ನವದೆಹಲಿ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮನೆಬಿಟ್ಟು ಹೋಗಿದ್ದ ಪತ್ನಿಯ ಜುಟ್ಟು ಹಿಡಿದ ಪತಿಯೊಬ್ಬ ರಸ್ತೆಯಲ್ಲಿ ಎಳೆದುಕೊಂಡು ಬಂದಿದ್ದಾನೆ. ಈ ಆಘಾತಕಾರಿ ಘಟನೆ ಪಂಜಾಬ್​ನ ಗುರುದಾಸ್​ಪುರದ ಚೋಧ್ಯಾನ್ ಗ್ರಾಮದಲ್ಲಿ ನಡೆದಿದೆ. ಇದರ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.


COMMERCIAL BREAK
SCROLL TO CONTINUE READING

ಸಂತ್ರಸ್ತ ಮಹಿಳೆಯನ್ನು ಮೀನು ಎಂದು ಗುರುತಿಸಲಾಗಿದೆ. ವರದಕ್ಷಿಣೆ ತರುವಂತೆ ಪತಿ ಹೊಡೆದು ಹಿಂಸೆ ನೀಡುತ್ತಿದ್ದ ಅಂತಾ ಮಹಿಳೆಯ ತಾಯಿ ಭೈನಿ ಮಿಯಾನ್ ಪೊಲೀಸ್‍ ಠಾಣೆಗೆ ದೂರು ನೀಡಿದ್ದಾರೆ. ವರದಕ್ಷಿಣೆ ವಿಚಾರವಾಗಿ ಮೀನು ಮೇಲೆ ಆಕೆಯ ಅತ್ತೆ ಹಲ್ಲೆ ನಡೆಸಿದ್ದಳಂತೆ. ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತ ಆಕೆ ಗಂಡನ ಮನೆಯಿಂದ ಚಿಕ್ಕಮ್ಮನ ಮನೆಗೆ ಹೋಗಿದ್ದಳಂತೆ. ಇದರಿಂದ ಕೋಪಗೊಂಡ ಪತಿ ಮನೆಗೆ ಬಂದು ಮೀನುಗೆ ಥಳಿಸಿ ಆಕೆಯ ಕೂದಲು ಹಿಡಿದು ಎಳೆದೊಯ್ದಿದ್ದಾನೆ.


ಇದನ್ನೂ ಓದಿ: ಚಂದ್ರನ ಮೇಲ್ಮೈಯಲ್ಲಿ ಯಾಕೆ ಚಂದ್ರಯಾನ-3 ಸ್ಪಷ್ಟ ಹೆಜ್ಜೆ ಗುರುತು ಮೂಡಿಸಿಲ್ಲ?


ಮೀನುಳಿಗೆ ಥಳಿಸಿ ಆಕೆಯನ್ನು ನಡುರಸ್ತೆಯಲ್ಲಿಯೇ ಎಳೆದೊಯ್ಯುತ್ತಿದ್ದರು ಜನರು ಮಾತ್ರ ಮೂಕಪ್ರೇಕ್ಷರಂತೆ ನಿಂತು ನೋಡುತ್ತಿದ್ದರಂತೆ. ಕೆಲವರು ಈ ಘಟನೆಯ ದೃಶ್ಯವನ್ನು ತಮ್ಮ ಮೊಬೈಲ್‍ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ‘ವರದಕ್ಷಿಣೆ ನೀಡುವಂತೆ ತನ್ನ ಪತಿ ಹಾಗೂ ಅತ್ತೆ ನನಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ. ನಮ್ಮ ಆರ್ಥಿಕ ಪರಿಸ್ಥಿತಿ ಸರಿಯಿಲ್ಲದ ಕಾರಣ ಹಣ ನೀಡಲು ಸಾಧ್ಯವಾಗಿಲ್ಲ. ಹೀಗಾಗಿ ಕಿರುಕುಳಕ್ಕೆ ಹೆದರಿ ನಾನು ಮನೆ ಬಿಟ್ಟು ಹೋಗಿದ್ದೆ’ ಅಂತಾ ಸಂತ್ರಸ್ತ ಮಹಿಳೆ ಹೇಳಿದ್ದಾಳೆ.


ಮೀನು ಅವರ ತಾಯಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಈ ಸಂಬಂಧ ದೂರು ಸ್ವೀಕರಿಸಿರವ ಪೊಲೀಸರು ಸಂತ್ರಸ್ತ ಮಹಿಳೆಯ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ತನಿಖೆ ಆರಂಭಿಸುವುದಾಗಿ ಸಬ್ ಇನ್ಸ್ ಪೆಕ್ಟರ್ ಮೋಹನ್ ಲಾಲ್ ತಿಳಿಸಿದ್ದಾರೆ. ಮಗಳಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿರುವ ಗಂಡನ ಮನೆಯವರ ವಿರುದ್ಧ ಕ್ರಮ ಕೈಗೊಂಡು ನಮಗೆ ನ್ಯಾಯ ದೊರಕಿಸಿಕೊಡಬೇಕೆಂದು ಮೀನು ತಾಯಿ ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ.


ಇದನ್ನೂ ಓದಿ: ಪಾಕಿಸ್ತಾನದ ನೆಲದಲ್ಲೂ ಹತ್ಯೆಗಳ ಹಿಂದೆ ಭಾರತದ ಕೈವಾಡ ಆರೋಪಿಸಿದ ಪಾಕಿಸ್ತಾನ: 'ಜಮಾಲ್ ಖಶೊಗ್ಗಿ' ಪ್ರಕರಣ ಭಾರತದಲ್ಲಿ ಮರುಕಳಿಸಿತೇ?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.