ನವದೆಹಲಿ: ಕಂಬಳಕ್ಕೆ ತಡೆ ನೀಡುವಂತೆ ಪ್ರಾಣಿ ದಯಾ ಸಂಸ್ಥೆ(ಪೇಟಾ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇತ್ಯರ್ಥಗೊಳಿಸಿ ಆದೇಶ ಹೊರಡಿಸಿದೆ.


COMMERCIAL BREAK
SCROLL TO CONTINUE READING

ಕಂಬಳ ವಿಧೆಯಕಕ್ಕೆ ರಾಷ್ಟ್ರಪತಿ ಸಹಿ ಹಿನ್ನೆಲೆಯಲ್ಲಿ ಸುಪ್ರಿಂಕೊರ್ಟ್ ನಲ್ಲಿ ಪೇಟಾ ಸಲ್ಲಿಸಿದ್ದ ಅರ್ಜಿಯನ್ನು ಮು. ನ್ಯಾ. ದೀಪಕ್ ಮಿಶ್ರಾ ನೇತೃತ್ವದ ತ್ರಿ ಸದಸ್ಯ ಪೀಠ ಇತ್ಯರ್ಥಗೊಳಿಸಿದೆ. 


ಪೇಟಾ ಸಲ್ಲಿಸಿದ್ದ ಅರ್ಜಿ ಹಿನ್ನೆಲೆಯಲ್ಲಿ ಕಂಬಳಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ಸುಗ್ರೀವಾಜ್ಞೆ ಬಳಿಕ ಮಸೂದೆಗೆ ತಿದ್ದುಪಡಿ ತಂದು ಉಭಯ ಸದನಗಳಲ್ಲಿ ಒಪ್ಪಿಗೆ ಪಡೆದಿದ್ದ ಸರ್ಕಾರ ಮಸೂದೆಯನ್ನು ರಾಜ್ಯಪಾಲರಿಗೆ ಕಳುಹಿಸಿತ್ತು. 


ರಾಜ್ಯಪಾಲ ವಜುಭಾಯಿ ವಾಲಾ ತಿದ್ದುಪಡಿಯನ್ನು ರಾಷ್ಟ್ರಪತಿ ಅಂಕಿತಕ್ಕೆ ಕಳುಹಿಸಿದ್ದರು. ವಿಧೇಯಕ ತಿದ್ದುಪಡಿಯಾದ ಏಳು ತಿಂಗಳ ಬಳಿಕ ಅಂದರೆ ಫೆಬ್ರವರಿ ತಿಂಗಳಿನಲ್ಲಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಕಂಬಳ ತಿದ್ದುಪಡಿ ವಿಧೇಯಕಕ್ಕೆ ಅಂಕಿತ ಹಾಕಿದ್ದರು.  ಇದೀಗ ವಿಧೇಯಕ ಕಾಯ್ದೆಯಾಗಿ ಜಾರಿಯಾಗಿದೆ. ಕಂಬಳ ಕಾಯ್ದೆಯಾದ ಹಿನ್ನೆಲೆ ಸುಗ್ರಿವಾಜ್ಞೆ ಅಸ್ತಿತ್ವದಲ್ಲಿಲ್ಲ ಎಂದು ಸ್ಪಷ್ಟಪಡಿಸಿದ ಸುಪ್ರೀಂಕೋರ್ಟ್ ಸುಗ್ರಿವಾಜ್ಞೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಇತ್ಯರ್ಥಗೊಳಿಸಿದೆ.