Bangalore: ಆಂಟಿ ಎಂದ ವ್ಯಕ್ತಿಯ ಕಪಾಳಕ್ಕೆ ಬಾರಿಸಿದ ಮಹಿಳೆ..!

Bengaluru Crime News: ಹಲ್ಲೆಗೊಳಗಾದ ಎಟಿಎಂ ಭದ್ರತಾ ಸಿಬ್ಬಂದಿ ಮಹಿಳೆಯ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಈ ಬಗ್ಗೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು, ಹಲ್ಲೆ ನಡೆಸಿದ ಮಹಿಳೆಗೆ ಪೊಲೀಸರು ನೋಟಿಸ್ ನೀಡಿದ್ದಾರೆಂದು ತಿಳಿದುಬಂದಿದೆ.

Written by - Puttaraj K Alur | Last Updated : Sep 24, 2023, 07:51 PM IST
  • ಆಂಟಿ ಎಂದು ಕರೆದ ವ್ಯಕ್ತಿಗೆ ಆಕ್ರೋಶಗೊಂಡ ಮಹಿಳೆಯೊಬ್ಬರು ಕಪಾಳಕ್ಕೆ ಬಾರಿಸಿದ್ದಾರೆ
  • 60 ವರ್ಷದ ಮಹಿಳೆ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ ಎಟಿಎಂ ಘಟಕದ ಭದ್ರತಾ ಸಿಬ್ಬಂದಿ
  • ಒಂದು ವಾರದ ಹಿಂದೆ ಮಲ್ಲೇಶ್ವರಂನಲ್ಲಿ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ
Bangalore: ಆಂಟಿ ಎಂದ ವ್ಯಕ್ತಿಯ ಕಪಾಳಕ್ಕೆ ಬಾರಿಸಿದ ಮಹಿಳೆ..! title=
(Representative image/iStock)

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ತಮಗೆ ಆಂಟಿ ಎಂದು ಕರೆದ ವ್ಯಕ್ತಿಗೆ ಆಕ್ರೋಶಗೊಂಡ ಮಹಿಳೆಯೊಬ್ಬರು ಕಪಾಳಕ್ಕೆ ಬಾರಿಸಿದ್ದಾರೆ. ಮಲ್ಲೇಶ್ವರಂ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.   

ಕ್ಷುಲ್ಲಕ ಕಾರಣಕ್ಕೆ ತನ್ನ ಮೇಲೆ ಹಲ್ಲೆ ನಡೆಸಿದ 60 ವರ್ಷದ ಮಹಿಳೆಯ ವಿರುದ್ಧ ಎಟಿಎಂ ಘಟಕದ ಭದ್ರತಾ ಸಿಬ್ಬಂದಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತನ್ನ ಮೇಲೆ ಹಲ್ಲೆ ನಡೆಸಿದ್ದು ಅಲ್ಲದೆ ಜೀವ ಬೆದರಿಕೆ ಹಾಕಿದ್ದಾಗಿ ಆತ ದೂರಿನಲ್ಲಿ ಉಲ್ಲೇಖಿಸಿದ್ದಾನೆ.

ಇದನ್ನೂ ಓದಿ: ವರದಕ್ಷಿಣೆಯ ಕಿರುಕುಳದಿಂದ ಮಹಿಳೆಯ ಕೊಲೆ ಆರೋಪ

ಘಟನೆಯ ವಿವರ

ಮಲ್ಲೇಶ್ವರಂ ಠಾಣಾ ವ್ಯಾಪ್ತಿಯಲ್ಲಿನ ಎಟಿಎಂ ಘಟಕಕ್ಕೆ ಹಣ ತುಂಬಲು ಕಸ್ಟೋಡಿಯನ್​ ಬಂದಿದ್ದರು. ಈ ವೇಳೆ ಎಟಿಎಂ ದ್ವಾರದ ಮುಂಭಾಗದಲ್ಲಿ ಮಹಿಳೆಯೊಬ್ಬರು ನಿಂತಿದ್ದರು. ಈ ವೇಳೆ ಭದ್ರತಾ ಸಿಬ್ಬಂದಿ ‘ಆಂಟಿ.. ಸ್ವಲ್ಪ ಪಕ್ಕಕ್ಕೆ ಸರಿದು ನಿಲ್ಲಿ’ ಎಂದು ಹೇಳಿದ್ದಾನೆ. ತನಗೆ ಆಂಟಿ ಎಂದು ಕರೆದಿದ್ದಕ್ಕೆ ಮಹಿಳೆಗೆ ಕಡುಕೋಪ ಬಂದಿದೆ.

‘ನನಗೆ ಹೇಗೆ ಆಂಟಿ ಅಂತಾ ಕರೆದೆ ನೀನು’ ಅಂತಾ ಆ ಮಹಿಳೆ ಭದ್ರತಾ ಸಿಬ್ಬಂದಿಯೊಂದಿಗೆ ಜಗಳ ಆರಂಭಿಸಿದ್ದಾಳೆ. ಈ ವೇಳೆ ಆತನ ಕಪಾಳಕ್ಕೆ ಬಾರಿಸಿದ್ದಾಳೆ. ಜೊತೆಗೆ ಆತನಿಗೆ ಜೀವ ಬೆದರಿಕೆಯನ್ನೂ ಹಾಕಿದ್ದಾಳೆಂದು ಆರೋಪಿಸಲಾಗಿದೆ. 1 ವಾರದ ಹಿಂದೆ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಮಹಿಳಾ ಹಾಸ್ಟೇಲ್‌ ಸಮೀಪದಲ್ಲಿ ಚಿರತೆ ಸಂಚಾರ

ಹಲ್ಲೆಗೊಳಗಾದ ಎಟಿಎಂ ಭದ್ರತಾ ಸಿಬ್ಬಂದಿ ಮಹಿಳೆಯ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಈ ಬಗ್ಗೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದು, ಹಲ್ಲೆ ನಡೆಸಿದ ಮಹಿಳೆಗೆ ಪೊಲೀಸರು ನೋಟಿಸ್ ನೀಡಿದ್ದಾರೆಂದು ತಿಳಿದುಬಂದಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News