Gang rape case: ಭಾವಿ ಪತಿ ಎದುರಿನಲ್ಲೇ ಯುವತಿಯ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಒಡಿಶಾದ ನಯಾಗಢ್ ಜಿಲ್ಲೆಯ ಕಾಡಿನಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

21 ವರ್ಷದ ಯುವತಿಯ ಮೇಲೆ ಮೂವರು ದುಷ್ಕರ್ಮಿಗಳು ಆಕೆಯ ಭಾವಿ ಪತಿ ಎದುರಲ್ಲೇ ಹೀನ ಕೃತ್ಯವನ್ನು ಎಸಗಿದ್ದಾರೆ ಎಂದು ಫತೇಗಢ ಪೊಲೀಸರು ತಿಳಿಸಿದ್ದಾರೆ. ಯುವತಿ ಭಾವಿ ಪತಿ ಜೊತೆಗೆ ಸಂಜೆ ಫತೇಗಢ್ ರಾಮ ಮಂದಿರಕ್ಕೆ ಭೇಟಿ ನೀಡಿ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ.


ಇದನ್ನೂ ಓದಿ: ಅದಿರು ನಾಪತ್ತೆ ಪ್ರಕರಣ: ನ್ಯಾಯಮೂರ್ತಿ ಸಂತೋಷ್‌ ಗಜಾನನ ಭಟ್‌ರಿಂದ ತೀರ್ಪು


ಈ ವೇಳೆ ಮೂವರು ದುಷ್ಕರ್ಮಿಗಳು ಪಿತಾಖೈ ಅರಣ್ಯದ ಬಳಿ ಇಬ್ಬರನ್ನು ಅಡ್ಡಗಟ್ಟಿ ಬಲವಂತವಾಗಿ ಕಾಡಿಗೆ ಕರೆದೊಯ್ದು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಘಟನೆ ವೇಳೆ ಆಕೆಯ ಭಾವಿ ಪತಿಗೆ ಚಾಕುವನ್ನು ತೋರಿಸಿ ಬೆದರಿಸಿದ್ದಾರೆಂದು ಖಂಡಪದ ಉಪವಿಭಾಗದ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. 


ಆರೋಪಿಗಳು ಘಟನೆಯ ದೃಶ್ಯವನ್ನು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿ ಸೋಷಿಯಲ್‌ ಮೀಡಿಯಾದಲ್ಲಿ ಅಪ್‌ಲೋಡ್‌ ಮಾಡಿದ್ದಾರೆ. ನಂತರ ಈ ವಿಡಿಯೋ ಸಖತ್‌ ವೈರಲ್‌ ಆಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈ ಸಂಬಂಧ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿಸಿದದ್ದಾರೆ.


ಇದನ್ನೂ ಓದಿ: ಬಿವೈ ವಿಜಯೇಂದ್ರ ನೇತೃತ್ವದಲ್ಲಿ ರಣತಂತ್ರ


ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ. ಆಕೆಯ ವೈದ್ಯಕೀಯ ಪರೀಕ್ಷೆಯನ್ನು ಸಹ ಮಾಡಲಾಗುವುದು ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.