ಬೆಂಗಳೂರು : ಅಪ್ರಾಪ್ತೆ ಮೇಲೆ ಸಂಬಂಧಿಕನೇ ಅತ್ಯಾಚಾರ ಎಸಗಿರುವ ಘಟನೆ ರಾಜಧಾನಿಯ ತಲಘಟ್ಟಪುರದಲ್ಲಿ ನಡೆದಿದ್ದು, ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಹೊಯ್ಸಳ ಬೀಟ್‌ನಲ್ಲಿದ್ದಾಗ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಆರೋಪಿಯನ್ನು ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ. ವೇಣುಗೋಪಾಲ್ ಬಂಧಿತ ಆರೋಪಿಯಾಗಿದ್ದಾನೆ. ತಲಘಟ್ಟಪುರದಲ್ಲಿ ಅಪ್ರಾಪ್ತೆ ಕುಟುಂಬ ವಾಸವಾಗಿದ್ದು ಜೀವನಕ್ಕಾಗಿ ಈಕೆಯ ಪೋಷಕರು ಕೂಲಿ ಕೆಲಸ ಮಾಡುತ್ತಿದ್ದರು. ಸಂಬಂಧಿಕನೇ ಆಗಿರುವ ಆರೋಪಿ ನಿನ್ನೆ ರಾತ್ರಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದು ಆತ್ಯಾಚಾರವೆಸಗಿದ್ದಾನೆ ಎಂದು ಬಾಲಕಿಯ ಕುಟುಂಬ ಆರೋಪಿಸಿದೆ.


ಇದನ್ನೂ ಓದಿ: Tumkuru News : ಕೋಳಿಗೂಡಿನಲ್ಲಿ ಸೇರಿಕೊಂಡಿದ್ದ 6 ಅಡಿ ಉದ್ದದ ನಾಗರಹಾವು


ಈ ಬಗ್ಗೆ ದಕ್ಷಿಣ ವಿಭಾಗ ಡಿಸಿಪಿ ಕೃಷ್ಣಕಾಂತ್ ಹೇಳಿಕೆ ನೀಡಿದ್ದು, ತಲಘಟ್ಟಪುರದಲ್ಲಿ ನಿನ್ನೆ ರಾತ್ರಿ ಹೊಯ್ಸಳ ಬೀಟ್‌ನಲ್ಲಿದ್ದಾಗ ಅನುಮಾನಾಸ್ಪದವಾಗಿ ಹುಡುಗ ಹುಡುಗಿ ಓಡಾಡುತ್ತಿದ್ದರು. ರಾತ್ರಿ ಮೂರು ನಾಲ್ಕು ಗಂಟೆ ಸಂಧರ್ಭದಲ್ಲಿ ನಿರ್ಜನ ಪ್ರದೇಶದಲ್ಲಿದ್ದರು. ಪರಿಶೀಲನೆ ನಡೆಸಿದಾಗ ಸಾಕಷ್ಟು ಅನುಮಾನ ಬಂದಿತ್ತು. ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗಿತ್ತು. ಬಾಲಕಿ ಆರೋಪಿಯ ಸಂಬಂಧಿ ಎಂದು ಹೇಳಲಾಗುತ್ತಿದೆ ಅದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಈ ಬಗ್ಗೆ ತಲಘಟ್ಟಪುರ ಪೊಲೀಸ್ ಠಾಣೆ ದೂರು ಕೂಡ ದಾಖಲು ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.