಕ್ಕಿ ಪತ್ನಿಗೆ ಬ್ಲ್ಯಾಕ್‌ಮೇಲ್
  • ಸಿಲಿಕಾನ್ ಸಿಟಿಯಲ್ಲಿ ಸೈಕೋ ಪತಿಯ ಕಿರುಕುಳಕ್ಕೆ ಬೇಸತ್ತ ಮಹಿಳೆಯಿಂದ ಪೊಲೀಸರಿಗೆ ದೂರು
ಹೆಂಡತಿಯನ್ನು ಸ್ನೇಹಿತರೊಂದಿಗೆ ಮಲಗಿಸಿದ: ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ ಪಾಪಿ ಗಂಡ...! title=
ಟೆಕ್ಕಿ ಪತ್ನಿಗೆ ಬ್ಲ್ಯಾಕ್‌ಮೇಲ್ !

ಬೆಂಗಳೂರು: ಪತ್ನಿಯ ಮೇಲೆ ಪರಪುರುಷರ ಕಣ್ಣು ಬಿದ್ದರೆ ಸಾಕು ಎಂತಹ ಗಂಡನಿಗೂ‌ ಸಹ ಕೋಪ ಬರುತ್ತದೆ.‌ ಆದರೆ, ಇಲ್ಲೊಬ್ಬ ಪಾಪಿ ಪತಿ ಹೆಂಡತಿಗೆ ತನ್ನ ಸ್ನೇಹಿತರ ಜೊತೆಗೆ ಹಾಸಿಗೆ ಹಂಚಿಕೊಳ್ಳುವಂತೆ ಬೆದರಿಸಿ ಆ ಖಾಸಗಿ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದು ಟೆಕ್ಕಿ ಪತ್ನಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. 

ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಥಣಿಸಂದ್ರದ ನಿವಾಸಿ 34 ವರ್ಷದ ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಆಕೆಯ ಪತಿ ಜಾನ್ ಪಾಲ್ (36) ವಿರುದ್ಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ: ಮೆದುಳು ನಿಷ್ಕ್ರಿಯ: ವಿದ್ಯಾರ್ಥಿಯ ಅಂಗಾಂಗ‌ ದಾನ

ದೂರುದಾರ ಮಹಿಳೆಯು 2011ರಲ್ಲಿ ಜಾನ್‌ಪಾಲ್‌ನನ್ನು ವಿವಾಹವಾಗಿದ್ದಳು. ದಂಪತಿಗೆ ಒಬ್ಬ ಮಗನಿದ್ದಾನೆ. ಮದುವೆಯಾದಾಗಿನಿಂದ ಜಾನ್ ಮದ್ಯಪಾನ ಮಾಡಿ ಬಂದು ಹಲ್ಲೆ ನಡೆಸಿ ಹೆಂಡತಿಗೆ ಹಿಂಸೆ ಕೊಡುತ್ತಿದ್ದ. 2015ರಿಂದ ತನ್ನ ಸ್ನೇಹಿತರೊಂದಿಗೆ ಮಲಗುವಂತೆ ಒತ್ತಾಯ ಮಾಡುತ್ತಿದ್ದ ಆತ ಒಪ್ಪದಿದ್ದಾಗ ಹೆಂಡತಿಯ ಮೇಲೆ ಹಲ್ಲೆ ನಡೆಸಿ ಹಿಂಸೆ ಕೊಡುತ್ತಿದ್ದ. ಪತಿಯ ಹಿಂಸೆ ತಾಳಲಾರದೇ ಪತಿಯ ಇಬ್ಬರು ಸ್ನೇಹಿತರ ಜೊತೆಗೆ ಹಲವಾರು ಬಾರಿ ದೈಹಿಕ ಸಂಪರ್ಕ ಹೊಂದಿದ್ದೇನೆ ಅಂತಾ ನೊಂದ ಮಹಿಳೆ ಹೇಳಿದ್ದಾಳೆ.

ಪತ್ನಿ ಸ್ನೇಹಿತರ ಜೊತೆಗೆ ಕಳೆದ ಖಾಸಗಿ ಕ್ಷಣಗಳ ವಿಡಿಯೋ ಹಾಗೂ ಫೋಟೊಗಳನ್ನು ಪತಿ ಜಾನ್‌ಪಾಲ್ ಗೊತ್ತಾಗದಂತೆ ಆತನ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದ. ಇತ್ತೀಚೆಗೆ ನನಗೆ ಈ ರೀತಿ ಮಾಡೋದು  ಇಷ್ಟವಾಗದೆ ಇರುವುದರಿಂದ ಆತನಿಂದ ದೂರ ಉಳಿದಿದ್ದೆ ಎಂದು ದೂರಿನಲ್ಲಿ ಮಹಿಳೆ ಉಲ್ಲೇಖಿಸಿದ್ದಾಳೆ.

ವಿಚ್ಛೇದನ ಕೇಳಿದಕ್ಕೆ ಬ್ಲ್ಯಾಕ್‌ಮೇಲ್!

ಇನ್ನೂ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ನನ್ನ ಸಹೋದರಿ 2019ರಿಂದ ನಮ್ಮೊಂದಿಗೆ ವಾಸಿಸುತ್ತಿದ್ದಳು. ಇಷ್ಟಕ್ಕೆ ಸುಮ್ಮನಾಗದ ಪತಿ ನಿನ್ನ ತಂಗಿಯನ್ನು ನನ್ನ ಜೊತೆ ಮಲಗಲು ಹೇಳು ಎಂದು ಒತ್ತಾಯಿಸುತ್ತಿದ್ದ. ಇದರಿಂದ ಮನನೊಂದ ಪತಿಯಿಂದ ವಿಚ್ಛೇದನ ಪಡೆದುಕೊಳ್ಳಲು ಮುಂದಾಗಿದ್ದೆ. ವಿಚ್ಛೇದನ ಕೇಳಿದಾಗಲೆಲ್ಲಾ ಖಾಸಗಿ ವಿಡಿಯೋ ಮತ್ತು ಪೋಟೋಗಳನ್ನು ತೋರಿಸಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದಾಗಿ ಬೆದರಿಸಿದ್ದ.

ಇದನ್ನೂ ಓದಿಗೃಹ ಸಚಿವರ ಎದುರಲ್ಲೇ ಬಿಜೆಪಿ -ಕಾಂಗ್ರೆಸ್ ಕಾರ್ಯಕರ್ತರ ಕಿತ್ತಾಟ..!

ಡಿ.4ರಂದು ಮತ್ತೆ ವಿಚ್ಛೇದನ ಕೇಳಿದಾಗ 2 ಖಾಸಗಿ ಫೋಟೋಗಳನ್ನು ನನ್ನ ವಾಟ್ಸಾಪ್‌ಗೆ ಕಳುಹಿಸಿದ್ದ. ಇವುಗಳನ್ನು ನಿನ್ನ ಸ್ನೇಹಿತರಿಗೆ, ನಿನ್ನ ತಂದೆ-ತಾಯಿಗೆ ಕಳುಹಿಸಿ, ಇಂಟರ್ನೆಟ್ ಗ್ರೂಪ್‌ಗಳಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಸಿದ್ದಾನೆ. ಪತಿ ಮದ್ಯಪಾನದ ಜೊತೆಗೆ ಗಾಂಜಾ ಸೇವನೆ ಮಾಡುತ್ತಿದ್ದು, ಮನೆಯಲ್ಲಿ 2 ಪಾಟ್‌ಗಳಲ್ಲಿ ಗಾಂಜಾ ಸಸ್ಯ ಬೆಳೆಸಿದ್ದಾನೆಂದು ಪತ್ನಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News