ಜೈಪುರ : 17 ವರ್ಷದ ವಿದ್ಯಾರ್ಥಿನಿಯೊಂದಿಗೆ ಓಡಿಹೋಗಿದ್ದ ಶಿಕ್ಷಕಿಯನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಈ ಘಟನೆಯಲ್ಲಿ ವಿದ್ಯಾರ್ಥಿನಿಯನ್ನು ಕರೆದುಕೊಂಡು ಹೋಗಿದ್ದಕ್ಕಾಗಿ ಆಕೆಯ ವಿರುದ್ಧ ಅಪಹರಣ ಪ್ರಕರಣದ ಜೊತೆಗೆ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ.


COMMERCIAL BREAK
SCROLL TO CONTINUE READING

ಪೊಲೀಸರು ಶಿಕ್ಷಕಿಯನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆಕೆಯನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಶಿಕ್ಷಕಿ ಕರೆದೊಯ್ದ ವಿದ್ಯಾರ್ಥಿನಿಯನ್ನು ಕಾನೂನು ಪ್ರಕಾರ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಲಾಗಿದೆ. ರಾಜಸ್ಥಾನದ ಬಿಕಾನೇರ್ ಬಳಿಯ ಶ್ರೀದುಂಗಡಗಡದಲ್ಲಿ ಈ ಘಟನೆ ನಡೆದಿದೆ.   


ಇದನ್ನೂ ಓದಿ: ಜುಲೈ 18 ರಂದು ಲೈಂಗಿಕ ಕಿರುಕುಳ ಆರೋಪದ ಮೇಲೆ ಬ್ರಿಜ್ ಭೂಷಣ್‌ಗೆ ದೆಹಲಿ ನ್ಯಾಯಾಲಯ ಸಮನ್ಸ್


ಜೂನ್ 30 ರಂದು ಶಿಕ್ಷಕಿ ವಿದ್ಯಾರ್ಥಿನಿಯೊಂದಿಗೆ ನಾಪತ್ತೆಯಾಗಿದ್ದಳು. ಶಿಕ್ಷಕಿಯ ವಯಸ್ಸು 21 ವರ್ಷ. ಈ ಘಟನೆ ಅಪ್ರಾಪ್ತ ಬಾಲಕಿಯ ಕುಟುಂಬಸ್ಥರಲ್ಲಿ ಆತಂಕ ಮೂಡಿಸಿದೆ. ತಮ್ಮ ಮಗಳ ಪ್ರಕರಣದಲ್ಲಿ ಲವ್ ಜಿಹಾದ್‌ನ ಅಂಶವಿರುವ ಶಂಕೆ ಇದೆ ಎಂದು ಅಪ್ರಾಪ್ತೆಯ ಪೋಷಕರು ಆರೋಪಿಸಿದ್ದಾರೆ. ಈ ಘಟನೆಗೆ ಸ್ಥಳೀಯರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ವಿದ್ಯಾರ್ಥಿನಿಯ ಅಪಹರಣದ ಹಿಂದೆ ಲವ್ ಜಿಹಾದ್ ಅಡಗಿರುವ ಶಂಕೆ ವ್ಯಕ್ತವಾಗಿದ್ದು, ಕೂಡಲೇ ಶಿಕ್ಷಕಿಯನ್ನು ಬಂಧಿಸಬೇಕು ಎಂದು ಸ್ಥಳೀಯರು ದೊಡ್ಡ ಮಟ್ಟದ ಆಂದೋಲನ ನಡೆಸಿದರು. ಮತ್ತೊಂದೆಡೆ ವಿದ್ಯಾರ್ಥಿನಿಯೊಂದಿಗೆ ತೆರಳಿದ್ದ ಶಿಕ್ಷಕಿಯ ಕುಟುಂಬಸ್ಥರು ಸಹ ಆಕೆ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.


ಇದನ್ನೂ ಓದಿ: ಮನಿಷ್ ಸಿಸೋಡಿಯಾಗೆ ಸೇರಿದ ಕೋಟ್ಯಾಂತರ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇಡಿ


ಇಬ್ಬರೂ ಊರು ಬಿಟ್ಟ ನಂತರ ಬಿಕಾನೇರ್‌ನಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿತ್ತು. ನಾಪತ್ತೆ ಪ್ರಕರಣ ಧಾರ್ಮಿಕ ಬಣ್ಣ ಪಡೆದುಕೊಳ್ಳುತ್ತಿರುವುದನ್ನು ಮನಗಂಡ ವಿದ್ಯಾರ್ಥಿ ವಿಡಿಯೋ ಬಿಡುಗಡೆ ಮಾಡಿದ್ದ. ವೀಡಿಯೋದಲ್ಲಿ ವಿದ್ಯಾರ್ಥಿನಿ ತಾನು ಮತ್ತು ಶಿಕ್ಷಕಿ ಸಲಿಂಗಕಾಮಿ ಸಂಬಂಧ ಹೊಂದಿದ್ದು, ಶಿಕ್ಷಕಿಯೊಂದಿಗೆ ಇಷ್ಟ ಪಟ್ಟು ಬಂದಿರುವುದಾಗಿ ತಿಳಿಸಿದ್ದಳು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.