Actress Suicide: ಆತ್ಮಹತ್ಯೆಗೆ ಶರಣಾದ ಖ್ಯಾತ ನಟಿ: ಶವದ ಬಳಿ ಸಿಕ್ಕ ಡೆತ್ ನೋಟ್ ನಲ್ಲಿದೆ ಸಾವಿಗೆ ಕಾರಣ!

ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ ಧಾರಾವಾಹಿಯಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಿದ ವೈಶಾಲಿ ಥಕ್ಕರ್, ಕಳೆದ ಒಂದು ವರ್ಷದಿಂದ ಇಂದೋರ್‌ನಲ್ಲಿ ವಾಸಿಸುತ್ತಿದ್ದು, ಅಲ್ಲಿಯೇ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Written by - Bhavishya Shetty | Last Updated : Oct 16, 2022, 04:04 PM IST
    • ‘ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ’ ನಟಿ ವೈಶಾಲಿ ಠಕ್ಕರ್ ಆತ್ಮಹತ್ಯೆ
    • ಇಂದೋರ್‌ನ ತಮ್ಮ ಮನೆಯಲ್ಲಿ ವೈಶಾಲಿ ಆತ್ಮಹತ್ಯೆಗೆ ಶರಣು
    • ಶವದ ಪಕ್ಕದಲ್ಲಿಯೇ ಡೆತ್ ನೋಟ್ ಪತ್ತೆ
Actress Suicide: ಆತ್ಮಹತ್ಯೆಗೆ ಶರಣಾದ ಖ್ಯಾತ ನಟಿ: ಶವದ ಬಳಿ ಸಿಕ್ಕ ಡೆತ್ ನೋಟ್ ನಲ್ಲಿದೆ ಸಾವಿಗೆ ಕಾರಣ!  title=
Vaishali Takkar

Viashali Takkar Suicide: ‘ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ’ ನಂತಹ ದೊಡ್ಡ ಟಿವಿ ಶೋಗಳಲ್ಲಿ ಕೆಲಸ ಮಾಡಿದ್ದ ನಟಿ ವೈಶಾಲಿ ಠಕ್ಕರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸುದ್ದಿಯಿಂದ ಅವರ ಅಭಿಮಾನಿಗಳು ತೀವ್ರ ಆಘಾತಕ್ಕೊಳಗಾಗಿದ್ದಾರೆ. ವರದಿಗಳ ಪ್ರಕಾರ, ಇಂದೋರ್‌ನಲ್ಲಿ ವೈಶಾಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಶವದ ಪಕ್ಕದಲ್ಲಿಯೇ ಡೆತ್ ನೋಟ್ ಕೂಡ ಪತ್ತೆಯಾಗಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಏನೇ ಆದರೂ ವೈಶಾಲಿ ಸಾವಿನ ಸುದ್ದಿ ಚಿತ್ರರಂಗವನ್ನು ಬೆಚ್ಚಿ ಬೀಳಿಸಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ: ಗಾಡ್ ಆಫ್ ಮಾಸ್ ಬಾಲಕೃಷ್ಣಗೆ ಕನ್ನಡತಿ ರಶ್ಮಿಕಾ ಮೇಲೆ ಕ್ರಶ್...!

ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ ಧಾರಾವಾಹಿಯಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಿದ ವೈಶಾಲಿ ಥಕ್ಕರ್, ಕಳೆದ ಒಂದು ವರ್ಷದಿಂದ ಇಂದೋರ್‌ನಲ್ಲಿ ವಾಸಿಸುತ್ತಿದ್ದು, ಅಲ್ಲಿಯೇ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣದ ತನಿಖೆಯನ್ನು ತೇಜಾಜಿ ನಗರ ಪೊಲೀಸರು ಆರಂಭಿಸಿದ್ದು, ಅವರಿಗೆ ಸದ್ಯ ಪೊಲೀಸರಿಗೆ ಸೂಸೈಡ್ ನೋಟ್ ಸಿಕ್ಕಿದೆ.

ಪೊಲೀಸರ ಪ್ರಕಾರ, ಪ್ರಾಥಮಿಕ ತನಿಖೆಯಲ್ಲಿ ಈ ವಿಷಯವು ಪ್ರೀತಿಗೆ ಸಂಬಂಧಿಸಿದ್ದಾಗಿದೆ ಎಂದು ತಿಳಿದುಬಂದಿದೆ. ಸದ್ಯಕ್ಕೆ ಪೊಲೀಸರು ತನಿಖೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ನೀಡಿಲ್ಲ. ವೈಶಾಲಿ ಏಕೆ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬುದು ಸಂಪೂರ್ಣವಾಗಿ ತಿಳಿದಿಲ್ಲ. ಆದರೆ ಇದು ಪ್ರೇಮ ಪ್ರಕರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆತ್ಮಹತ್ಯೆ ಪತ್ರದಲ್ಲಿ ಏನು ಬರೆಯಲಾಗಿದೆ ಎಂಬುದು ತಿಳಿದುಬಂದಿಲ್ಲ.

ಇದನ್ನೂ ಓದಿ: ʼಸಲಾರ್‌ ಜಗತ್ತಿನ ವಿಲನ್‌ ಪೋಸ್ಟರ್‌ ರಿಲೀಸ್‌ʼ : ಪೃಥ್ವಿರಾಜ್‌ ಖಡಕ್‌ ಲುಕ್‌ಗೆ ಫ್ಯಾನ್ಸ್‌ ಶಾಕ್‌...!

ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ ಜೊತೆಗೆ ಸಸುರಲ್ ಸಿಮಾರ್ ಕಾ, ಸೂಪರ್ ಸಿಸ್ಟರ್ಸ್, ವಿಷ್ ಯಾ ಅಮೃತ್, ಮನ್ಮಹೋನಿ 2 ಮತ್ತು ಯೇ ಹೈ ಆಶಿಕಿಯಂತಹ ಅನೇಕ ಧಾರವಾಹಿಗಳಲ್ಲಿ ವೈಶಾಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News