ಬೆಂಗಳೂರು: ಯಕ್ಷಗಾನದ ಮೇರು ಪ್ರತಿಭೆ ಚಿಟ್ವಾಣಿ ರಾಮಚಂದ್ರ ಹೆಗಡೆ ಮಂಗಳವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. 


COMMERCIAL BREAK
SCROLL TO CONTINUE READING

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಚಿಟ್ವಾಣಿ ರಾಮಚಂದ್ರ ಹೆಗಡೆ ಮಣಿಪಾಲ ಕೆಎಂಸಿ ಯಲ್ಲಿ ಕಳೆದ ಐದು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲದೆ ಚಿಟ್ವಾಣಿ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು.


ಇವರ ಸಾವಿಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವಾರು ಗಣ್ಯ ವ್ಯಕ್ತಿಗಳು ಸಂತಾಪ ಸೂಚಿಸಿದ್ದಾರೆ.


ಮೂಲತಃ ಉತ್ತರ ಕನ್ನಡ ಜಿಲ್ಲೆಯ ಚಿಟ್ವಾಣಿ 1933ರ ಜನವರಿ 1 ರಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಜನಿಸಿದರು. ಏಳು ವರ್ಷ ವಯಸ್ಸಿದ್ದಾಗಲೇ ಯಕ್ಷಗಾನಕ್ಕೆ ಧುಮುಕಿದ ಹೆಗಡೆ, 14ನೇ ವಯಸ್ಸಿಗೆ ಪ್ರಮುಖ ಪಾತ್ರಗಳನ್ನು ನಿರ್ವಹಿಸಲು ಪ್ರಾರಂಭಿಸಿದ್ದರು. ತಮ್ಮ 84ನೇ ಇಳಿ ವಯಸ್ಸಿನಲ್ಲೂ ಅವರು ಯಕ್ಷಗಾನದ ಕುಣಿತ ಹಾಕುವುದನ್ನು ತಪ್ಪಿಸಿರಲಿಲ್ಲ.


ಚಿಟ್ಟಾಣಿ ರಾಮಚಂದ್ರ ಹೆಗಡೆಯವರದ್ದು 'ಬಡಗು ತಿಟ್ಟು' ಯಕ್ಷಗಾನ ಶೈಲಿ. ಆದರೆ, ರಾಮಚಂದ್ರ ಹೆಗಡೆಯವರ ಕುಣಿತ ಎಷ್ಟು ಜನಪ್ರಿಯತೆ ಪಡೆದಿದೆ ಎಂದರೆ ಅವರ ಕುಣಿತವನ್ನು 'ಚಿಟ್ಟಾಣಿ ಘರಾನಾ' ಎಂದೇ ಕರೆಯಲಾಗುತ್ತಿದೆ. ಚಿಟ್ಟಾಣಿ ಮಾಡಿರುವ 'ಕೌರವ', ದುಷ್ಟಬುದ್ಧಿ', 'ಭಸ್ಮಾಸುರ', 'ಕೀಚಕ', 'ಕರ್ಣ', 'ರುದ್ರಕೋಪ', 'ಕಂಸ' ಮೊದಲಾದ ಪಾತ್ರಗಳು ಯಕ್ಷಗಾನ ವಲಯದಲ್ಲಿ ಬಹಳ ಜನಪ್ರಿಯವಾಗಿವೆ.
ಚಿಟ್ಟಾಣಿ ರಾಮಚಂದ್ರ ಹೆಗಡೆಯವರು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು. ವಿಶೇಷವೆಂದರೆ, ಈ ಪ್ರಶಸ್ತಿ ಪಡೆದ ಮೊದಲ ಯಕ್ಷಗಾನ ಕಲಾವಿದರು ಅವರಾಗಿದ್ದಾರೆ.


ಇವರ ಕಲೆಗೆ ಹಲವಾರು ಪ್ರಶಸ್ತಿ-ಪುರಸ್ಕಾರಗಳು ದೊರೆತಿವೆ:


  • 2009 - ಶಿವರಾಮ್ ಕಾರಂತ್ ಪ್ರನುಡಿ

  • 2012 - ಪದ್ಮಶ್ರೀ

  • 2004 - ಜನಪದಶ್ರೀ

  • 2013 - ಕೆರೆಮನೆ ಶಿವರಾಮ ಹೆಗಡೆ ಪ್ರಶಸ್ತಿ

  • 1991 - ರಾಜ್ಯೋತ್ಸವ ಪ್ರಶಸ್ತಿ

  • 2009 - ಕಾರ್ಕಿ ವೆಂಕಟರಮಣ ಶಾಸ್ತ್ರಿ ಪ್ರಶಸ್ತಿ

  • 2012 - ಆಳ್ವಾಸ್ ನುಡಿಸಿರಿ