ಪ್ರೀತಿಸಿದ ಹುಡುಗಿ ಅಥವಾ ಹುಡುಗನನ್ನು ಪಡೆಯಲು ಮನೆಯವರನ್ನು ಎದುರು ಹಾಕಿಕೊಳ್ಳುವುದು ಸಾಮಾನ್ಯ. ಆದರೆ ಇಲ್ಲೊಂದು ಜೋಡಿ ಹೆತ್ತವರ ಜತೆಗೆ ಇಡೀ ಕುಟುಂಬವನ್ನೇ ಕೊಂದು ಹಾಕಿದ್ದಾರೆ. ಇವರ ಪ್ರೀತಿಗೆ ಮನೆಯಲ್ಲಿ ಒಪ್ಪಿಗೆ ಸಿಗಲಿಲ್ಲ ಎಂಬ ಕಾರಣಕ್ಕೆ ಯುವತಿಯೊಬ್ಬಳು ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಮನೆಯವರ ಊಟದಲ್ಲಿ ವಿಷ ಬೆರೆಸಿ ಕುಟುಂಬಸ್ಥರನ್ನೆಲ್ಲ ಕೊಂದು ಹಾಕಿದ್ದಾಳೆ. ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಈ ಭಯಾನಕ ಘಟನೆ ಬೆಳಕಿಗೆ ಬಂದಿದೆ. ಪ್ರೀತಿಗಾಗಿ ತನ್ನ ಕುಟುಂಬದ 13 ಸದಸ್ಯರನ್ನು ಕೊಂದ ಯುವತಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.  


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಮುಡಾ ಹಗರಣ ಮುಚ್ಚಿ ಹಾಕಲು ಜಾತಿಗಣತಿ ನಾಟಕ: ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ


ಪಾಕಿಸ್ತಾನದ ಖೈರ್‌ಪುರ ಸಮೀಪದ ಹೈಬತ್ ಖಾನ್ ಬ್ರೋಹಿ ಗ್ರಾಮದಲ್ಲಿ ಆಗಸ್ಟ್ 19 ರಂದು ಒಂದೇ ಕುಟುಂಬದ 13 ಜನರು ಸಾವನ್ನಪ್ಪಿದ ಘಟನೆ ಪೊಲೀಸರ ಗಮನಕ್ಕೆ ಬಂದಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಅವರ ಮಗಳೇ ಈ ಕೃತ್ಯ ಎಸಗಿರುವುದು ಪೊಲೀಸರಿಗೆ ಗೊತ್ತಾಗಿದೆ. ಪ್ರೀತಿಸಿದ ಹುಡುಗನನ್ನು ಮದುವೆಯಾಗಲು ತಂದೆ-ತಾಯಿ ಒಪ್ಪದಿದ್ದಕ್ಕೆ ಕುಪಿತಳಾದ ಆಕೆ ತನ್ನ ಬಾಯ್ ಫ್ರೆಂಡ್ ಜೊತೆ ಸೇರಿ ಸಂಚು ರೂಪಿಸಿ ರಾತ್ರಿ ಊಟದಲ್ಲಿ ವಿಷ ಸೇರಿಸಿದ್ದಾಳೆ. ಮನೆಯಲ್ಲಿದ್ದ ಎಲ್ಲರಿಗೂ ಬಡಿಸಿದ್ದಾಳೆ. ಈ ಊಟ ಮಾಡಿದ ಮನೆ ಮಂದಿಯೆಲ್ಲ ತೀವ್ರ ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದ ವೇಳೆ 13 ಮಂದಿ ಸಾವನ್ನಪ್ಪಿದ್ದಾರೆ. 


ಖೈರ್‌ಪುರದ ಹಿರಿಯ ಪೊಲೀಸ್ ಅಧಿಕಾರಿ, ಆಹಾರದಲ್ಲಿ ಬೆರೆತ ವಿಷದಿಂದ ಇವರು ಸಾವನ್ನಪ್ಪಿದ್ದಾರೆ ಎಂದು ಪೋಸ್ಟ್‌ಮಾರ್ಟಮ್ ವರದಿಯಿಂದ ತಿಳಿದುಬಂದಿದೆ. ಮೃತರ ಸ್ವಂತ ಮಗಳು ಮತ್ತು ಆಕೆಯ ಪ್ರಿಯಕರ ಮನೆಯಲ್ಲಿದ್ದ ಗೋಧಿ ಹಿಟ್ಟಿನಲ್ಲಿ ವಿಷ ಬೆರೆಸಿರುವುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಪೊಲೀಸರು ಭಾನುವಾರ ಆಕೆಯನ್ನು ಬಂಧಿಸಿದ್ದಾರೆ.


ಇದನ್ನೂ ಓದಿ: ಸಿಎಂ ವಾಹನ ಬಂದ್ರೆ ನಂಗೇನು?; ಪೊಲೀಸರಿಗೆ ಆವಾಜ್ ಹಾಕಿ ಡಿವೈಡರ್ ಮೇಲೆ ಕಾರು ಚಲಾಯಿಸಿದ ಜನಾರ್ದನ ರೆಡ್ಡಿ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.