ಬೆಂಗಳೂರು: ಚಾಲಾಕಿ ಹೆಂಡಿತಿಯೊಬ್ಬಳು ಪತಿಯ ಕುಟುಂಬವನ್ನು ಟಾರ್ಗೆಟ್ ಮಾಡಿ ಇಡೀ ಕುಟುಂಬಕ್ಕೆ ಮಾನಸಿಕ ಹಿಂಸೆ ನೀಡಿದ್ದಲ್ಲದೆ ಮನೆಯಲ್ಲಿದ್ದ 10 ಲಕ್ಷ ನಗದು ಹಾಗೂ ಲಕ್ಷಾಂತರ ರೂಪಾಯಿ ಚಿನ್ನಾಭರಣ ದೋಚಿದ್ದಾಳೆ ಎಂದು ಆರೋಪಿಸಿ ಸೊಸೆ ವಿರುದ್ಧ ಅತ್ತೆಯೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಪದ್ಮನಾಭನಗರದ ಕಮಲ ಎಂಬುವರು ನೀಡಿದ ದೂರಿನ ಮೇರೆಗೆ ಸೊಸೆ ಗೌತಮಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಬನಶಂಕರಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕಮಲ ತನ್ನ ಮಗನಿಗೆ ಯುವತಿಯೊಂದಿಗೆ ನಿಶ್ಚಿತಾರ್ಥ ಫಿಕ್ಸ್ ಮಾಡಿದ್ದರು. ಆದರೆ ಕೌಟುಂಬಿಕ ಕಾರಣಕ್ಕಾಗಿ ಎಂಗ್ಮೇಜ್ಮೆಂಟ್ ರದ್ದಾಗಿತ್ತು. ಈ ವೇಳೆ ಸಂಬಂಧಿಯಾಗಿದ್ದ ಗೌತಮಿನೊಂದಿಗೆ ವಿವಾಹ ನಿಶ್ಚಯಿಸಿದ್ದರು. ಅದರಂತೆ ಕಳೆದ ಜುಲೈ 10 ರಂದು ಬನಶಂಕರಿಯಲ್ಲಿ ಅದ್ದೂರಿಯಾಗಿ ಮದುವೆ ನಡೆದಿತ್ತು. ಸೊಸೆಗೆ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನ ವರನ ಕಡೆಯವರು ನೀಡಿದ್ದರು. ಇದಕ್ಕೆ ಅಪವಾದವೆಂಬಂತೆ ಮದುವೆಯಾದ ಮೊದಲ ದಿನದಿಂದಲೂ ಗೌತಮಿ ಅತ್ತೆ ಮನೆಯಲ್ಲಿ ಕಿರಿಕ್ ಮಾಡಿಕೊಂಡಿದ್ದಾಳೆ.
ಇದನ್ನೂ ಓದಿ: Bomb Threat Call : ಮುಂಬೈನ ಸುಪ್ರಸಿದ್ಧ ಹೋಟೆಲ್‌ಗೆ ಬಂತು ಬಾಂಬ್ ಬೆದರಿಕೆ ಕರೆ
ಮೊದಲೇ ನಿರ್ಧರಿಸಿದಂತೆ ಪತ್ನಿ ಅಮೆರಿಕಕ್ಕೆ ಕರೆದೊಯ್ಯಲು ಸಿದ್ಧತೆ ನಡೆಸುವಾಗಲೇ ವರಸೆ ಶುರುಮಾಡಿಕೊಂಡಿದ್ದಳು. ಮೆಡಿಕಲ್ ವೀಸಾದಡಿ ವಿದೇಶಕ್ಕೆ ಬರುತ್ತೇನೆ ಎಂದಿದಕ್ಕೆ ಪತಿ ಕುಟುಂಬಸ್ಥರು 50 ಸಾವಿರ ರೂಪಾಯಿ ಖರ್ಚು ಮಾಡಿ ವೀಸಾ ಮಾಡಿಸಿದ್ದರು. ಅಮೆರಿಕಗೆ ತೆರಳಲು 1.25 ಲಕ್ಷ ರೂಪಾಯಿ ವಿಮಾನ ಟಿಕೆಟ್ ಕೂಡ ಬುಕ್ ಮಾಡಿದ್ದರು. ಆದರೆ ಹುಷಾರಿಲ್ಲ ಎಂದು ಸಬೂಬು ನೀಡಿ ಮನೆಯಲ್ಲಿದ್ದ 10 ಲಕ್ಷ ಹಣ,18 ಲಕ್ಷ ಮೌಲ್ಯದ ಚಿನ್ನಾಭರಣ ಸಮೇತ ತವರು ಮನೆ ಸೇರಿದ್ದಾಳೆ. ಗಂಡನ ಮನೆಯವರು ಕಿರುಕುಳ ನೀಡಿರುತ್ತಿರುವುದಾಗಿ ದೂರು ನೀಡುವುದಾಗಿ ಗಂಡನಿಗೆ ಧಮ್ಕಿ ಹಾಕಿದ್ದಾಳೆ.
ಮಗಳಿಗೆ ಬುದ್ದಿ ಹೇಳುವಂತೆ ಆಕೆಯ ಪೋಷಕರಿಗೆ ಹೇಳಿದಕ್ಕೆ ಪ್ರತಿರೋಧ ವ್ಯಕ್ತಪಡಿಸಿರುವ ಗೌತಮಿ ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸುವುದಾಗಿ ಬೆದರಿಸಿದ್ದಾರೆ ಎಂದು ಕಮಲ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಗೌತಮಿ ತನ್ನ ಹುಟ್ಟೂರಾದ ತಿರುಪತಿಯಲ್ಲಿ ಗಂಡನ ಮನೆಯವರ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪದಡಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ ಎನ್ನಲಾಗಿದೆ.
ಇದನ್ನೂ ಓದಿ: ಜೂ. ಎನ್‌ಟಿಆರ್ - ಕೇಂದ್ರ ಸಚಿವ ಅಮಿತ್ ಶಾ ಭೇಟಿ! ಈ ಮೀಟ್ & ಗ್ರೀಟ್ ಹಿಂದಿನ ಉದ್ದೇಶವೇನು?
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.