)
Kalburgi News: ಕಳೆದ ಜೂನ್ 27ರಂದು ಜೀ ಕನ್ನಡ ನ್ಯೂಸ್ ನಲ್ಲಿ ಶಾಲಾ ಮಕ್ಕಳಿಗೆ ಲೈಂ*ಗಿಕ ಕಿರುಕುಳ ನೀಡುತ್ತಿರುವ ಇಂಗ್ಲಿಷ್ ಶಿಕ್ಷಕನ ಕುರಿತು ಸುದ್ದಿ ಪ್ರಸಾರವಾಗಿತ್ತು. ಜೊತೆಗೆ ಕಾಮುಕ ಶಿಕ್ಷಕನ ರಕ್ಷಣೆಗೆ ನಿಂತ ಶಾಲಾ ಮುಖ್ಯ ಶಿಕ್ಷಕ ಹಾಗೂ ಸಿಬ್ಬಂದಿಯ ಆಡಿಯೋವನ್ನು ಜೀ ಕನ್ನಡ ನ್ಯೂಸ್ ಪ್ರಸಾರ ಮಾಡಿತ್ತು. ಜೀ ಕನ್ನಡ ನ್ಯೂಸ್ ವರದಿಗೆ ಎಚ್ಚೆತ್ತುಕೊಂಡ ಶಾಲಾ ಶಿಕ್ಷಣ ಇಲಾಖೆ ಆತನನ್ನು ಅಮಾನತು ಮಾಡಿ ಆದೇಶ ಹೊರಡಿಸಿತ್ತು. ಇದೀಗ ಕೊನೆಗೂ, ಕಾಮುಕ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.
ಕಲಬುರ್ಗಿ ಜಿಲ್ಲೆಯ ಖಣದಾಳದ ಸರ್ಕಾರಿ ಪ್ರೌಢ ಶಾಲೆಯ ಆಂಗ್ಲ ಭಾಷಾ ಶಿಕ್ಷಕ ಬಸವರಾಜ್ ದ್ಯಾಮಾ ವಿರುದ್ಧ ಪರಹತಬಾದ್ ಠಾಣೆಯಲ್ಲಿ ಪೋಕ್ಸೋ ಪ್ರಕರಣವನ್ನು ದಾಖಲಿಸಲಾಗಿದೆ.
ಏನಿದು ಪ್ರಕರಣ?
ಕಲಬುರಗಿ ಜಿಲ್ಲೆಯ ಖಣದಾಳ ತಾಲೂಕಿನ ಸರ್ಕಾರಿ ಫ್ರೌಡ ಶಾಲೆಯಲ್ಲಿ ಆಂಗ್ಲ ಭಾಷೆ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸವರಾಜ್ ದ್ಯಾಮಾ ಎಂಬ ಶಿಕ್ಷಕ ಅಲ್ಲಿನ ವಿದ್ಯಾರ್ಥಿನಿಯಾರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಎಂಬ ದೂರುಗಳು ಕೇಳಿಬಂದಿದ್ದವು. ಇದಲ್ಲದೆ, ವಿದ್ಯಾರ್ಥಿನಿಯರನ್ನು ಕಂಪ್ಯೂಟರ ರೂಮ್'ಗೆ ಕರೆದುಕೊಂಡು ಹೋಗಿ ಅಸಭ್ಯವಾಗಿ ವರ್ತಿಸುತ್ತಿದ್ದ. ವಿದ್ಯಾರ್ಥಿಗಳ ಮೈ ಮುಟ್ಟಿ ಅಸಹ್ಯವಾಗಿ ಮಾತನಾಡುತ್ತಿದ್ದ ಎಂಬ ಆರೋಪಗಳು ಕೂಡ ಕೇಳಿಬಂದಿದ್ದವು. ಶಿಕ್ಷಕನ ವರ್ತನೆಗೆ ಬೇಸತ್ತ ವಿದ್ಯಾರ್ಥಿಗಳು ಪೋಷಕರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ಈ ಬಗ್ಗೆ ಪೋಷಕರು ಶಾಲೆಗೆ ಬಂದು ಶಿಕ್ಷಕನಿಗೆ ವಾರ್ನಿಂಗ್ ನೀಡಿದ್ದರೂ ಸಹ ಬುದ್ದಿ ಕಲಿಯದ ಕಾ*ಮುಕ ಶಿಕ್ಷಕ ವಿದ್ಯಾರ್ಥಿಗಳೊಂದಿಗೆ ಅಸಭ್ಯ ವರ್ತನೆಯನ್ನು ಮುಂದುವರೆಸಿದ್ದ.. ಈ ಕುರಿತು ಶಾಲಾ ವಿದ್ಯಾರ್ಥಿಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದರು.
ಈ ಘಟನೆಗೆ ಸಂಬಂಧಿಸಿದಂತೆ ಜೂನ್ 26, 2025ರಂದು ಜೀ ಕನ್ನಡ ನ್ಯೂಸ್ ಸುದ್ದಿ ಬಿತ್ತರಿಸಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತಿದ್ದ ಕಲಬುರಗಿ ದಕ್ಷಿಣ ವಲಯದ ಕ್ಷೇತ್ರ ಶಿಕ್ಷನಾಧಿಕಾರಿಗಳು ತನಿಖೆ ನಡೆಸಿ ಶಿಸ್ತು ಕ್ರಮ ಜರುಗಿಸಿದ್ದರು. ತಕ್ಷಣದಿಂದಲೇ ಜಾರಿಗೆ ಬರುವಂತೆ ಕಾ*ಮುಕ ಶಿಕ್ಷಕ ಬಸವರಾಜ ದ್ಯಾಮಾ ನನ್ನು ಸೇವೆಯಿಂದ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದರು.
ಇದೀಗ ಕಾ*ಮುಕ ಶಿಕ್ಷಕನ ರಕ್ಷಣೆಗೆ ನಿಂತಿದ್ದ ಶಾಲೆಯ ಮುಖ್ಯ ಶಿಕ್ಷಕ ರಮೇಶ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾಧಿಕಾರಿ ಮಂಜುಳಾ ಪಾಟೀಲ್ ನೀಡಿರುವ ದೂರಿನ ಮೇರೆಗೆ ಮುಖ್ಯ ಶಿಕ್ಷಕ ರಮೇಶ್ ನನ್ನು ಎರಡನೇ ಆರೋಪಿಯಾಗಿ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣದ ಮೊದಲ ಆರೋಪಿ ಬಸವರಾಜ್ ದ್ಯಾಮನನ್ನು ಈ ಹಿಂದೆಯೇ ಅಮಾನತುಗೊಳಿಸಿದ ಶಿಕ್ಷಣ ಇಲಾಖೆ ಈಗ ಎರಡನೇ ಆರೋಪಿ ಮುಖ್ಯ ಶಿಕ್ಷಕ ರಮೇಶ್ ಅಮಾನತ್ತಿಗೆ ಸಾರ್ವಜನಿಕರ ಆಗ್ರಹಿಸಿದ್ದಾರೆ.