Tumakuru: ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ!
Tumakuru Crime News: ಮೃತ ಯುವಕನಿಗೆ ಬೆಂಗಳೂರು ಮೂಲದ ಯುವತಿಯೊಂದಿಗೆ 3 ತಿಂಗಳ ಹಿಂದಷ್ಟೇ ಮದುವೆ ನಿಶ್ಚಯವಾಗಿತ್ತು. ಕೆಲ ದಿನಗಳ ಹಿಂದೆ ಸ್ನಾನಕ್ಕೆ ತೆರಳಿದ್ದ ವೇಳೆ ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿತ್ತು.
ತುಮಕೂರು: ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿದ್ದಕ್ಕೆ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಕೊಂಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ದೇವರಾಯ ಪಟ್ಟಣದಲ್ಲಿ ಕಮಲೇಶ್ (36) ಎಂಬಾತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವಕನಿಗೆ ಬೆಂಗಳೂರು ಮೂಲದ ಯುವತಿಯೊಂದಿಗೆ 3 ತಿಂಗಳ ಹಿಂದಷ್ಟೇ ಮದುವೆ ನಿಶ್ಚಯವಾಗಿತ್ತು. ಕೆಲ ದಿನಗಳ ಹಿಂದೆ ಸ್ನಾನಕ್ಕೆ ತೆರಳಿದ್ದ ವೇಳೆ ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿತ್ತು.
ಇದನ್ನೂ ಓದಿ: ವಿದ್ಯುತ್ ಅವಘಡದಿಂದ ತಾಯಿ ಮಗು ಸಾವು: ಸಚಿವ ಕೆ.ಜೆ. ಜಾರ್ಜ್ ವಿರುದ್ಧ ವಾಟಾಳ್ ಪ್ರೊಟೆಸ್ಟ್
ನಿಶ್ಚಿತಾರ್ಥದ ಉಂಗುರ ಕಳೆದುಹೋಗಿದ್ದಕ್ಕೆ ಕಮಲೇಶ್ ಚಿಂತಾಕ್ರಾಂತನಾಗಿದ್ದನಂತೆ. ಉಂಗುರಕ್ಕಾಗಿ ಆತ ತುಂಬಾ ಹುಡುಕಾಟ ನಡೆಸಿದ್ದನಂತೆ. ಆದರೆ ಎಷ್ಟೇ ಹುಡುಕಾಟ ನಡೆಸಿದರೂ ಉಂಗುರ ಸಿಕ್ಕಿರಲಿಲ್ಲ. ಈ ವಿಚಾರವನ್ನು ಮನೆಯರಿಗೆ ಹೇಳಲು ಹೆದರಿದ ಕಮಲೇಶ್ ನವೆಂಬರ್ 17ರಂದು ವಿಷ ಸೇವಿಸಿದ್ದ.
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಮಲೇಶ್ನನ್ನು ಚಿಕಿತ್ಸೆಗೆಂದು ತುಮಕೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಬುಧವಾರ(ನ.22) ಸಾವನ್ನಪ್ಪಿದ್ದಾನೆ. ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಇದನ್ನೂ ಓದಿ: ನಿಗಮ ಮಂಡಳಿ ಆಯ್ಕೆ ವಿಚಾರ: ಪಂಚರಾಜ್ಯ ಚುನಾವಣೆ ಬಳಿಕ ಮತ್ತೊಮ್ಮೆ ಚರ್ಚೆ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.