ಮೈಸೂರು: ನಾಡಹಬ್ಬ ದಸರಾಗೆ ಸಜ್ಜಾಗಿರುವ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಡಗರ ಸಂಭ್ರಮ ಮನೆಮಾಡಿದೆ. ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 8ರವರೆಗೆ ನಡೆಯುವ ದಸರಾ ಉತ್ಸವಕ್ಕೆ ಮೈಸೂರು ಸಕಲ ರೀತಿಯಲ್ಲೂ ಸಿದ್ಧವಾಗುತ್ತಿದೆ. 


COMMERCIAL BREAK
SCROLL TO CONTINUE READING

ಮೈಸೂರು ದಸರಾ... ಎಷ್ಟೊಂದು ಸುಂದರ... ಎಂಬ ಗೀತೆಯಂತೆ 'ಮೈಸೂರು ದಸರಾ' ಪ್ರತಿ ವರ್ಷದಂತೆ ಈ ವರ್ಷವೂ ಅದೇ ವೈಭವವನ್ನು ಸಾರಲು ಸಜ್ಜಾಗಿದೆ. ನಾಳೆ ಬೆಳಗ್ಗೆ 9.39ರಿಂದ 10.25ಕ್ಕೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಖ್ಯಾತ ಸಾಹಿತಿ ಡಾ.ಎಸ್.ಎಲ್. ಭೈರಪ್ಪ ಅವರಿಂದ ಪುಷ್ಪಾರ್ಚನೆ ನೆರವೇರಿಸುವ ಮೂಲಕ ನಾಡಹಬ್ಬ ದಸರಾ ಉತ್ಸವಕ್ಕೆ ಚಾಲನೆ ದೊರೆಯಲಿದೆ.


ಮೈಸೂರು ಅರಮನೆಯಲ್ಲಿ ಸೆಪ್ಟೆಂಬರ್ 29ರಿಂದ ರಾಜಮನೆತನದ ಖಾಸಗಿ ದರ್ಬಾರ್‌ ನಡೆಯಲಿದೆ. ದಸರಾ ದಿನಗಳಲ್ಲಿ ಯದುವೀರ್ ಒಡೆಯರ್ ಈ ರತ್ನಖಚಿತ ಸಿಂಹಾಸನದಲ್ಲಿ ಕುಳಿತು ಖಾಸಗಿ ದರ್ಬಾರ್​ ನಡೆಸುತ್ತಾರೆ.


ಅಕ್ಟೋಬರ್ 1 ರಿಂದ ಯುವ ದಸರಾ ಉತ್ಸವಕ್ಕೆ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಪಿ.ವಿ. ಸಿಂಧು ಚಾಲನೆ ನೀಡಲ್ಲಿದ್ದಾರೆ.


ದಸರಾ ಉತ್ಸವಕ್ಕಾಗಿ ಸಾಂಸ್ಕೃತಿಕ ನಗರಿ ಮೈಸೂರು ನವ ವಧುವಿನಂತೆ ಸಿಂಗಾರಗೊಂಡಿದ್ದು, 100 ಕಿ.ಮೀ. ಗಿಂತ ಹೆಚ್ಚು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಒಟ್ಟು 91 ವೃತ್ತಗಳಲ್ಲಿ 12 ಪ್ರತಿಮೆಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.


ದಸರಾ ಮಹೋತ್ಸವದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು  212 ಸಿಸಿ ಕ್ಯಾಮರಾಗಳನ್ನು ಅಳವಡಿಸಿದ್ದು, ಯಾವುದೇ ಅಹಿಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಜಂಬೂ ಸವಾರಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ಡ್ರೋಣ್ ಕ್ಯಾಮರಾಗಳನ್ನೂ ಬಳಸಲಾಗುವುದು. ಇದಲ್ಲದೆ ಮೈಸೂರಿನಾದ್ಯಂತ ಒಟ್ಟು ಸಾರ್ವಜನಿಕರು ಅಳವಡಿಸಿರುವ 11,917 ಸಿಸಿ ಕ್ಯಾಮರಾಗಳ‌ ದೃಶ್ಯಗಳ ಸಹಕಾರ ಪಡೆಯಲು ನಿರ್ಧರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕೆ.ಟಿ. ಬಾಲಕೃಷ್ಣ ತಿಳಿಸಿದ್ದಾರೆ.