ಸಾವಿತ್ರಿಬಾಯಿ ಪುಲೆ ಭಾರತದ ಇತಿಹಾಸದಲ್ಲಿ ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ದಾಖಲಾಗಿದ್ದಾರೆ. ಪತಿ ಜ್ಯೋತಿಬಾಪುಲೆಯವರ ಜೊತೆ ಸೇರಿ ಮಹಿಳೆಯರ ಹಾಗೂ ಶೋಷಿತರ ಶಿಕ್ಷಣಕ್ಕಾಗಿ ಶ್ರಮಿಸಿದರು ಅಂತಹ ಮಹಾನ್ ಮಹಿಳೆಗೆ ಇಂದು ಜನ್ಮದಿನದ ಸಂಭ್ರಮ. 


COMMERCIAL BREAK
SCROLL TO CONTINUE READING

ಜನವರಿ 3, 1831ರಲ್ಲಿ ಮಹಾರಾಷ್ಟ್ರದ ಸತಾರಜಿಲ್ಲೆಯ 'ನೈಗಾಂನ್'ನಲ್ಲಿ ಜನಿಸಿದ ಅವರು ಜ್ಯೋತಿಬಾಫುಲೆಯವರನ್ನು ಲಗ್ನವಾದರು. ಬಾಲ್ಯ ವಿವಾಹ ರೂಢಿಯಲ್ಲಿದ್ದ ಕಾಲದಲ್ಲಿ ಸಾವಿತ್ರಿಬಾಯಿ ಫುಲೆ ಮದುವೆಯಾದಾಗ ಅವರಿಗೆ 8 ವರ್ಷ ವಯಸ್ಸು, ಜ್ಯೋತಿಬಾಫುಲೆ ಅವರಿಗೆ 13 ವರ್ಷ ವಯಸ್ಸಾಗಿತ್ತು. ಸಾವಿತ್ರಿಬಾಯಿ ಮನೆಯೇ ಮೊದಲ ಪಾಠಶಾಲೆ, ಪತಿ ಜ್ಯೋತಿಬಾ ಅವರೇ ಗುರುಗಳು. 


1847ರಲ್ಲಿ ತಮ್ಮ 17ನೇ ವಯಸ್ಸಿನಲ್ಲಿ ಸಾವಿತ್ರಿಬಾಯಿ ಶ್ರೀಮತಿ ಮಿಚಲ್ ಅವರ ನಾರ್ಮಲ್ ಶಾಲೆಯಲ್ಲಿ ಶಿಕ್ಷಕರ ತರಬೇತಿ ಪಡೆದರು. ಸಾವಿತ್ರಿಬಾಯಿ ಶ್ರೀ ಭಿಡೆಯವರ ಮನೆಯಲ್ಲಿ ಆರಂಭಗೊಂಡ ಕನ್ಯಾಶಾಲೆಯ ಪ್ರಧಾನ ಶಿಕ್ಷಕಿಯಾದರು. ಆ ಕಾಲದಲ್ಲಿ ಹಿಂದೂ ಸ್ರ್ರೀಯೊಬ್ಬಳು ಶಿಕ್ಷಕಿಯಾಗುವುದು ಧರ್ಮಕ್ಕೂ, ಸಮಾಜಕ್ಕೂ ದ್ರೋಹ ಬಗೆದಂತೆ. ಅವರು ಪಾಠಶಾಲೆಗೆ ಹೋರಟಾಗ ಕೆಲವರು ಕೇಕೇ ಹಾಕಿ ನಗುತ್ತಿದ್ದರು, ಅವರ ಮೇಲೆ ಕೆಸರು, ಸಗಣಿ ಎರಚಿ, ಕಲ್ಲನೂ ತೂರುತ್ತಿದ್ದರು. ಇದರಿಂ ಧೃತಿಗೆಡದ ಸಾವಿತ್ರಿಬಾಯಿಯವರು ಯಾವಾಗಲೂ ಒಂದು ಸೀರೆಯೊಂದನ್ನು ತಮ್ಮ ಬ್ಯಾಗಿನಲ್ಲಿ ಇಟ್ಟುಕೊಳ್ಳುತ್ತಿದ್ದರು.


ದಾರಿಯಲ್ಲಿ ಕೆಸರು, ಸಗಣಿ ಎರಚಿಸಿಕೊಂಡಾಗ, ಬೇಸರ ಗೊಳ್ಳದೆ- ನಮ್ಮ ಮೇಲೆ ಎರಚುವ ಸೆಗಣಿ, ತೂರುವ ಕಲ್ಲುಗಳನ್ನು ಹೂಗಳೆಂದು ಪರಿಭಾವಿಸಿ, ಶಾಲೆಯಲ್ಲಿ ಮಕ್ಕಳು ಬರುವುದರೊಳಗೆ ಬ್ಯಾಗಿನಲ್ಲಿ ಇಟ್ಟುಕೊಂಡಿರುತ್ತಿದ್ದ ಮತ್ತೊಂದು ಸೀರೆಯನ್ನು ಉಟ್ಟುಕೊಂಡು ಪಾಠಕ್ಕೆ ಅಣಿಯಾಗುತ್ತಿದ್ದರು. 


ಮುಂದೆ ಜೀವನವನ್ನು ಬಹುಸಂಖ್ಯಾತ ಸಮುದಾಯದ ದಲಿತರು, ಮಹಿಳೆಯರು, ಆದಿವಾಸಿಗಳು, ಹಿಂದುಳಿದವರು, ಅಲ್ಪಸಂಖ್ಯಾತರ ಹಕ್ಕುಗಳಿಗಾಗಿ ಮುಡಿಪಾಗಿಟ್ಟರು. ಆದರೆ ಅವರ ಈ ಎಲ್ಲ ಶೋಷಿತ ಸಮುದಾಯಗಳಿಗೆ ನೀಡಿರುವ ಕೊಡುಗೆಯನ್ನು ಸಾರ್ವಜನಿಕ ವಲಯ ಕಡೆಗಣಿಸಿದೆ ತಮ್ಮ ಪತಿ ಜೋತಿಭಾ ಫುಲೆ ಜೊತೆ ಸೇರಿ ಪ್ರಾರಂಭಿಸಿದ ಮೊದಲ ಹೆಣ್ಣು ಮಕ್ಕಳ ಶಾಲೆಗೆ ಮೊದಲ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿದರು. ಆದ್ದರಿಂದ ಅವರನ್ನು ಭಾರತದ ಮೊದಲ ಶಿಕ್ಷಕಿ ಎಂದು ಕರೆಯುತ್ತಾರೆ. 1848 ರಿಂದ 1852ರ ಅವಧಿಯಲ್ಲಿ 18 ಪಾಠಶಾಲೆಗಳನ್ನು ಫುಲೆ ದಂಪತಿಗಳು ತೆರೆದರು.


ಈ ಪಾಠಶಾಲೆಗಳ ಶಡಳಿತದ ಜವಾಬ್ದಾರಿಯನ್ನು ಸಾವಿತ್ರಿಬಾಯಿ ನಿರ್ವಹಿಸಬೇಕಾಗಿತ್ತು. ಶಿಕ್ಷಕಿ, ಸಂಚಾಲಕಿ, ಮುಖ್ಯೋಪಾಧ್ಯಾಯಿನಿ ಮುಂತಾದ ಕೆಲಸಗಳನ್ನು ಇವರು ಸಮರ್ಪಕವಾಗಿ ನಿಭಾಯಿಸುವುದರ ಮೂಲಕ ಜ್ಯೋತಿಬಾಫುಲೆ ಅವರಿಗೆ ನೆರವಾದರು. ಬ್ರಿಟಿಷ್ ಸರ್ಕಾರದವರು ಅವರ ಕೆಲಸ ಕಾರ್ಯಗಳನ್ನು ಕೂಲಂಕುಷವಾಗಿ ಅವಲೋಕಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದರು.


ಸಾಮಾಜಿಕ ಬದಲಾವಣೆಯನ್ನು ತಳಮಟ್ಟದಿಂದಲೇ ಬದಲಾಗಬೇಕೆಂದು ಬಯಸಿದ್ದ ಅವರು, ಆಗಿನ ಕಟು ಸಂಪ್ರದಾಯ ನೀತಿ ಪದ್ಧತಿಗಳನ್ನು ತಿರಸ್ಕರಿಸಿದರು. ಅವರ  ಕಾರ್ಯಗಳಿಗೆ ಪತಿ ಜ್ಯೋತಿ ಬಾಫುಲೆ ಬೆಂಬಲವಾಗಿ ನಿಂತರು. ಸಾವಿತ್ರಿಬಾಯಿಯವರು ಹಳೆಯ ಸಂಪ್ರದಾಯಗಳಿಗೆ ಅಂತ್ಯಹಾಡಿ, ಅಂತರಜಾತಿ ವಿವಾಹವನ್ನು ಪ್ರೋತ್ಸಾಹಿಸಿ ಅಂತ ದಂಪತಿಗಳಿಗೆ ಆಶ್ರಯವನ್ನು ನೀಡಿದರು. ಇಂದು ಭಾರತದ ಮಹಿಳೆಯರ ಸಮಾಜದ ಎಲ್ಲಾ ಕ್ಷೇತ್ರದಲ್ಲಿ ಸಮಾನತೆಯ ಹಕ್ಕಿಗೆ ಕಾರಣರಾದವರು ಮಾತೆ ಸಾವಿತ್ರಿ ಬಾಪುಲೆ. ಇವರು ಸಮಾಜದ ಅನಿಷ್ಟ ಪದ್ದತಿಗಳಾದ ಬಾಲ್ಯ ವಿವಾಹ, ಸತಿಸಹಗಮನ ಪದ್ದತಿ, ಕೇಶ ಮುಂಡನೆ ವಿರುದ್ದ ಹೋರಾಟ ಮಾಡಿ, ಮಹಿಳೆಯರಿಗೋಸ್ಕರ ಪ್ರ ಪ್ರಥಮವಾಗಿ ಶಾಲೆಗಳು, ಅಬಲಾಶ್ರಮ ಸ್ಥಾಪನೆ ಮಾಡಿದ ಕೀತಿ೯ ಇವರಿಗೆ ಸಲ್ಲುತ್ತದೆ.