ಮೈಸೂರು: ಮೈಸೂರು ಜಿಲ್ಲೆಯ ಟಿ.ನರಸೀಪುರ ಬಳಿ ಭಾನುವಾರ ಹನುಮ ಜಯಂತಿ ಆಚರಣೆ ವೇಳೆ ಯುವ ಬ್ರಿಗೇಡ್‌ ಮತ್ತು ನಮೋ ಬ್ರಿಗೇಡ್‌ ಕಾರ್ಯಕರ್ತನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಟಿ.ನರಸೀಪುರದ ಹೊರವಲಯದಲ್ಲಿ ಹನುಮ ಜಯಂತಿ ಆಚರಣೆ ವೇಳೆ ಕ್ಷುಲ್ಲಕ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಶ್ರೀರಾಂಪುರ ಕಾಲೋನಿ ನಿವಾಸಿ ವೇಣುಗೋಪಾಲ್ ನಾಯಕ್ ಎಂಬುವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.


ಇದನ್ನೂ ಓದಿ: ಟ್ವೀಟ್‌ ಮೂಲಕ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಆರೋಪ


ವೇಣುಗೋಪಾಲ್ ನಾಯಕ್ ಮೃತದೇಹವನ್ನು ತಾಲೂಕಿನ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಯುವ ಬ್ರಿಗೇಡ್ ಮುಖಂಡ ಚಕ್ರವರ್ತಿ ಸೂಲಿಬೆಲೆಯವರು ನಾಯಕ್ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಪರಿಸ್ಥಿತಿ ಸೂಕ್ಷ್ಮವಾದ ಹಿನ್ನೆಲೆಯಲ್ಲಿ ಸೋಮವಾರ ಟಿ.ನರಸೀಪುರ ಬಂದ್ ಆಚರಿಸಲಾಯಿತು. ಮುಂಜಾಗೃತಾ ಕ್ರಮವಾಗಿ ಪಟ್ಟಣದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.


ಇದನ್ನೂ ಓದಿ: Crime News : ವಿಧಾನಸೌಧಕ್ಕೆ ಚಾಕು ತಂದ ಮಹಿಳೆ..!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.